Homeಮುಖಪುಟಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

- Advertisement -
- Advertisement -

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.  

ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮತ್ತು ಮಾರ್ಚ್ 5-7 ರಂದು ನಿಗದಿಯಾಗಿದ್ದ ಪ್ಲಸ್ ಟು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಸೋಮವಾರ ಪ್ರಕಟಿಸಿದ್ದಾರೆ. ಹೊಸ ಪರೀಕ್ಷಾ ದಿನಾಂಕಗಳನ್ನು ನಂತರ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. “ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳ ಮೇಲ್ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಪ್ರಸ್ತುತ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸಾಮಾನ್ಯ ಶಿಕ್ಷಣ ಇಲಾಖೆಗೆ ತಿಳಿಸಿದ್ದಾರೆ. 

ಮಾರ್ಚ್ 7 ರವರೆಗೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಬೇಕೆಂದು ಅವರು ವಿನಂತಿಸಿದ್ದಾರೆ” ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿರುವುದಾಗಿ ವರದಿಯಾಗಿದೆ. 

ಈ ನಿರ್ಧಾರವು ಗಲ್ಫ್ ಕೇಂದ್ರಗಳಲ್ಲಿ ಪರೀಕ್ಷೆಗಳಿಗೆ ಹಾಜರಾಗಬೇಕಿದ್ದ 633 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಇದರ ನಡುವೆ,  ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಇಲಾಖೆಯ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...