Homeಮುಖಪುಟಲೆಬನಾನ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 492 ಜನರು ಸಾವು ; ಸಾವಿರಕ್ಕೂ ಅಧಿಕ...

ಲೆಬನಾನ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 492 ಜನರು ಸಾವು ; ಸಾವಿರಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಲೆಬನಾನ್‌ನಲ್ಲಿ ಹೆಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಸೋಮವಾರ (ಸೆ.23) ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ 492 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಹೇಳಿದ್ದು, ಕಳೆದ 20 ವರ್ಷಗಳ ಸಂಘರ್ಷದಲ್ಲಿ ಅತಿ ದೊಡ್ಡ ದಾಳಿ ಇದು ಎಂದು ತಿಳಿಸಿದೆ.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.24, ಬೆಳಿಗ್ಗೆ 8 ಗಂಟೆ) 492 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸತ್ತವರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 1,645 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಸತ್ತವರಲ್ಲಿ ಎಷ್ಟು ಮಂದಿ ನಾಗರಿಕರು, ಎಷ್ಟು ಮಂದಿ ಯೋಧರಿದ್ದಾರೆ ಎಂಬ ಮಾಹಿತಿ ದೊರೆತಿಲ್ಲ.

ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್, 2006ರ ಯುದ್ಧದ ನಂತರ ಸಶಸ್ತ್ರ ಗುಂಪು ಹೆಜ್ಬುಲ್ಲಾ ನಿರ್ಮಿಸಿದ ಮೂಲಸೌಕರ್ಯಗಳನ್ನು ನಾಶಪಡಿಸಲು, ಅದರ 1,300 ತಾಣಗಳನ್ನು ಗುರಿಯಾಗಿಸಲಾಗಿದೆ ಎಂದು ಹೇಳಿದೆ. ಆದ್ದರಿಂದ, ಸಾವಿರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದಿವೆ ಎಂದು ಬಿಬಿಸಿ ವರದಿ ಹೇಳಿದೆ.

ದಾಳಿಗೆ ಪ್ರತಿರೋಧವಾಗಿ ಉತ್ತರ ಇಸ್ರೇಲ್‌ಗೆ ಹೆಜ್ಬುಲ್ಲಾ 200ಕ್ಕೂ ಹೆಚ್ಚು ರಾಕೆಟ್‌ಗಳನ್ನು
ಉಡಾಯಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ.

ಎರಡೂ ಕಡೆಯವರು ಸಂಪೂರ್ಣ ಯುದ್ದೋತ್ಸಾಹದಲ್ಲಿರುವುದರಿಂದ ಆತಂಕ ವ್ಯಕ್ತಪಡಿಸಿರುವ ವಿಶ್ವದ ಪ್ರಮುಖ ರಾಷ್ಟ್ರಗಳು ಮತ್ತು ನಾಯಕರು, ಸಂಯಮ ಪಾಲಿಸುವಂತೆ ಆಗ್ರಹಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಉಲ್ಬಣಗೊಳ್ಳುತ್ತಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, “ಲೆಬನಾನ್ ಮತ್ತೊಂದು ಗಾಝಾ ಅಗುವುದನ್ನು ಬಯಸುವುದಿಲ್ಲ” ಎಂದಿದ್ದಾರೆ.

“ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ವಿಶ್ವ ನಾಯಕರ ಸಭೆಗೆ ಮುಂಚಿತವಾಗಿ ಸಂಘರ್ಷ ಹೆಚ್ಚುತ್ತಿರುವುದು ಅತ್ಯಂತ ಅಪಾಯಕಾರಿ ಮತ್ತು ಆತಂಕಕಾರಿ. ನಾವು ಬಹುತೇಕ ಪೂರ್ಣ ಪ್ರಮಾಣದ ಯುದ್ಧದಲ್ಲಿದ್ದೇವೆ” ಎಂದು ಯುರೋಪಿಯನ್ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಜೋಸೆಪ್ ಬೊರೆಲ್ ಹೇಳಿದ್ದಾರೆ.

“ಜನರು ಸುರಕ್ಷಿತವಾಗಿ ಮನೆಗೆ ಮರಳಲು ಅನುವು ಮಾಡಿಕೊಡುವ ರೀತಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಪೆಂಟಗನ್ ಸಣ್ಣಮಟ್ಟದ ಹೆಚ್ಚುವರಿ ಪಡೆಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ” ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್‌ ತಿಳಿಸಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ನಡುವೆಯೇ, ಕಳೆದ ಒಂದು ವರ್ಷದಿಂದ ನಿರಂತರವಾಗಿ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿತ್ತು. ಅದೀಗ ಲೆಬನಾನ್‌ ದೇಶದೊಳಗೆ ವ್ಯಾಪಿಸಿದ್ದು, ಗಾಝದಲ್ಲಿ ಇಸ್ರೇಲ್ ನಡೆಸಿರುವ ಆಕ್ರಮಣ ಮತ್ತು ನರಮೇಧ ಮತ್ತೊಂದು ರಾಷ್ಟ್ರಕ್ಕೆ ವ್ಯಾಪಿಸುವ ಆತಂಕ ಎದುರಾಗಿದೆ.

ಗಾಝಾದಲ್ಲಿ ಕದನ ವಿರಾಮ ಘೋಷಸುವವರೆಗೆ ನಾವು ಹಮಾಸ್ ಬೆಂಬಲಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೆಜ್ಬುಲ್ಲಾ ಹೇಳಿದೆ. ಹೆಜ್ಬುಲ್ಲಾ ಮತ್ತು ಹಮಾಸ್ ಎರಡೂ ಗುಂಪುಗಳು ಇರಾನ್‌ನ ಬೆಂಬಲಿತವಾಗಿದೆ. ಇಸ್ರೇಲ್, ಯುಕೆ ಮತ್ತು ಇತರ ಕೆಲ ದೇಶಗಳು ಈ ಎರಡೂ ಗುಂಪುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿ, ತಮ್ಮ ರಾಷ್ಟ್ರಗಳಲ್ಲಿ ನಿಷೇಧಿಸಿದೆ.

ಇದನ್ನೂ ಓದಿ : ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...