Homeಅಂತರಾಷ್ಟ್ರೀಯಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

- Advertisement -
- Advertisement -

ಇಸ್ರೇಲ್-ಇರಾನ್ ಗಳ ಯುದ್ಧ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $78ರಷ್ಟು ಏರಿಕೆಯಾಗಿದೆ. 2022ರಿಂದ ಇಲ್ಲಿಯವರೆಗೆ ಕಂಡಿರದಿದ್ದ ಬೆಲೆ, ಈಗ ಇದ್ದಕ್ಕಿದ್ದಂತೆ ಏರಿಕೆ ಕಂಡಿದೆ. ಇದರಿಂದಾಗಿ ತೈಲ ಪೂರೈಕೆ ವ್ಯಾಪಾರಿಗಳು ತೊಂದರೆಗೆ ಸಿಲುಕಿದ್ದಾರೆ. ಇದು ಜಾಗತಿಕ ತೈಲ ಉದ್ಯಮ ಮತ್ತು ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ರಾಯಿಟರ್ ವರದಿ ಮಾಡಿದೆ.

ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲವು ಬ್ಯಾರೆಲ್ ಗೆ $72.98ಕ್ಕೆ ಅಥವಾ 7.26% ರಷ್ಟು ಏರಿಕೆಯಾಗಿ ಕೊನೆಗೊಂಡಿದೆ.  ಡಬ್ಲ್ಯೂಟಿಐ ತೈಲವು 14% ಕ್ಕಿಂತ ಹೆಚ್ಚು ಜಿಗಿದು $77.62ಕ್ಕೆ ತಲುಪಿದೆ. ಇದು ಜನವರಿ 21ರ ನಂತರದ ಅತ್ಯಧಿಕ ಏರಿಕೆಯಾಗಿದೆ.

2022ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷವು ಇಂಧನ ಬೆಲೆಗಳಲ್ಲಿ ಏರಿಕೆಗೆ ಕಾರಣವಾಗಿತ್ತು. ಇಸ್ರೇಲ್ ತನ್ನ ವಾಯು ದಾಳಿಯಲ್ಲಿ ಇರಾನ್‌ನ ಪರಮಾಣು ಘಟಕಗಳು, ಕ್ಷಿಪಣಿ ಕಾರ್ಖಾನೆಗಳು ಮತ್ತು ಪ್ರಮುಖ ಮಿಲಿಟರಿ ಕಮಾಂಡರ್‌ಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಇಸ್ರೇಲ್ ಹೇಳಿತ್ತು. ಇದು ಇರಾನ್ ಅಣ್ವಸ್ತ್ರ ಉತ್ಪಾದಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಅದು ಹೇಳಿದೆ.

ಇರಾನ್‌ನ ರಾಷ್ಟ್ರೀಯ ತೈಲ ಸಂಸ್ಕರಣಾ ಮತ್ತು ವಿತರಣಾ ಕಂಪನಿಯು ತೈಲ ಸಂಸ್ಕರಣಾ ಮತ್ತು ಸಂಗ್ರಹಣಾ ಘಟಕಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆಯ (OPEC) ಸದಸ್ಯ ಇರಾನ್ ದಿನಕ್ಕೆ ಸರಿಸುಮಾರು 3.3 ಮಿಲಿಯನ್ ಬ್ಯಾರೆಲ್‌ಗಳನ್ನು (bpd) ಉತ್ಪಾದಿಸುತ್ತದೆ ಮತ್ತು 2 ಮಿಲಿಯನ್ ಬ್ಯಾರೆಲ್ ಗಳಿಗಿಂತ ಹೆಚ್ಚು ಕಚ್ಚಾ ತೈಲ ಮತ್ತು ಇಂಧನವನ್ನು ರಫ್ತು ಮಾಡುತ್ತದೆ.

ರಷ್ಯಾ ಸೇರಿದಂತೆ ಅದರ ಮಿತ್ರರಾಷ್ಟ್ರಗಳ ನಡುವಿನ ಬಿಡಿ ಉತ್ಪಾದನಾ ಸಾಮರ್ಥ್ಯವು ಇರಾನ್‌ನ ಉತ್ಪಾದನೆಗೆ ಸರಿಸುಮಾರು ಸಮಾನವಾಗಿದೆ. ಇದು ಯಾವುದೇ ಸಂಭಾವ್ಯ ಪೂರೈಕೆ ಅಡಚಣೆಗಳನ್ನು ಸರಿದೂಗಿಸಲು ಸಹಾಯ ಮಾಡುತ್ತದೆ ಎಂದು OPEC ಹೇಳಿದೆ.

ಹೆಚ್ಚುತ್ತಿರುವ ಸಂಘರ್ಷವು ಜಾಗತಿಕ ತೈಲ ಸಾಗಣೆಗೆ ನಿರ್ಣಾಯಕವಾದ ಹಾರ್ಮುಜ್ ಜಲಸಂಧಿಗೆ ಸಂಭಾವ್ಯ ಅಡಚಣೆಗಳ ಬಗ್ಗೆ ಕಳವಳಗಳನ್ನು ಹೆಚ್ಚಿಸಿದೆ.

ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ದಾಳಿ: ಬಿಬಿಸಿಯ ವಿಶೇ‍ಷ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...