Homeಮುಖಪುಟಜನರಿಂದ ತೀವ್ರ ವಿರೋಧ: ಚೆನ್ನೈನಲ್ಲಿ ನಡೆಯಬೇಕಿದ್ದ 'ಇಸ್ರೇಲಿ ಚಲನಚಿತ್ರೋತ್ಸವ' ಮುಂದೂಡಿಕೆ

ಜನರಿಂದ ತೀವ್ರ ವಿರೋಧ: ಚೆನ್ನೈನಲ್ಲಿ ನಡೆಯಬೇಕಿದ್ದ ‘ಇಸ್ರೇಲಿ ಚಲನಚಿತ್ರೋತ್ಸವ’ ಮುಂದೂಡಿಕೆ

- Advertisement -
- Advertisement -

ಮೇ 29ರಿಂದ 31ರವರೆಗೆ ಚೆನ್ನೈನ ತಮಿಳುನಾಡು ಸರ್ಕಾರಿ ಸಂಗೀತ ಕಾಲೇಜಿನಲ್ಲಿ ನಡೆಯಬೇಕಿದ್ದ ಇಸ್ರೇಲಿ ಚಲನಚಿತ್ರೋತ್ಸವವನ್ನು ಮುಂದೂಡಿರುವುದಾಗಿ ‘ಇಂಡೋ ಸಿನಿ ಅಪ್ರಿಸಿಯೇಷನ್ ​​ಫೌಂಡೇಶನ್ (ಐಸಿಎಎಫ್)’ ಸೋಮವಾರ (ಮೇ 26) ತಿಳಿಸಿದೆ.

ಗಾಝಾದಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಬರಹಗಾರರ ಗುಂಪುಗಳು, ರಾಜಕಾರಣಿಗಳು ಮತ್ತು ಹೋರಾಟಗಾರರು ಸೇರಿದಂತೆ ವಿವಿಧ ಕಡೆಗಳಿಂದ ‘ಚಲನಚಿತ್ರೋತ್ಸವ’ ಆಯೋಜನೆಗೆ ತೀವ್ರ ವಿರೋಧ ವ್ಯಕ್ತವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

“ಕೆಲವು ಅನಿರೀಕ್ಷಿತ ಮತ್ತು ಅನಿವಾರ್ಯ ಸಂದರ್ಭಗಳಿಂದಾಗಿ” ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಐಸಿಎಎಫ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ.

ಭಾರತದಲ್ಲಿ ಇಸ್ರೇಲಿ ಚಲನಚಿತ್ರೋತ್ಸವ ರದ್ದಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮೊದಲು, ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್‌ಎಫ್‌ಡಿಸಿ) 2024ರ ಆಗಸ್ಟ್ 21 ಮತ್ತು 22 ಮುಂಬೈನ ರಾಷ್ಟ್ರೀಯ ಚಲನಚಿತ್ರ ವಸ್ತುಸಂಗ್ರಹಾಲಯದಲ್ಲಿ (ಎಮ್‌ಎಂಐಸಿ) ನಡೆಯಬೇಕಿದ್ದ ಚಲನಚಿತ್ರೋತ್ಸವವನ್ನು ರದ್ದುಗೊಳಿಸಿತ್ತು.

ಭಾರತ ಪ್ಯಾಲೆಸ್ಟೈನ್ ಸಾಲಿಡಾರಿಟಿ ಫೋರಂ ಆಯೋಜಿಸಿದ್ದ ಆನ್‌ಲೈನ್ ಅರ್ಜಿ ಮತ್ತು ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ನಂತರ ಈ ಕ್ರಮ ಕೈಗೊಳ್ಳಲಾಗಿತ್ತು.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ಹಿನ್ನೆಲೆ, ಆ ದೇಶದ ಚಲಚಿತ್ರೋತ್ಸವ ಆಯೋಜಿಸದಂತೆ ಅನೇಕ ಬರಹಗಾರರ ಗುಂಪುಗಳು, ರಾಜಕಾರಣಿಗಳು ಮತ್ತು ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಸಂಸದ ಸಸಿಕಾಂತ್ ಸೆಂಥಿಲ್ ಪ್ರಮುಖರು ಕಾರ್ಯಕ್ರಮ ರದ್ದುಗೊಳಿಸುವಂತೆ ಐಸಿಎಎಫ್ ಅನ್ನು ಒತ್ತಾಯಿಸಿದ್ದರು. ತಮಿಳುನಾಡು ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದರು.

ಮೇ 26 ರಂದು ಹೇಳಿಕೆ ಬಿಡುಗಡೆ ಮಾಡಿದ್ದ ತಮಿಳುನಾಡು ಪ್ರಗತಿಪರ ಬರಹಗಾರರು, ಕಲಾವಿದರ ಸಂಘ (TNPWAA ಚಲನಚಿತ್ರೋತ್ಸವ ರದ್ದುಗೊಳಿಸುವಂತೆ ಐಸಿಎಎಫ್‌ಗೆ ಒತ್ತಾಯಿಸಿತ್ತು. ಇಸ್ರೇಲ್ ಪ್ಯಾಲೆಸ್ತೀನ್ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಈ ಸಮಯದಲ್ಲಿ ಇದು ರಾಜಕೀಯವಾಗಿ ಸೂಕ್ಷ್ಮವಲ್ಲದ ಉತ್ಸವವಾಗಿದೆ ಎಂದು ಕರೆದಿತ್ತು.

ನಕ್ಸಲ್ ಬಸವರಾಜ್ ಮೃತದೇಹವನ್ನು ಕುಟುಂಬಕ್ಕೆ ನೀಡದೆ ಬಲತ್ಕಾರವಾಗಿ ತಾವೇ ಅಂತ್ಯಕ್ರಿಯೆ ನಡೆಸಿದ ಛತ್ತೀಸ್‌ಗಢ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...