Homeಅಂತರಾಷ್ಟ್ರೀಯಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ಕಳೆದ 6 ತಿಂಗಳಿನಿಂದ ಯುದ್ಧವನ್ನು ನಡೆಸುತ್ತಿದೆ. ಈ ಮಧ್ಯೆ ಕಳೆದ ವಾರ ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದರು.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದಾರೆ ಎಂದು ಐಆರ್‌ಜಿಸಿ ಹೇಳಿಕೆಯಲ್ಲಿ ತಿಳಿಸಿತ್ತು. ಇಸ್ರೇಲ್‌ನ ಈ ಭಯೋತ್ಪಾದಕ ದಾಳಿಯನ್ನು ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್, ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸೇರಿ ಹಲವುರು ಖಂಡಿಸಿದ್ದರು. ಇಸ್ರೇಲ್‌ ವಿರುದ್ಧ ಪ್ರತಿಕಾರ ತೀರಿಸುವುದಾಗಿ ಹೇಳಿದ್ದರು.

ಇದೀಗ ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಇಸ್ರೇಲ್‍ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮಿಲಿಟರಿ ಸಲಹೆಗಾರ ಜ.ರಹೀಮ್ ಸಫಾವಿ ಈ ಹೇಳಿಕೆಯನ್ನು ನೀಡಿದ್ದು, ನಮಗೆ ಯಾರೆಲ್ಲಾ ಹಾನಿ ಮಾಡುತ್ತಾರೋ ಅಥವಾ ಹಾನಿ ಮಾಡಲು ಪ್ರಯತ್ನಿಸುತ್ತಾರೋ ಅವರಿಗೆ ನಾವು ಹಾನಿ ಮಾಡುತ್ತೇವೆ. ಈ ಸಿದ್ಧಾಂತವನ್ನು ನಾವು ಸದಾಕಾಲ ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಟೆಹ್ರಾನ್‍ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾತನಾಡಿದ ಸಫಾವಿ, ಇರಾನ್‍ನ ರಾಯಭಾರಿ ಕಚೇರಿ ಮೇಲಿನ ದಾಳಿಗೆ ಅದೇ ರೀತಿಯಲ್ಲಿ ಉತ್ತರಿಸುವ ಸೂಚನೆಯನ್ನು ನೀಡಿದ್ದಾರೆ.

ಇರಾನ್‌ ಮೇಲಿನ ದಾಳಿಯಲ್ಲಿ ಇಸ್ರೇಲ್ ನೇರವಾಗಿ ತನ್ನ ಒಳಗೊಳ್ಳುವಿಕೆಯನ್ನು ಒಪ್ಪಿಕೊಂಡಿಲ್ಲ. ಇಸ್ರೇಲ್ ಯಾವುದೇ ಪ್ರತಿಕ್ರಿಯೆಗೆ ಸಿದ್ಧವಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಕಳೆದ 6 ತಿಂಗಳಿನಿಂದ ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿದ್ದ ಇಸ್ರೇಲ್‌, ಗಾಝಾದ ಖಾನ್‍ಯೂನಿಸ್ ನಗರದಿಂದ ತನ್ನ 98ನೇ ಪ್ಯಾರಾಟ್ರೂಪರ್ ಘಟಕವನ್ನು ಹಿಂದಕ್ಕೆ ಕರೆಸಿಕೊಳ್ಳುವುದಾಗಿ ರವಿವಾರ ಘೋಷಿಸಿತ್ತು. ಇರಾನ್‍ ಸಂಭಾವ್ಯ ಪ್ರತಿದಾಳಿ ಹಿನ್ನೆಲೆ ಇಸ್ರೇಲ್ ಈ ಕ್ರಮ ಕೈಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟಾಗಿತ್ತು. ಇದೀಗ ಇಸ್ರೇಲ್‌-ಇರಾನ್‌ ರಾಯಭಾರಿ ಕಚೇರಿ ಮೇಲೆ ನಡೆಸಿದ ದಾಳಿಯು ಈ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ 33,175 ಮಂದಿ ಸಾವನ್ನಪ್ಪಿದ್ದಾರೆ. ಮೃತರದಲ್ಲಿ ಮೂರನೇ ಎರಡರಷ್ಟು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ ಎಂದು ತಿಳಿಸಿದೆ.

ಇದನ್ನು ಓದಿ: ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...