Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...