Homeಅಂತರಾಷ್ಟ್ರೀಯರಫಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: ಭಾರತ ಕಳವಳ

ರಫಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: ಭಾರತ ಕಳವಳ

- Advertisement -
- Advertisement -

ದಕ್ಷಿಣ ಗಾಝಾದಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿ  ಹೃದಯವಿದ್ರಾಹಕವಾದುದು ಮತ್ತು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇಸ್ರೇಲ್‌ ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ರಫಾ ನಗರಕ್ಕೆ ಸ್ಥಳಾಂತರಗೊಂಡ ಪ್ಯಾಲೆಸ್ತೀನ್‌ ನಾಗರಿಕರ ಶಿಬಿರದ ಮೇಲೆ ಮೇ.26ರಂದು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಕನಿಷ್ಠ 45 ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಇಸ್ರೇಲ್ ಗಾಝಾದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ರಫಾವನ್ನು ಗಾಝಾದಲ್ಲಿನ ಪ್ಯಾಲೆಸ್ತೀನ್‌ ನಾಗರಿಕರ ಕೊನೆಯ ಆಶ್ರಯವೆಂದು ಪರಿಗಣಿಸಲಾಗಿತ್ತು. ರಾಫಾದಲ್ಲಿನ ಶಿಬಿರದಲ್ಲಿ ನಾಗರಿಕರು ಜೀವಗಳನ್ನು ಕಳೆದುಕೊಂಡಿರುವುದು ನಮಗೆ ಆಳವಾದ ಕಳವಳದ ವಿಷಯವಾಗಿದೆ ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ನಾಗರಿಕರ ರಕ್ಷಣೆ ಮತ್ತು ನಡೆಯುತ್ತಿರುವ ಸಂಘರ್ಷದಲ್ಲಿ ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಗೌರವಿಸಲು ನಾವು ನಿರಂತರವಾಗಿ ಕರೆ ನೀಡಿದ್ದೇವೆ. ಭಾರತವು ಯಾವಾಗಲೂ ಎರಡು ದೇಶಗಳ ಪರಿಹಾರವನ್ನು ಬೆಂಬಲಿಸುತ್ತದೆ ಹಾಗೂ ಸಾರ್ವಭೌಮ ಮತ್ತು ಸ್ವತಂತ್ರ ಫೆಲೆಸ್ತೀನ್‌ ಸ್ಥಾಪನೆಗೆ ಬೆಂಬಲಿಸಿದೆ ಎಂದು ಹೇಳಿದ್ದಾರೆ.

ಮಂಗಳವಾರ, ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಔಪಚಾರಿಕವಾಗಿ ಪ್ಯಾಲೆಸ್ತೀನ್‌ನ್ನು ಒಂದು ದೇಶವೆಂದು ಗುರುತಿಸಿವೆ. ಭಾನುವಾರದ ದಾಳಿಯ ಬಗ್ಗೆ ಜಾಗತಿಕ ಆಕ್ರೋಶದ ಹೊರತಾಗಿಯೂ, ಇಸ್ರೇಲ್ ಗಾಝಾದಲ್ಲಿ ತನ್ನ ಹತ್ಯಾಕಾಂಡವನ್ನು ಮುಂದುವರಿಸಿದೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

ಗಾಝಾದ ಮೇಲೆ ಕಳೆದ 8 ತಿಂಗಳಿನಿಂದ ಇಸ್ರೇಲ್‌ ದಾಳಿಯನ್ನು ನಡೆಸುತ್ತಿದೆ.  ಅಲ್ ಜಝೀರಾ ವರದಿಯ ಪ್ರಕಾರ, ಹಮಾಸ್‌ ಒತ್ತೆಯಾಳುಗಳಲ್ಲಿ ನೂರು ಮಂದಿ ಇನ್ನು ಕೂಡ ಜೀವಂತವಾಗಿದ್ದಾರೆ ಮತ್ತು ಗಾಝಾದಲ್ಲಿದ್ದಾರೆ. ಸಂಕ್ಷಿಪ್ತ ಕದನ ವಿರಾಮ ಒಪ್ಪಂದದ ಭಾಗವಾಗಿ ಕೆಲವು ಒತ್ತೆಯಾಳುಗಳನ್ನು ನವೆಂಬರ್‌ನಲ್ಲಿ ಬಿಡುಗಡೆ ಮಾಡಲಾಯಿತು ಮತ್ತು ಇತರರು ಯುದ್ಧದ ಪರಿಣಾಮವಾಗಿ ಕೊಲ್ಲಲ್ಪಟ್ಟರು.

ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾದ ಮೇಲೆ ಅಭೂತಪೂರ್ವ ವಾಯು ಮತ್ತು ಭೂ ಮಾರ್ಗದಲ್ಲಿ ದಾಳಿಯನ್ನು ಪ್ರಾರಂಭಿಸಿದ ಬಳಿಕೆ ಗಾಝಾದಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಕನಿಷ್ಠ 36,700 ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...