Homeಮುಖಪುಟಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ : 33 ನಾಗರಿಕರು ಸಾವು

ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ : 33 ನಾಗರಿಕರು ಸಾವು

ಆಸ್ಪತ್ರೆಯನ್ನು ಗುರಿಯಾಗಿಸಿದ ಐಡಿಎಫ್

- Advertisement -
- Advertisement -

ಗಾಝಾದ ಉತ್ತರ ಭಾಗದಲ್ಲಿರುವ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಶುಕ್ರವಾರ (ಅ.18) ರಾತ್ರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ 33 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

“ಒಟ್ಟು 33 ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ” ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮೂದ್ ಬಾಸ್ಸಲ್ ಹೇಳಿದ್ದಾರೆ. ಜಬಾಲಿಯಾದ ತಾಲ್-ಅಲ್-ಝಾತರ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 22 ಜನರು ಸಾವನ್ನಪ್ಪಿದ್ದು, 70 ಜನರು ಗಾಯಗೊಂಡಿದ್ದಾರೆ ಎಂದು ಅಲ್‌-ಅವ್ದ್ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಈ ನಡುವೆ, ಇಂದು (ಅ.19, ಶನಿವಾರ) ಮುಂಜಾನೆ ಇಸ್ರೇಲಿ ಪಡೆಗಳು ಉತ್ತರ ಗಾಝಾದ ಪಟ್ಟಣವಾದ ಬೀಟ್ ಲಾಹಿಯಾದಲ್ಲಿರುವ ಇಂಡೋನೇಷ್ಯಾದ ಆಸ್ಪತ್ರೆಯನ್ನು ಸುತ್ತುವರೆದು ಶೆಲ್ ದಾಳಿ ನಡೆಸಿವೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

“ಇಸ್ರೇಲಿ ಟ್ಯಾಂಕ್‌ಗಳು ಆಸ್ಪತ್ರೆಯನ್ನು ಸಂಪೂರ್ಣವಾಗಿ ಸುತ್ತುವರೆದಿವೆ, ವಿದ್ಯುತ್ ಕಡಿತಗೊಳಿಸಿವೆ ಮತ್ತು ಆಸ್ಪತ್ರೆಯ ಮೇಲೆ ಶೆಲ್ ದಾಳಿ ನಡೆಸಿವೆ. ಫಿರಂಗಿಗಳೊಂದಿಗೆ ಎರಡನೇ ಮತ್ತು ಮೂರನೇ ಮಹಡಿಗಳನ್ನು ಗುರಿಯಾಗಿಸಿಕೊಂಡಿವೆ” ಎಂದು ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಸುಲ್ತಾನ್ ಹೇಳಿದ್ದಾರೆ.

ಇಸ್ರೇಲ್ ಸೇನೆ ಆಸ್ಪತ್ರೆಯ ಮೇಲಿನ ಮಹಡಿಗಳನ್ನು ಗುರಿಯಾಗಿಸಿಕೊಂಡಿದೆ. ಅಲ್ಲಿ ವೈದ್ಯಕೀಯ ಸಿಬ್ಬಂದಿಯ ಜೊತೆಗೆ 40ಕ್ಕೂ ಹೆಚ್ಚು ರೋಗಿಗಳು ಮತ್ತು ಗಾಯಾಳುಗಳು ಇದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಅಕ್ಟೋಬರ್ 6 ರಿಂದ ಜಬಾಲಿಯಾ ಸೇರಿದಂತೆ ಉತ್ತರ ಗಾಝಾದಲ್ಲಿ ಇಸ್ರೇಲ್ ಹೊಸ ಆಕ್ರಮಣ ಪ್ರಾರಂಭಿಸಿದೆ. ಅಲ್ಲಿ ಪುನಃ ಗುಂಪುಗೂಡುತ್ತಿರುವ ಹಮಾಸ್ ಹೋರಾಟಗಾರರನ್ನು ಗುರಿಯಾಗಿಸಿಕೊಂಡಿದೆ. ಪರಿಣಾಮ, ಈಗಾಗಲೇ ನೂರಾರು ಜನರು ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದ ಆಕ್ರಮಣದಿಂದ ತತ್ತರಿಸಿರುವ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉತ್ತರ ಗಾಝಾದಲ್ಲಿ ಇಸ್ರೇಲ್ ಹೊಸದಾಗಿ ಆಕ್ರಮಣ ನಡೆಸುತ್ತಿರುವ ಬಗ್ಗೆ ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಏಜೆನ್ಸಿ ತೀವ್ರ ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...