Homeಅಂತರಾಷ್ಟ್ರೀಯ2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ 'ನರಮೇಧ' ಎಂದ ವರದಿ

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

- Advertisement -
- Advertisement -

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ.

ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ 20,000ಕ್ಕೂ ಹೆಚ್ಚು ಮಕ್ಕಳನ್ನು ಹತ್ಯೆ ಮಾಡಿದ್ದು, 44,000ಕ್ಕೂ ಹೆಚ್ಚು ಮಕ್ಕಳನ್ನು ಗಾಯಗೊಳಿಸಿವೆ ಎಂದು ಆಯೋಗ ವಿವರಿಸಿದೆ.

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸಲು 2021ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಆಯೋಗ ತನ್ನ ವರದಿಯಲ್ಲಿ, ಇಸ್ರೇಲ್ ಮತ್ತು ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಗಳ ಪ್ರಮಾಣ ಮತ್ತು ಸ್ವರೂಪವು “ಪ್ಯಾಲೆಸ್ತೀನ್ ಮಕ್ಕಳ ದೊಡ್ಡ ಮಟ್ಟದ ಸಾವು, ಗಾಯ ಮತ್ತು ಆಘಾತಕ್ಕೆ” ಕಾರಣವಾಗಿದೆ ಎಂದು ಹೇಳಿದೆ.

ಅಕ್ಟೋಬರ್ 2025ರ ಕದನ ವಿರಾಮದ ನಂತರವೂ ಮಕ್ಕಳು ಕೊಲ್ಲಲ್ಪಡುತ್ತಿದ್ದಾರೆ ಮತ್ತು ತೀವ್ರವಾಗಿ ಗಾಯಗೊಳ್ಳುತ್ತಿದ್ದಾರೆ. ಇಸ್ರೇಲ್ ಕದನ ವಿರಾಮವನ್ನು ಮತ್ತು ಅಂತಾರಾಷ್ಟ್ರೀಯ ಕಾನೂನಿನಡಿ ಪ್ಯಾಲೆಸ್ತೀನ್ ಮಕ್ಕಳಿಗೆ ನೀಡಬೇಕಾದ ರಕ್ಷಣೆಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಎಂದು ಆಯೋಗದ ಅಧ್ಯಕ್ಷರಾದ ಶ್ರೀನಿವಾಸನ್ ಮುರಳಿಧರ್ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಮಕ್ಕಳನ್ನು ಬಂಧಿಸಿ, ಬಂಧನ ಕೇಂದ್ರಗಳಲ್ಲಿ ಚಿತ್ರಹಿಂಸೆ ಮತ್ತು ಇತರ ರೀತಿಯ ದುರ್ನಡತೆಗೆ ಒಳಪಡಿಸಲಾಗಿದೆ ಎಂದು ಆಯೋಗ ಪತ್ತೆಹಚ್ಚಿದೆ. ಅಲ್ಲದೆ, ಬಂಧನದಲ್ಲಿರುವ ಕೆಲವು ವ್ಯಕ್ತಿಗಳು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅದು ತಿಳಿಸಿದೆ.

ಇಸ್ರೇಲಿ ಆಕ್ರಮಣ ಮತ್ತು ಹಗೆತನದ ದೀರ್ಘಕಾಲದ, ಜನಾಂಗೀಯ, ಲಿಂಗ ಆಧಾರಿತ ಮತ್ತು ತಲೆಮಾರುಗಳ ನಡುವಿನ ಸ್ವರೂಪದಲ್ಲಿ ಬೇರೂರಿರುವ “ಸಾಮೂಹಿಕ ಅವಮಾನ ಮತ್ತು ದಬ್ಬಾಳಿಕೆಯ” ಭಾಗವಾಗಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯವನ್ನು ಬಳಸಲಾಗಿದೆ ಎಂದೂ ಸಹ ಆಯೋಗ ಆರೋಪಿಸಿದೆ.

ನವಜಾತ ಶಿಶುಗಳು ಮತ್ತು ಹೆರಿಗೆ ಆರೈಕೆ ಕೇಂದ್ರಗಳಿಗೆ ಉಂಟಾದ ಹಾನಿಯು ನವಜಾತ ಶಿಶುಗಳ ಬದುಕುಳಿಯುವಿಕೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅದೇ ಸಮಯದಲ್ಲಿ, ಇಸ್ರೇಲ್ ವಿಧಿಸಿದ ದಿಗ್ಬಂಧನ ಮತ್ತು ಮುತ್ತಿಗೆಯಿಂದ ಉಂಟಾದ ಹಸಿವು ಮಕ್ಕಳ ಸಾವುಗಳಿಗೆ ಮತ್ತು ಆರೋಗ್ಯ ಪರಿಸ್ಥಿತಿಗಳು ಕ್ಷೀಣಿಸಲು ಕಾರಣವಾಗಿದೆ ಎಂದು ಆಯೋಗವು ತಿಳಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯ ಅನಾಥಾಶ್ರಮಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಧ್ವಂಸಗೊಳಿಸಲಾಗಿದೆ ಅಥವಾ ನಾಶಪಡಿಸಲಾಗಿದೆ, ಇದು ಮಕ್ಕಳ ಬೆಳವಣಿಗೆ ಮತ್ತು ಆರೈಕೆಯ ಲಭ್ಯತೆಗೆ ಅಡ್ಡಿಪಡಿಸಿದೆ ಎಂದು ಆಯೋಗ ಹೇಳಿದೆ.

ಮಕ್ಕಳಲ್ಲಿ ಮಾನಸಿಕ ಹಾನಿ ವ್ಯಾಪಕವಾಗಿದೆ ಮತ್ತು ದೀರ್ಘಕಾಲದವರೆಗೆ ಇರುತ್ತದೆ ಎಂದು ತಿಳಿಸಿದ ಆಯೋಗವು, ಇದನ್ನು “ಆಕ್ರಮಿತ ಮನಸ್ಸು” (occupied psyche) ಎಂದು ಬಣ್ಣಿಸಿದೆ. ಇದರಲ್ಲಿ ಮಕ್ಕಳು ಆಟವಾಡುವ, ಕಲ್ಪಿಸಿಕೊಳ್ಳುವ, ಭರವಸೆ ಹೊಂದುವ ಮತ್ತು ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದೆ.

“ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಬಾಂಬ್‌ಗಳು ಮತ್ತು ಬಂದೂಕುಗಳು ಶಾಂತವಾದರೂ, ಪ್ಯಾಲೆಸ್ತೀನ್ ಮಕ್ಕಳು ಒಂದೇ ರಾತ್ರಿಯಲ್ಲಿ ಚೇತರಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮುರಳಿಧರ್ ಹೇಳಿದ್ದಾರೆ. ಅವರ ಆರೋಗ್ಯ, ಶಿಕ್ಷಣ ಮತ್ತು ಬೆಳವಣಿಗೆಗೆ ಉಂಟಾಗಿರುವ ನಾಶವು ಸರಿಪಡಿಸಲಾಗದಂಥದ್ದಾಗಿದೆ ಎಂದಿದ್ದಾರೆ.

ಅಲ್ಲದೆ, ಮಕ್ಕಳನ್ನು ಗುರಿಯಾಗಿಸುವುದು ಪ್ಯಾಲೆಸ್ತೀನ್ ಸಮಾಜದ ಜನಸಂಖ್ಯಾ ಮತ್ತು ಸಾಮಾಜಿಕ ಅಡಿಪಾಯಗಳು ಸೇರಿದಂತೆ ಅದರ ಒಟ್ಟಾರೆ ರಚನೆ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ. “ಮಕ್ಕಳನ್ನು ಗುರಿಯಾಗಿಸುವ ಮೂಲಕ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಅಸ್ತಿತ್ವದ ಸಾಮರ್ಥ್ಯ ಮತ್ತು ಅವರ ಭವಿಷ್ಯವನ್ನು ನಿರ್ಧರಿಸುವ ಹಕ್ಕಿನ ಮೇಲೆಯೇ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ಸಲಹಾ ಅಭಿಪ್ರಾಯಕ್ಕೆ ಅನುಗುಣವಾಗಿ, ಪ್ಯಾಲೆಸ್ತೀನ್ ಮಕ್ಕಳಿಗೆ ಹಾನಿ ಮಾಡುವ ಉಲ್ಲಂಘನೆಗಳನ್ನು ನಿಲ್ಲಿಸುವಂತೆ ಮತ್ತು ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ ತನ್ನ ಉಪಸ್ಥಿತಿಯನ್ನು ಕೊನೆಗೊಳಿಸುವಂತೆ ಆಯೋಗವು ಇಸ್ರೇಲ್‌ ಅನ್ನು ಒತ್ತಾಯಿಸಿದೆ.  

ಅಲ್ಲದೆ, ಆರೋಪಿತ ಅಪರಾಧಗಳಿಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅದು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.

ಇಸ್ರೇಲ್ ವರದಿಯನ್ನು ತಿರಸ್ಕರಿಸಿದೆ. ವರದಿಯನ್ನು ಒಂದು “ಪ್ರಚಾರದ ತುಣುಕು” (propaganda piece) ಎಂದು ಬಣ್ಣಿಸಿದೆ.

“ಆಯೋಗ ಸತ್ಯವನ್ನು ಹುಡುಕುವ ಬದಲು, ಇಸ್ರೇಲ್ ಅನ್ನು ಮಾತ್ರ ಪ್ರತ್ಯೇಕಿಸಿ ನಿಂದಿಸುವ ಉದ್ದೇಶವನ್ನು ಹೊಂದಿರುವ “ಮೂಲಭೂತವಾಗಿ ದೋಷಪೂರಿತವಾದ ವ್ಯವಸ್ಥೆ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಟೀಕಿಸಿದೆ.

“ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯಾದ ಹಮಾಸ್‌ನಿಂದ ಕೊಲ್ಲಲ್ಪಟ್ಟ ಅಥವಾ ಅಪಹರಣಕ್ಕೊಳಗಾದ ಇಸ್ರೇಲಿ ಮಕ್ಕಳನ್ನು ಈ ವರದಿಯು ನಿರ್ಲಕ್ಷಿಸಿದೆ ಎಂದು ಅದು ಹೇಳಿದೆ ಮತ್ತು ವಿಶ್ವಾಸಾರ್ಹ ಪರಿಶೀಲನಾ ವಿಧಾನಗಳ ಕೊರತೆಯನ್ನು ಹೊಂದಿದೆ ಎಂದು ಆಯೋಗದ ಮೇಲೆ ಆರೋಪ ಮಾಡಿದೆ. “ಇಸ್ರೇಲ್ ಈ ಮಾನಹಾನಿಕರ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ 1,200 ಜನರನ್ನು ಕೊಂದು, ಒತ್ತೆಯಾಳುಗಳನ್ನು ಕರೆದೊಯ್ದ ನಂತರ, ಅಕ್ಟೋಬರ್ 2023ರಲ್ಲಿ ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆ ಪ್ರಾರಂಭವಾಯಿತು. ಅಂದಿನಿಂದ ಇಸ್ರೇಲ್ ಗಾಝಾದ ಮೇಲೆ ಭೀಕರ ವೈಮಾನಿಕ ಮತ್ತು ಭೂಪ್ರದೇಶದ ದಾಳಿಗಳನ್ನು ನಡೆಸುತ್ತಿದ್ದು, 75,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ.

ಸೆಪ್ಟೆಂಬರ್‌ನಲ್ಲಿ, ವಿಶ್ವಸಂಸ್ಥೆಯ ವಿಚಾರಣಾ ಆಯೋಗವು ಗಾಝಾದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನರಮೇಧ ಎಸಗಿದೆ ಎಂದು ಹೇಳಿತ್ತು. ಇಸ್ರೇಲ್ ವಿದೇಶಾಂಗ ಸಚಿವಾಲಯವು ಆ ವರದಿಯನ್ನೂ ‘ವಿಕೃತ ಮತ್ತು ಸುಳ್ಳು’ ಎಂದು ಬಣ್ಣಿಸಿ ತಿರಸ್ಕರಿಸಿತ್ತು.

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನವೆಂಬರ್ 2024ರಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಬಂಧನ ವಾರಂಟ್ ಹೊರಡಿಸಿತ್ತು. 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...