Homeಅಂತರಾಷ್ಟ್ರೀಯಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

ಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

- Advertisement -
- Advertisement -

ಸಂಪೂರ್ಣ ಗಾಜಾ ಪಟ್ಟಿಯನ್ನು ವಶಪಡಿಸಿಕೊಳ್ಳುವ ಮತ್ತು ಅನಿರ್ದಿಷ್ಟ ಸಮಯದವರೆಗೆ ಆ ಪ್ರದೇಶದಲ್ಲಿ ಉಳಿಯುವ ಯೋಜನೆಗೆ ಇಸ್ರೇಲ್ ಸಚಿವ ಸಂಪುಟ ಸೋಮವಾರ (ಮೇ.5) ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಯೋಜನೆಯಂತೆ ಇಸ್ರೇಲ್ ಮುಂದುವರಿದರೆ ಗಾಝಾದ ಮೇಲಿನ ಆಕ್ರಮಣ ಇನ್ನಷ್ಟು ಹೆಚ್ಚಾಗಬಹುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ತೀವ್ರ ವಿರೋಧವನ್ನು ಎದುರಿಸಬಹುದು ಎಂದು ವರದಿಗಳು ಹೇಳಿವೆ.

ಸಾವಿರಾರು ಸೈನಿಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಸ್ರೇಲಿ ಸೇನಾ ಮುಖ್ಯಸ್ಥರು ತಿಳಿಸಿದ ಬೆನ್ನಲ್ಲೇ, ಸೋಮವಾರ ಬೆಳಗ್ಗಿನ ಜಾವ ನಡೆದ ಮತದಾನದಲ್ಲಿ ಗಾಝಾವನ್ನು ವಶಕ್ಕೆ ಪಡೆಯುವ ಯೋಜನೆಗೆ ಅನುಮೋದನೆ ಪಡೆಯಲಾಗಿದೆ.

ಹಮಾಸ್ ಅನ್ನು ಸಂಪೂರ್ಣವಾಗಿ ಸೋಲಿಸಿ, ಅದರ ವಶದಲ್ಲಿರುವ ಒತ್ತೆಯಾಳುಗಳನ್ನು ಬಿಡುಗಡೆಗಗೊಳಿಸುವುದು ನಮ್ಮ ಗುರಿ ಎಂದು ಇಸ್ರೇಲ್ ಹೇಳಿಕೊಂಡರೂ, ಅದು ಗಾಝಾವನ್ನು ವಶಕ್ಕೆ ಪಡೆದರೆ ಲಕ್ಷಾಂತರ ಪ್ಯಾಲೆಸ್ತೀನಿಯರು ದಕ್ಷಿಣ ಗಾಝಾದಲ್ಲಿ ಜೀವನ ನಡೆಸಬೇಕಾಗದ ಪರಿಸ್ಥಿತಿ ಉಂಟಾಗಬಹುದು. ಅಲ್ಲಿ ಮಿತಿ ಮೀರಿದ ಜನರಿಂದ ವಿವಿಧ ರೀತಿಯ ಮಾನವೀಯ ಬಿಕ್ಕಟ್ಟುಗಳು ಉಲ್ಬಣಿಸಬಹುದು ಎಂದು ವರದಿಗಳು ಹೇಳಿವೆ.

ಇಸ್ರೇಲ್ ಪ್ರಸ್ತುತ ಶೇಕಡ 50ರಷ್ಟು ಗಾಝಾ ಪ್ರದೇಶವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಸಂಪೂರ್ಣ ಗಾಝಾಗೆ ಆಹಾರ, ಇಂಧನ, ನೀರು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಸರಬರಾಜು ಸ್ಥಗಿತಗೊಳಿಸಿದೆ. ಇದರಿಂದ ಅಲ್ಲಿನ ಜನತೆ ಆಹಾರ, ನೀರು ಸೇರಿದಂತೆ ದಿನಬಳಕೆಯ ವಸ್ತುಗಳು ಸಿಗದೆ ಪರದಾಡುತ್ತಿದ್ದಾರೆ. ಕಳೆದ 19 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ, ಈಗ ಗಾಝಾ ಜನತೆ ದೊಡ್ಡ ಮಟ್ಟದ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಗಾಝಾದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳಬಹುದು ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರ ಹಾಕಿ ಅದನ್ನು ಇಸ್ರೇಲ್ ಮತ್ತು ಅಮೆರಿಕದ ನಿಯಂತ್ರಣಕ್ಕೆ ಪಡೆಯುವುದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜನೆಯಾಗಿದೆ. ಇದನ್ನು ಇಸ್ರೇಲ್ ಸಂಪೂರ್ಣವಾಗಿ ಬೆಂಬಲಿಸಿದೆ. ಗಾಝಾ ಜನತೆಯನ್ನು ಸುತ್ತಮುತ್ತಲಿನ ರಾಷ್ಟ್ರಗಳಿಗೆ ಬಲವಂತವಾಗಿ ಓಡಿಸುವ ಈ ಯೋಜನೆಯನ್ನು ಇಸ್ರೇಲ್ ‘ಸ್ವಯಂ ಪ್ರೇರಿತ ವಲಸೆ’ ಎಂದಿದೆ. ಆದರೆ, ಯುರೋಪ್ ಮತ್ತು ಅರಬ್ ರಾಷ್ಟ್ರಗಳು ಈ ಯೋಜನೆಯನ್ನು ಬಲವಾಗಿ ವಿರೋಧಿಸಿದೆ.

ಗಾಝಾದ ಭೂಮಿ ಪ್ಯಾಲೆಸ್ತೀನಿಯರಿಗೆ ಸೇರಿದ್ದು, ಅದನ್ನು ಮರು ನಿರ್ಮಾಣ ಮಾಡಿ ಅಲ್ಲಿನ ಜನರಿಗೆ ಅವರದ್ದೇ ನಾಡಿನಲ್ಲಿ ಸ್ವತಂತ್ರವಾಗಿ ಜೀವಿಸಲು ಅನುವು ಮಾಡಿಕೊಡಬೇಕೆಂದು ಅರಬ್ ರಾಷ್ಟ್ರಗಳು ಆಗ್ರಹಿಸಿವೆ. ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ನೇತೃತ್ವದಲ್ಲಿ ಎರಡ್ಮೂರು ಸಭೆಗಳನ್ನೂ ನಡೆಸಿವೆ. ಸಂಪೂರ್ಣ ಗಾಝಾ ವಶಪಡಿಸಿಕೊಳ್ಳುವ ಇಸ್ರೇಲ್‌ನ ಯೋಜನೆಗೆ ಅದು ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕಿದೆ.

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...