Homeಅಂತರಾಷ್ಟ್ರೀಯಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ...

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ ನಡೆದಿದ್ದು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಮತ್ತು ವ್ಯಾಪಕ ಹಾನಿ ಸಂಭವಿಸಿದೆ ಎಂದು ಹಮಾಸ್‌ ಆಡಳಿತದ ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹಮೂದ್ ಬಸಲ್ ಹೇಳಿದ್ದಾರೆ.

ಗುರುವಾರ (ನ.12) ಮುಂಜಾನೆ ನಡೆದ ದಾಳಿಯಲ್ಲಿ ಮೃತಪಟ್ಟವರ ಪೈಕಿ ಒಬ್ಬರು ಶಸ್ತ್ರಚಿಕಿತ್ಸಕರು (ಸರ್ಜನ್) ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲಿ ಸೇನೆಯಿಂದ ಈ ದಾಳಿಯ ಬಗ್ಗೆ ತಕ್ಷಣದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕುರಿತು ಪ್ರತಿಕ್ರಿಯೆಗಾಗಿ ನಾವು ಇಸ್ರೇಲ್ ರಕ್ಷಣಾ ಪಡೆಗಳನ್ನು (ಐಡಿಎಫ್‌) ಸಂಪರ್ಕಿಸಿದ್ದೇವೆ ಎಂದು ಬಿಬಿಸಿ ವರದಿ ಮಾಡಿದೆ.

ಗಾಝಾ ಪಟ್ಟಿಯ ಒಳಗಿನಿಂದ ಸ್ವತಂತ್ರವಾಗಿ ವರದಿ ಮಾಡುವುದನ್ನು ಇಸ್ರೇಲ್ ನಿರ್ಬಂಧಿಸಿರುವುದರಿಂದ, ಈ ಘಟನೆಯ ವಿವರಗಳನ್ನು ಸ್ವತಂತ್ರವಾಗಿ ದೃಢೀಕರಿಸಲು ನಮಗೆ ಸಾಧ್ಯವಾಗಿಲ್ಲ ಎಂದು ಬಿಬಿಸಿ ಹೇಳಿದೆ.

ಹಮಾಸ್‌ ಆಡಳಿತದ ಆಂತರಿಕ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಗಾಜಾ ನಾಗರಿಕ ರಕ್ಷಣಾ ಸಂಸ್ಥೆಯು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಇದರ ಪ್ರಯತ್ನಗಳಿಗೆ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಯು (ಐಸಿಆರ್‌ಸಿ) ಬೆಂಬಲ ನೀಡಿದೆ.

ದಕ್ಷಿಣ ಗಾಝಾದ ಅತಿದೊಡ್ಡ ಆಸ್ಪತ್ರೆಯಾದ ನಾಸರ್ ಆಸ್ಪತ್ರೆಯ ಮೇಲೆ 2025ರ ಆಗಸ್ಟ್‌ನಲ್ಲಿ ನಡೆದ ಇಸ್ರೇಲ್‌ನ ಜೋಡಿ ವೈಮಾನಿಕ ದಾಳಿಯಲ್ಲಿ, ಪತ್ರಕರ್ತರು ಮತ್ತು ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕನಿಷ್ಠ 20 ಜನರು ಸಾವನ್ನಪ್ಪಿದ್ದರು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಕದನ ವಿರಾಮ ಒಪ್ಪಂದ ಏರ್ಪಟ್ಟಿದ್ದರೂ ಗಾಝಾದ ಮೇಲೆ ಇಸ್ರೇಲ್‌ನ ದಾಳಿಗಳು ಮುಂದುವರಿದಿವೆ. ಅಂದಿನಿಂದ ಈವರೆಗೆ 1,600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ಹಮಾಸ್ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಸಚಿವಾಲಯದ ಅಂಕಿ ಅಂಶಗಳನ್ನು ವಿಶ್ವಸಂಸ್ಥೆಯು (ಯುಎನ್‌) ವಿಶ್ವಾಸಾರ್ಹವೆಂದು ಪರಿಗಣಿಸುತ್ತದೆ.

ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿರುವುದಾಗಿ ಇಸ್ರೇಲ್ ಮತ್ತು ಹಮಾಸ್ ಪರಸ್ಪರ ಆರೋಪಿಸಿವೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ನಿರಾಶ್ರಿತ ಕುಟುಂಬಗಳಿಗೆ ಆಶ್ರಯ ನೀಡಿದ್ದ ಹತ್ತಾರು ಸಾವಿರ ಟೆಂಟ್‌ಗಳು ಜಲಾವೃತಗೊಂಡಿರುವುದರಿಂದ ಗಾಝಾದಲ್ಲಿನ ಮಾನವೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.

2023ರ ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನೇತೃತ್ವದಲ್ಲಿ ನಡೆದ ದಾಳಿಯಿಂದ ಗಾಝಾ ಯುದ್ಧವು ಆರಂಭವಾಯಿತು. ಆ ದಾಳಿಯಲ್ಲಿ ಸುಮಾರು 1,200 ಜನರು ಸಾವನ್ನಪ್ಪಿದ್ದರು ಮತ್ತು ಇತರ 251 ಜನರನ್ನು ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿತ್ತು.

ಅಕ್ಟೋಬರ್ 8ರಿಂದ ಇಂದಿನವರೆಗೆ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಗಾಝಾದಲ್ಲಿ 74,645ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.



































ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...

ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್‌

ಅರ್ಜೆಂಟೀನಾದ ನೌಕಾಪಡೆ ಮತ್ತು ವಾಯುಪಡೆಯನ್ನು ಇರಾನ್ ಸರ್ಕಾರವು ಭಯೋತ್ಪಾದಕ ಸಂಸ್ಥೆಗಳು ಎಂದು ಘೋಷಿಸಿದ್ದು, ಈ ವರ್ಷದ ಆರಂಭದಲ್ಲಿ ಟೆಹ್ರಾನ್‌ನ 'ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್' (ಐಆರ್ ಜಿಸಿ) ಅನ್ನು ಕಪ್ಪುಪಟ್ಟಿಗೆ ಸೇರಿಸುವ ಬ್ಯೂನಸ್...

ಎಸ್‌ಐಆರ್ ಅವಧಿಯಲ್ಲಿ ಕೈಬಿಡಲಾದ ವ್ಯಕ್ತಿಗಳ ಗುರುತಿನ ಚೀಟಿ ಸಂಖ್ಯೆ ಮರುಸ್ಥಾಪನೆ ಕೋರಿ ಅರ್ಜಿ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಇಬ್ಬರು ಅರ್ಜಿದಾರರು, ತಮ್ಮ ಪರಿಷ್ಕೃತ ಪರಿಹಾರ ಪ್ರಕ್ರಿಯೆಯನ್ನು ಕೇವಲ ಏಳು ರಾಜ್ಯಗಳಿಗೆ ಸೀಮಿತಗೊಳಿಸುವ ಬದಲು, ಕರಡು ಪಟ್ಟಿಯಿಂದ ಕೈಬಿಡಲಾದ...

ಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್‌)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಚೆಕ್‌ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ...

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್...

ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ...

ವಾಯುಮಾಲಿನ್ಯದಿಂದ ಜನರ ಜೀವಕ್ಕೆ ಕುತ್ತು: ‘ಭಾರತೀಯರು ಅನಾಥರಾಗಿ ಗ್ಯಾಸ್ ಚೇಂಬರ್‌ನಲ್ಲಿ ಸಿಲುಕಿದ್ದಾರೆ’; ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಎನ್‌ಜಿಟಿಗೆ ಮನವಿ

ನವದೆಹಲಿ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಜನರು ಉಸಿರಾಡುವುದೇ ಜೀವಕ್ಕೆ ಅಪಾಯಕಾರಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಕಾರಿ ಗಾಳಿಯ ನಡುವೆ ಬದುಕುತ್ತಿರುವ ಜನರ ಆರೋಗ್ಯ ಮತ್ತು...

2024ರ ಚುನಾವಣೆಗಳು : 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳೊಂದಿಗೆ ಹೊಂದಾಣಿಕೆಯಾಗದ ಎಣಿಕೆ ಮತಗಳ ಸಂಖ್ಯೆ- ವರದಿ

2024ರ ಚುನಾವಣೆಗಳ ಸಂದರ್ಭದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳ ಸಂಖ್ಯೆ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (ಇವಿಎಂ) ಎಣಿಕೆಯಾದ ಮತಗಳ ಸಂಖ್ಯೆಯ ನಡುವೆ ವ್ಯತ್ಯಾಸಗಳಿರುವುದನ್ನು ಚುನಾವಣಾ...