Homeಮುಖಪುಟಕದನ ವಿರಾಮ ಅಂತ್ಯಗೊಂಡ ಬೆನ್ನಲ್ಲೇ ಗಾಜಾ ಮೇಲೆ ದಾಳಿ ನಡೆಸಿದ ಇಸ್ರೇಲ್

ಕದನ ವಿರಾಮ ಅಂತ್ಯಗೊಂಡ ಬೆನ್ನಲ್ಲೇ ಗಾಜಾ ಮೇಲೆ ದಾಳಿ ನಡೆಸಿದ ಇಸ್ರೇಲ್

- Advertisement -
- Advertisement -

ಕದನ ವಿರಾಮ ವಿಸ್ತರಿಸುವ ಪ್ರಯತ್ನಗಳು ವಿಫಲವಾದ ಬೆನ್ನಲ್ಲೇ ಇಸ್ರೇಲಿ ಮಿಲಿಟರಿ ಪಡೆ ಹಮಾಸ್ ವಿರುದ್ಧ ಯುದ್ಧ ಪುನರಾರಂಭಿಸಿದೆ. ಇಂದು (ಡಿ.1) ಗಾಜಾ ಪಟ್ಟಿ ಮೇಲೆ ಭೀಕರ ವಾಯುದಾಳಿ ನಡೆಸಿದೆ.

ಒಂದು ವಾರದ ಅವಧಿಯ ಯುದ್ಧ ವಿರಾಮದ ಅಂತ್ಯದ ಗಡುವು ಮುಗಿದ ಬೆನ್ನಲ್ಲೇ ಇಂದು ಸ್ಥಳೀಯ ಸಮಯ ಬೆಳಿಗ್ಗೆ ಸುಮಾರು 7 ಗಂಟೆಗೆ ಯುದ್ಧ ಪುನರಾರಂಭವಾಗಿದೆ.

ಗಾಜಾ ಪಟ್ಟಿಯ ದಕ್ಷಿಣ ಭಾಗದಲ್ಲೂ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ. ದಕ್ಷಿಣ ಗಾಜಾ ಸುರಕ್ಷಿತ ಸ್ಥಳ ಎನ್ನಾಲಾಗಿದ್ದು, ಉತ್ತರ ಗಾಜಾದ ನಾಗರಿಕರು ದಕ್ಷಿಣ ಗಾಜಾಕ್ಕೆ ತೆರಳುವಂತೆ ಈ ಹಿಂದೆ ಇಸ್ರೇಲ್ ಸೇನೆಯೇ ಸೂಚಿಸಿತ್ತು. ಈ ಹಿನ್ನೆಲೆ ಲಕ್ಷಾಂತರ ಜನರು ದಕ್ಷಿಣ ಗಾಜಾಗೆ ಪಲಾಯನ ಮಾಡಿದ್ದಾರೆ.

ಇಂದು ಇಸ್ರೇಲ್ ನಡೆಸಿದ ದಾಳಿಯಿಂದ ನೂರಾರು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ತಾತ್ಕಾಲಿಕ ಕದನ ವಿರಾಮದ ಕೊನೆಗೊಂಡ ಒಂದು ಗಂಟೆಯಲ್ಲಿ ಇಸ್ರೇಲ್ ರಾಕೆಟ್‌ ಮತ್ತು ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ. ಆದರೆ, ಹಮಾಸ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಇಸ್ರೇಲ್ ಆರೋಪಿಸಿದೆ.

ಹಮಾಸ್ ಕದನ ವಿರಾಮದ ನಿಯಮಗಳನ್ನು ಉಲ್ಲಂಘಿಸಿದೆ. ಅದು ಮತ್ತಷ್ಟು ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಹಮಾಸ್ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.

ಯುದ್ಧ ವಿರಾಮವನ್ನು ವಿಸ್ತರಿಸುವ ಪ್ರಯತ್ನಗಳು ಮುಂದುವರಿದಿದೆ. ಆದರೆ, ಮಧ್ಯವರ್ತಿ ಕತಾರ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ವರದಿಗಳ ಪ್ರಕಾರ, ಕತಾರ್ ಮತ್ತು ಈಜಿಪ್ಟ್ ಮಧ್ಯವರ್ತಿಗಳು ಇಸ್ರೇಲ್ -ಹಮಾಸ್ ನಡುವೆ ಮಾತುಕತೆ ನಡೆಸುತ್ತಿವೆ.

ಇದನ್ನೂ ಓದಿ : ಪನ್ನುನ್ ಹತ್ಯೆ ಸಂಚಿನಲ್ಲಿ ಗುಜರಾತ್‌ನ ವ್ಯಕ್ತಿ: ಅಮೆರಿಕದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...