Homeಅಂತರಾಷ್ಟ್ರೀಯಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

- Advertisement -
- Advertisement -

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

ದಾಳಿಯ ನಂತರ ವಿಮಾನ ನಿಲ್ದಾಣವನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿದ್ದು, ನಂತರ ವಿಮಾನಗಳು ಪುನರಾರಂಭಗೊಂಡವು ಎಂದು ವರದಿಯಾಗಿದೆ. ವಾಯುಯಾನ ಪ್ರಾಧಿಕಾರವು ಬೆನ್ ಗುರಿಯನ್ ಈಗ “ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟ ಭಾನುವಾರ ಸಭೆ ಸೇರಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಅವರು ಗಾಜಾ ಯುದ್ಧದ ಯೋಜಿತ ವಿಸ್ತರಣೆ ಮಾಧ್ಯಮ ವರದಿಗಳನ್ನು ದೃಢಪಡಿಸಿದ್ದಾರೆ.

“ಈ ವಾರ ನಾವು ನಮ್ಮ ಮೀಸಲು ಪಡೆಗಳಿಗೆ ಗಾಜಾದಲ್ಲಿ ನಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ವಿಸ್ತರಿಸಲು ಹತ್ತಾರು ಸಾವಿರ ಆದೇಶಗಳನ್ನು ನೀಡುತ್ತಿದ್ದೇವೆ. ಸೈನ್ಯವು ಹಮಾಸ್‌ನ ಭೂ ಮತ್ತು ಭೂಗತವಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ನಾಶಪಡಿಸುತ್ತದೆ” ಎಂದು ಜಮೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಸ್ತೃತ ದಾಳಿಯ ಕುರಿತು ಚರ್ಚಿಸಲು ಭದ್ರತಾ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಇಸ್ರೇಲ್‌ನ ಸಾರ್ವಜನಿಕ ಪ್ರಸಾರಕರು ಈ ಹಿಂದೆಯೆ ಹೇಳಿದ್ದರು.

ಯೆಮೆನ್‌ನ ಗಡಿಗಳನ್ನು ನಿಯಂತ್ರಿಸುತ್ತಿರುವ ಹೂತಿ ಬಂಡುಕೋರರು, ಗಾಜಾ ಯುದ್ಧದ ವೇಳೆ ಇಸ್ರೇಲ್ ಮತ್ತು ಕೆಂಪು ಸಮುದ್ರದ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದಾರೆ. ಈ ನಡುವೆ ಎರಡು ತಿಂಗಳ ಕದನ ವಿರಾಮದ ಕುರಿತ ಬಿಕ್ಕಟ್ಟಿನ ನಡುವೆ ಮಾರ್ಚ್ 18 ರಂದು ಅಕ್ರಮ ವಸಾಹತುಗಾರ ಇಸ್ರೇಲ್ ಗಾಜಾದಾದ್ಯಂತ ದಾಳಿಯನ್ನು ಪುನರಾರಂಭಿಸಿದೆ. ಇಸ್ರೇಲ್‌ ವಿಮಾನ ನಿಲ್ದಾಣದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...