Homeಅಂತರಾಷ್ಟ್ರೀಯಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಮಿನಾಬ್‌ನಲ್ಲಿರುವ ಶಜರೆಹ್ ತಯ್ಯೆಬೆಹ್ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಇರಾನ್ ನ್ಯಾಯಾಂಗದ ಅಧಿಕೃತ ಸುದ್ದಿ ಸಂಸ್ಥೆಯಾದ ಮೀಝಾನ್ ನ್ಯೂಸ್ ಏಜೆನ್ಸಿ ಖಚಿತಪಡಿಸಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು ದಾಳಿಯ ಫೋಟೋಗಳನ್ನು ಹಂಚಿಕೊಂಡಿದ್ದು, “ಬಾಲಕಿಯರ ಶಾಲೆಯನ್ನು ನಾಶಪಡಿಸಲಾಗಿದೆ, ಮುಗ್ಧ ಮಕ್ಕಳನ್ನು ಕೊಲ್ಲಲಾಗಿದೆ” ಎಂದು ಹೇಳಿದ್ದಾರೆ.

“ಇರಾನ್ ಜನರ ಮೇಲಿನ ಈ ದಾಳಿಗೆ ಉತ್ತರಿಸದೆ ಬಿಡುವುದಿಲ್ಲ” ಎಂದು ಅರಗ್ಚಿ ಸಾಮಾಜಿಕ ಜಾಲತಾಣ ಎಕ್ಸ್‌ನ ಪೋಸ್ಟ್‌ನಲ್ಲಿ ಶಪಥ ಮಾಡಿದ್ದಾರೆ.

ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಕೂಡ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ರಾಜಧಾನಿ ಟೆಹ್ರಾನ್‌ನ ಪೂರ್ವದಲ್ಲಿರುವ ಶಾಲೆಯೊಂದರ ಮೇಲೆ ನಡೆದ ಮತ್ತೊಂದು ಪ್ರತ್ಯೇಕ ಇಸ್ರೇಲಿ ದಾಳಿಯಲ್ಲಿ ಕನಿಷ್ಠ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಟೆಹ್ರಾನ್‌ನಿಂದ ಅಲ್‌-ಜಝೀರಾಗೆ ವರದಿ ಮಾಡುತ್ತಿರುವ ವರದಿಗಾರ ಮುಹಮ್ಮದ್ ವಾಲ್ ಅವರು, “ನಾವು ಮಿಲಿಟರಿ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ಮಾಡಿದ್ದೇವೆ” ಎಂದು ಹೇಳುತ್ತಾ, ಶಾಲೆಯ ಮೇಲೆ ದಾಳಿ ಮಾಡಿ ಮುಗ್ದ ಮಕ್ಕಳನ್ನು ಕೊಂದಿರುವ ಇಸ್ರೇಲ್ ಮತ್ತು ಅಮೆರಿಕದ ನಡೆಯನ್ನು ಪ್ರಶ್ನಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಟ್ರಂಪ್,”ನಾವು ಇರಾನ್‌ ಜನರಿಗೆ ಸಹಾಯ ಮಾಡುತ್ತಿದ್ದೇವೆ” ಎಂದು ಹೇಳುತ್ತಾ..ಜನರನ್ನು ಬಾಂಬ್ ಹಾಕಿ ಕೊಲ್ಲುತ್ತಿದ್ದಾರೆ ಎಂದು ವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇರಾನ್‌ ಈ ದಾಳಿಯನ್ನು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....