ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ ಸ್ಪಷ್ಟ ಗುರುತುಗಳಿದ್ದ ಮಾಧ್ಯಮ ವಾಹನದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಲ್ ಮಯಾದೀನ್ ವಾಹಿನಿಯ ಫಾತಿಮಾ ಫ್ತೂನಿ, ಆಕೆಯ ಸಹೋದರ ಹಾಗೂ ಸಹೋದ್ಯೋಗಿ ಮೊಹಮ್ಮದ್, ಮತ್ತು ಅಲ್-ಮನಾರ್ ವಾಹಿನಿಯ ಅಲಿ ಶುವೈಬ್ ಅವರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ. ಪತ್ರಕರ್ತರಿದ್ದ ವಾಹನದ ಮೇಲೆ ನಾಲ್ಕು ನಿಖರ ಕ್ಷಿಪಣಿಗಳು (precision missiles) ಅಪ್ಪಳಿಸಿವೆ … Continue reading ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು