Homeಅಂತರಾಷ್ಟ್ರೀಯಉತ್ತರ ಲೆಬನಾನ್ ಗುರಿಯಾಗಿರಿಸಿಕೊಂಡ ಇಸ್ರೇಲ್; ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕನ ಹತ್ಯೆ

ಉತ್ತರ ಲೆಬನಾನ್ ಗುರಿಯಾಗಿರಿಸಿಕೊಂಡ ಇಸ್ರೇಲ್; ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲಿ ಸೈನ್ಯವು ಶನಿವಾರ ಉತ್ತರ ಲೆಬನಾನ್‌ಗೆ ತನ್ನ ವೈಮಾನಿಕ ದಾಳಿಯನ್ನು ವಿಸ್ತರಿಸಿದೆ. ಬೈರುತ್ ಮತ್ತು ದಕ್ಷಿಣದ ನಗರಗಳಲ್ಲಿ ಬಾಂಬ್ ದಾಳಿಗಳು ಮುಂದುವರೆದಿದ್ದು, ಇಸ್ರೇಲಿ ಸೈನ್ಯವು ಹೆಜ್ಬುಲ್ಲಾವನ್ನು ಗುರಿಯಾಗಿಸಿ ತನ್ನ ಆಕ್ರಮಣವನ್ನು ತೀವ್ರಗೊಳಿಸಿದೆ. ಶನಿವಾರ ಮುಂಜಾನೆ ಉತ್ತರ ನಗರವಾದ ಟ್ರಿಪೋಲಿಯಲ್ಲಿ ದಾಳಿಗಳು ನಡೆದಿದ್ದು, ಅಲ್ಲಿ ಹಮಾಸ್ ಉನ್ನತ ನಾಯಕ ಮತ್ತು ಅವರ ಕುಟುಂಬವನ್ನು ಹತ್ಯೆ ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲಿ ಸೇನೆಯು ಮೂರು ಎಚ್ಚರಿಕೆಗಳನ್ನು ನೀಡಿದ್ದು, ಆ ಪ್ರದೇಶದ ನಿವಾಸಿಗಳನ್ನು ತಕ್ಷಣವೇ ಸ್ಥಳಾಂತರಿಸುವಂತೆ ಒತ್ತಾಯಿಸಿದೆ. ರಾತ್ರಿಯಲ್ಲಿ ಬೈರುತ್‌ನ ವಿಮಾನ ನಿಲ್ದಾಣದ ಬಳಿ ವಿಮಾನಗಳು ಆಗಮಿಸುತ್ತಿದ್ದಂತೆ ಸ್ಫೋಟಗಳು ಮತ್ತು ವೈಮಾನಿಕ ದಾಳಿಗಳು ಸಂಭವಿಸಿದವು.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ತಮ್ಮ ಶುಕ್ರವಾರದ ಧರ್ಮೋಪದೇಶದಲ್ಲಿ “ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ, ಇರಾನ್ ಹಿಂದೆ ಸರಿಯುವುದಿಲ್ಲ” ಎಂದು ಎಚ್ಚರಿಸಿದ ನಂತರ ಹೊಸ ಸುತ್ತಿನ ತೀವ್ರವಾದ ದಾಳಿಗಳು ನಡೆದಿವೆ.

ಇಸ್ರೇಲ್ ಡಿಫೆನ್ಸ್ ಫೋರ್ಸಸ್ (ಐಡಿಎಫ್‌f) ಸುಮಾರು ಮೂರು ವಾರಗಳ ಕಾಲ ದಕ್ಷಿಣ ಲೆಬನಾನ್ ಮೇಲೆ ದಾಳಿ ನಡೆಸುತ್ತಿದೆ, ಹಲವಾರು ಜನರನ್ನು ಕೊಂದು 1.2 ಮಿಲಿಯನ್ ಲೆಬನಾನ್ನರನ್ನು ಅವರ ಮನೆಗಳಿಂದ ಹೊರಹೋಗುವಂತೆ ಮಾಡಿದೆ.

ಹಮಾಸ್‌ನ ಸಶಸ್ತ್ರ ವಿಭಾಗ, ಅಲ್-ಕಸ್ಸಾಮ್ ಬ್ರಿಗೇಡ್‌ಗಳ ನಾಯಕ ಸಯೀದ್ ಅತಲ್ಲಾ, ಉತ್ತರ ಲೆಬನಾನಿನ ನಗರವಾದ ಟ್ರಿಪೋಲಿಯಲ್ಲಿರುವ ಪ್ಯಾಲೇಸ್ಟಿನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಮೂರು ಕುಟುಂಬ ಸದಸ್ಯರೊಂದಿಗೆ ಕೊಲ್ಲಲ್ಪಟ್ಟರು ಎಂದು ಹಮಾಸ್ ಸಂಯೋಜಿತ ಮಾಧ್ಯಮಗಳು ತಿಳಿಸಿವೆ. ದಾಳಿಯ ಬಗ್ಗೆ ಇಸ್ರೇಲ್ ಸೇನೆಯು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ದಕ್ಷಿಣ ಲೆಬನಾನ್‌ನ ಮಸೀದಿಯೊಂದರಲ್ಲಿ ಭಯೋತ್ಪಾದಕ ಗುಂಪಿನ ಸದಸ್ಯರು ಕಾರ್ಯನಿರ್ವಹಿಸುತ್ತಿರುವ ಹಿಜ್ಬುಲ್ಲಾ ಪ್ರಧಾನ ಕಛೇರಿಯನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಐಡಿಎಫ್‌ ಘೋಷಿಸಿದೆ. “ದಕ್ಷಿಣದಲ್ಲಿರುವ ‘ಸಲಾಹ್ ಎಹಂಡೋರ್’ ಆಸ್ಪತ್ರೆಯ ಬಳಿಯ ಮಸೀದಿಯಲ್ಲಿ ಸ್ಥಾಪಿಸಲಾದ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಯೋತ್ಪಾದಕ ಸಂಘಟನೆ ಹೆಜ್ಬುಲ್ಲಾದ ಕಾರ್ಯಕರ್ತರ ವಿರುದ್ಧ ವಾಯುಪಡೆಯ ವಿಮಾನಗಳು ರಾತ್ರಿಯಲ್ಲಿ ಅಮ್ಮನ್ ಮತ್ತು ಉತ್ತರ ಕಮಾಂಡ್‌ನ ಗುಪ್ತಚರ ಮಾರ್ಗದರ್ಶನದಲ್ಲಿ ಉದ್ದೇಶಿತ ದಾಳಿಗಳನ್ನು ನಡೆಸಿತು ಎಂದು ಇಸ್ರೇಲ್‌ ಸೇನೆ ಟ್ವೀಟ್ ಮಾಡಿದೆ.

ಗುರುವಾರ ರಾತ್ರಿ ಇಸ್ರೇಲಿ ದಾಳಿಯಲ್ಲಿ ಗುರಿಯಾಗಿರುವ ವರದಿಯಾದ ಹಿಜ್ಬುಲ್ಲಾ ಮುಖ್ಯಸ್ಥರಾಗಿ ಹಸನ್ ನಸ್ರಲ್ಲಾಹ್ ಅವರ ಉತ್ತರಾಧಿಕಾರಿಯಾದ ಹಶೆಮ್ ಸಫೀದಿನ್ ಅವರ ಭವಿಷ್ಯವು ಅಸ್ಪಷ್ಟವಾಗಿದೆ. ಇಸ್ರೇಲ್ ಅಥವಾ ಹಿಜ್ಬುಲ್ಲಾ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಅವರು ಸಫಿಯದ್ದೀನ್ ಮತ್ತು ನಸ್ರಲ್ಲಾ ಅವರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. “ನಿಮ್ಮ ಪ್ರಾಕ್ಸಿಗಳನ್ನು ತೆಗೆದುಕೊಂಡು ಲೆಬನಾನ್ ತೊರೆಯಿರಿ” ಎಂದು ಖಮೇನಿಯನ್ನು ಒತ್ತಾಯಿಸಿದರು.

ಇಸ್ರೇಲಿ ಸೇನೆಯು ದಕ್ಷಿಣ ಲೆಬನಾನಿನ ಒಡೈಸ್ಸೆಹ್ ಪಟ್ಟಣಕ್ಕೆ ನುಸುಳಲು ಪ್ರಯತ್ನಿಸುತ್ತಿದೆ ಎಂದು ಹಿಜ್ಬೊಲ್ಲಾಹ್ ಹೇಳಿಕೆ ನೀಡಿದ್ದು, ಘರ್ಷಣೆಗಳು ನಡೆಯುತ್ತಿವೆ ಎಂದು ಹೇಳಿದರು. ಇಸ್ರೇಲಿ ಸೇನೆಯು ಖಿಯಾಮ್ ನಗರ ಮತ್ತು ದಕ್ಷಿಣ ಲೆಬನಾನ್‌ನ ಕಾಫರ್ ಕಿಲಾ ಹೊರವಲಯದಲ್ಲಿ ಫಿರಂಗಿ ಶೆಲ್ ದಾಳಿ ನಡೆಸಿತು.

ಮಂಗಳವಾರ ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ತನ್ನ ದಾಳಿಯ ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಇದು ಲೆಬನಾನ್‌ನಲ್ಲಿ ಇಸ್ರೇಲ್‌ನ ಮಿಲಿಟರಿ ಕ್ರಮ ಮತ್ತು ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಎಂದು ಟೆಹ್ರಾನ್ ಹೇಳಿಕೊಂಡಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ಲೆಬನಾನ್ ಭೇಟಿಯ ನಂತರ ಮಾತುಕತೆಗಾಗಿ ಸಿರಿಯಾಕ್ಕೆ ಬಂದಿಳಿದರು, ಇದರಲ್ಲಿ ಅವರು ಲೆಬನಾನ್ ಮತ್ತು ಹೆಜ್ಬೊಲ್ಲಾಗೆ ಬೆಂಬಲವನ್ನು ಪುನರುಚ್ಚರಿಸಿದರು.

ಲೆಬನಾನ್ ಮತ್ತು ಸಂಘರ್ಷ ಪೀಡಿತ ನಾಗರಿಕರನ್ನು ಬೆಂಬಲಿಸಲು ಸುಮಾರು 157 ಮಿಲಿಯನ್ ಯುಎಸ್ ಡಾಲರ್‌ಗಳನ್ನು ಹೊಸ ಮಾನವೀಯ ನೆರವು ನೀಡುವುದಾಗಿ ಯುನೈಟೆಡ್ ಸ್ಟೇಟ್ಸ್ ಘೋಷಿಸಿತು. “ಈ ನಿಧಿಯು ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು, ಲೆಬನಾನ್‌ನೊಳಗಿನ ನಿರಾಶ್ರಿತರ ಜನಸಂಖ್ಯೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಅಗತ್ಯಗಳನ್ನು ಪರಿಹರಿಸುತ್ತದೆ. ಈ ನೆರವು ನೆರೆಯ ಸಿರಿಯಾಕ್ಕೆ ಪಲಾಯನ ಮಾಡುವವರನ್ನು ಸಹ ಬೆಂಬಲಿಸುತ್ತದೆ” ಎಂದು ಯುಎಸ್ ಸ್ಟೇಟ್ಸ್‌ ಡಿಪಾರ್ಟ್‌ಮೆಂಟ್ ಹೇಳಿದೆ.

ಈ ಬೆಳವಣಿಗೆಗಳ ನಡುವೆಯೇ, ಯುಎಸ್ ಮಿಲಿಟರಿ ಶುಕ್ರವಾರ ಯೆಮೆನ್‌ನ ಹೌತಿ ನಿಯಂತ್ರಿತ ಪ್ರದೇಶಗಳಲ್ಲಿ 15 ಹೌತಿ ಗುರಿಗಳ ಮೇಲೆ ದಾಳಿ ನಡೆಸಿತು. ವಿಮಾನಗಳು ಮತ್ತು ಯುದ್ಧನೌಕೆಗಳು ಈ ಪ್ರದೇಶದಲ್ಲಿ ಬಾಂಬ್ ದಾಳಿ ನಡೆಸಿದ್ದರಿಂದ ಮಿಲಿಟರಿ ಹೊರಠಾಣೆಗಳು ಮತ್ತು ವಿಮಾನ ನಿಲ್ದಾಣದಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ನಿವಾಸಿಗಳು ವರದಿ ಮಾಡಿದ್ದಾರೆ. ಬ್ರಿಟಿಷ್ ಸೈನ್ಯವೂ ದಾಳಿಯಲ್ಲಿ ಭಾಗವಹಿಸಿತು ಎಂದು ವರಿಯಿಂದ ಮಾಧ್ಯಮಗಳ ವರದಿಯಿಂದ ತಿಳಿದುಬಂದಿದೆ.

ಇದನ್ನೂ ಓದಿ; ”ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ” | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...