Homeಮುಖಪುಟಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

- Advertisement -
- Advertisement -

ಕದನ ವಿರಾಮದ ಜಾಗತಿಕ ಆಗ್ರಹ, ವಿಶ್ವಸಂಸ್ಥೆಯ ಹಲವು ನಿರ್ಣಯಗಳು ಮತ್ತು ವಿವಿಧ ರಾಷ್ಟ್ರಗಳ ಮಧ್ಯಸ್ಥಿಕೆಯ ಮಾತುಕತೆಗಳ ಹೊರತಾಗಿಯೂ ಗಾಝಾ ಮತ್ತು ಲೆಬನಾನ್‌ನಲ್ಲಿ ಇಸ್ರೇಲ್ ತನ್ನ ಮಾರಣಹೋಮ ಮುಂದುವರೆಸಿದೆ.

ಇಂದು (ನ.2) ಅಲ್‌-ಜಝೀರಾ ಪ್ರಕಟಿಸಿರುವ ವರದಿಯ ಪ್ರಕಾರ, ಉತ್ತರ ಗಾಝಾದ ವಸತಿ ಕಟ್ಟಡಗಳ ಮೇಲೆ ಎರಡು ವಾಯುದಾಳಿಗಳನ್ನು ಮಾಡಿರುವ ಇಸ್ರೇಲ್, 50 ಮಕ್ಕಳು ಸೇರಿದಂತೆ 84 ಜನರನ್ನು ಹತ್ಯೆ ಮಾಡಿದೆ.

ಈ ನಡುವೆ, ಇಸ್ರೇಲ್‌ಗೆ ಯುದ್ದ ನೌಕೆಗಳು, ಫೈಟರ್‌ ಜೆಟ್‌ಗಳು, ಬಾಂಬ್ ಸೇರಿದಂತೆ ವಿವಿಧ ರೀತಿಯ ಶಸ್ತ್ರಾಗಳ ಪೂರೈಕೆಯನ್ನು ಅಮೆರಿಕ ಹೆಚ್ಚಿಸಿದೆ ಎಂದು ವರದಿ ಹೇಳಿದೆ.

ತೀವ್ರ ಆಕ್ರಮಣದ ನಡುವೆಯೂ ಗಾಝಾ ಜನತೆಗೆ ಮಾನವೀಯ ನೆರವು ಒದಗಿಸುತ್ತಿರುವ ಸ್ವಯಂ ಸೇವಕರು, ಅಲ್ಲಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮದ ಮೂರನೇ ಹಂತವನ್ನು ಪುನರಾರಂಭಿಸಲು ನಿರ್ಧರಿಸಿದ್ದಾರೆ. ಇದು ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿತ್ತು.

ಅಕ್ಟೋಬರ್ 7, 2024ರಿಂದ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಸಾವನ್ನಪ್ಪಿದ್ದ ಗಾಝಾದ ಜನತೆಯ ಸಂಖ್ಯೆ ಪ್ರಸ್ತುತ 43,259ಕ್ಕೆ ತಲುಪಿದೆ. 101,827 ಜನರು ಗಾಯಗೊಂಡಿದ್ದಾರೆ.

ಲೆಬನಾನ್‌ನಲ್ಲೂ ಮುಂದುವರಿದ ಆಕ್ರಮಣ

ಗಾಝಾದ ಜೊತೆಗೆ ಅತ್ತ ಲೆಬನಾನ್‌ನಲ್ಲೂ ಇಸ್ರೇಲ್ ತನ್ನ ಆಕ್ರಮಣ ಮುಂದುವರೆಸಿದೆ. ಪರಿಣಾಮ ಇದುವರೆಗೆ 2,897 ಜನರು ಸಾವನ್ನಪ್ಪಿದ್ದು, 13,150 ಮಂದಿ ಗಾಯಗೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಸುಮಾರು 30 ಮಂದಿಯನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇದನ್ನೂ ಓದಿ : ಬಿಜೆಪಿ ಸೇರಿದ ಎಂಟು ಮಂದಿ ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿ ತಿರಸ್ಕರಿಸಿದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...