Homeಮುಖಪುಟಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ (ಜು.24) ನಡೆದ ಇಸ್ರೇಲ್ ಮತ್ತು ಮಾಲಿ ನಡುವಿನ ಫುಟ್ಬಾಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದರೆ, ಈ ಪಂದ್ಯ ಫುಟ್ಬಾಲ್ ಹೊರತುಪಡಿಸಿ ಮತ್ತೊಂದು ವಿಷಯಕ್ಕೆ ವಿಶ್ವದ ಗಮನ ಸೆಳೆದಿದೆ.

ಮುಸ್ಲಿಂ ರಾಷ್ಟ್ರ ಮಾಲಿ ಮತ್ತು ಯಹೂದಿ ರಾಷ್ಟ್ರ ಇಸ್ರೇಲ್ ನಡುವಿನ ಪಂದ್ಯದಲ್ಲಿ ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ವಿಷಯ ಪ್ರತಿಧ್ವನಿಸಿದೆ. ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳ ನಡುವೆ ಇದೇ ವಿಚಾರಕ್ಕೆ ಪ್ರತಿಭಟನೆ ಮತ್ತು ಜಗಳ ನಡೆದಿದೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಅಮಾಯಕ ನಾಗರಿಕ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಪ್ಯಾಲೆಸ್ತೀನ್, ಮಾಲಿ ಸೇರಿದಂತೆ ಕೆಲ ರಾಷ್ಟ್ರಗಳು ಒಲಿಂಪಿಕ್ಸ್ ಸಮಿತಿಯನ್ನು ಕ್ರೀಡಾಕೂಟ ಆರಂಭಕ್ಕೆ ಮುನ್ನವೇ ಒತ್ತಾಯಿಸಿತ್ತು. ಒಲಿಂಪಿಕ್ಸ್ ಸಮಿತಿ ಅದನ್ನು ಪರಿಗಣಿಸಿಲ್ಲ.

ಇಸ್ರೇಲ್ ತಂಡಕ್ಕೆ ಭಾರೀ ಭದ್ರತೆ

1972ರ ಮ್ಯೂನಿಚ್ ಒಲಿಂಪಿಕ್ಸ್ ವೇಳೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲ್ ತಂಡದ 12 ಮಂದಿ ಮತ್ತು ದಾಳಿ ನಡೆಸಿದ ತಂಡದ ಐವರು ಮೃತಪಟ್ಟಿದ್ದರು. ಅದೇ ರೀತಿಯ ದಾಳಿಯನ್ನು ಪ್ಯಾರಿಸ್‌ನಲ್ಲಿ ನಡೆಸಲಾಗುವುದು ಎಂದು ಇಸ್ರೇಲ್ ತಂಡಕ್ಕೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆ ಇಸ್ರೇಲ್ ತಂಡಕ್ಕೆ ಪ್ಯಾರಿಸ್‌ನಲ್ಲಿ ಭಾರೀ ಭದ್ರತೆ ನೀಡಲಾಗಿದೆ.

ಇಸ್ರೇಲ್ ಮತ್ತು ಮಾಲಿ ತಂಡಗಳ ಪಂದ್ಯದ ವೇಳೆ ಎಲ್ಲಾ ರೀತಿಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಇಸ್ರೇಲ್ ತಂಡ ಭಾರೀ ಪೊಲೀಸ್ ಬೆಂಗಾವಲಿನೊಂದಿಗೆ ಕ್ರೀಡಾಂಗಣ ಆಗಮಿಸಿತ್ತು. ತಂಡದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಪಡೆ, ಹಿಂದೆ ಒಂದು ಡಝನ್‌ಗಿಂತಲೂ ಹೆಚ್ಚು ಗಲಭೆ ನಿಯಂತ್ರಣ ಪಡೆಯ ಪೊಲೀಸರು ಇದ್ದರು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಪಾರ್ಕ್ ಡೆಸ್ ಪ್ರಿನ್ಸಸ್ ಸ್ಟೇಡಿಯಂನಲ್ಲಿ ಗಸ್ತು ತಿರುಗುತ್ತಿದ್ದರು.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಮುನ್ನ ಬೆದರಿಕೆಯ ವಿಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಮುಖಗವಸು ಧರಿಸಿದ್ದ ವ್ಯಕ್ತಿಯೊಬ್ಬ ಪ್ಯಾಲೆಸ್ತೀನ್ ಧ್ವಜ ಹಿಡಿದು, ನಕಲಿ ಕತ್ತರಿಸಿದ ತಲೆಯೊಂದನ್ನು ಪ್ರದರ್ಶಿಸಿ ಫ್ರಾನ್ಸ್‌ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವ ಕಾರಣ, ಪ್ಯಾರಿಸ್‌ನಲ್ಲಿ ‘ರಕ್ತದ ನದಿ ಹರಿಯಲಿದೆ’ ಎಂದಿದ್ದ.

ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಸ್ರೇಲ್‌ 88 ಅಥ್ಲೀಟ್‌ಗಳ ತಂಡವನ್ನು ಕಳುಹಿಸಿದೆ. ಇಸ್ರೇಲ್ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಯೆಲ್ ಅರಾದ್ ಇದನ್ನು “ವಿಜಯ” ಎಂದು ಕರೆದಿದ್ದು, ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗವಹಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಒಲಿಂಪಿಕ್ಸ್ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಚ್ ಅವರಿಗೆ ಪತ್ರ ಬರೆದು “ಇಸ್ರೇಲ್ ಗಾಝಾ ಮೇಲೆ ಅಕ್ರಮಣ ನಡೆಸುತ್ತಿದೆ. ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಸುಮಾರು 400 ಪ್ಯಾಲೆಸ್ತೀನ್ ಕ್ರೀಡಾಪಟುಗಳು ಕೊಲ್ಲಲ್ಪಟ್ಟಿದ್ದಾರೆ. ಇಸ್ರೇಲ್ ದಾಳಿ ನಡೆಸಿ ಕ್ರೀಡಾ ಸೌಲಭ್ಯಗಳನ್ನು ನಾಶಪಡಿಸಿದೆ” ಎಂದು ಹೇಳಿದೆ.

ಒಟ್ಟಿನಲ್ಲಿ ವಿವಿಧ ರೀತಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಗಾಝಾದ ಆಕ್ರಮಣದ ವಿರುದ್ದ ಪ್ರತಿಭಟಿಸಲು ಪ್ಯಾಲೆಸ್ತೀನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ, ಜನರಿಗೆ ವೇದಿಕೆಯಾಗಿದೆ. ಈ ಹಿಂದೆಯೂ ಇಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ರೀತಿಯ ಪ್ರತಿಭಟನೆಗಳು ವ್ಯಕ್ತವಾಗಿವೆ. ಒಲಿಂಪಿಕ್ಸ್‌ನಂತಹ ಇಡೀ ಜಗತ್ತಿನ ಗಮನ ಸೆಳೆಯುವ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ವ್ಯಕ್ತಪಡಿಸುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಇದನ್ನೂ ಓದಿ : ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...