Homeಮುಖಪುಟಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು...

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

- Advertisement -
- Advertisement -

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು ಬಾಕಿ ಉಳಿದಿರುವ ಏಕೈಕ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಇಲ್ಲಿ ಸರಿಯಾದ ವೈದ್ಯಕೀಯ ಸಾಮಾಗ್ರಿಗಳು ಲಭ್ಯವಿಲ್ಲ. ಆದರೂ, ವಿಶ್ವಸಂಸ್ಥೆಯ ನೆರವಿನಿಂದ ನಾವು ಜನರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದರು.

ಆದರೆ, ಶುಕ್ರವಾರ (ಡಿ.27) ಇಸ್ರೇಲ್ ಸೇನೆ ಆಸ್ಪತ್ರೆಯಲ್ಲಿ ಪರಿಶೀಲನೆ ಆರಂಭಿಸಿತ್ತು. ಆ ಬಳಿಕ ಬೆಂಕಿ ಹಚ್ಚಿದೆ. ಇದರಿಂದ ಕೆಲ ವೈದ್ಯಕೀಯ ಸಿಬ್ಬಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಕೆಲವರು ಕಿಲೋ ಮೀಟರ್‌ಗಟ್ಟಲೆ ದೂರ ಓಡಿ ಹೋಗಿದ್ದಾರೆ ಎಂದು ಅಲ್‌-ಜಝೀರಾ ಮತ್ತು ದಿ ನ್ಯೂ ಅರಬ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಪತ್ರೆಯ ನಿರ್ದೇಶಕ ಹುಸಾಮ್ ಅಬೂ ಸಫಿಯಾ ಸೇರಿದಂತೆ ಕೆಲ ಸಿಬ್ಬಂದಿಯನ್ನು ಇಸ್ರೇಲ್ ಸೇನೆ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ.

“ಇಸ್ರೇಲ್ ಸೇನೆ ನಮ್ಮನ್ನು ಬಂಧಿಸಿ ಸುಮಾರು 12 ಗಂಟೆಗಳ ಕಾಲ ಚಳಿಯಲ್ಲಿ ವಿವಸ್ತ್ರರಾಗಿ ನಿಲ್ಲಿಸಿತ್ತು. ಗಾಯಗೊಂಡವರನ್ನು, ಅಸ್ವಸ್ತರಾದವರನ್ನು ಥಳಿಸಿದೆ. ಪರಿಶೀಲನೆ ನಡೆಸಲು ಮಹಿಳೆಯರಿಗೆ ಬಟ್ಟೆ ಕಳಚುವಂತೆ ಒತ್ತಾಯಿಸಿದೆ. ವಿರೋಧಿಸಿದಾಗ ಕಪಾಳಮೋಕ್ಷ ಮಾಡಿದ್ದಾರೆ. ಶೌಚಾಲಯಕ್ಕೆ ಹೋಗಲೂ ನಮಗೆ ಅವಕಾಶ ನೀಡಿರಲಿಲ್ಲ. ನಾವು ಅವಮಾನದಲ್ಲಿ ಬದುಕುತ್ತಿದ್ದೇವೆ, ನಾವು ದಣಿದಿದ್ದೇವೆ. ಸಾಕು, ನಮಗೆ ಈ ಜೀವನ ಸಾಕು” ಎಂದು” ವಿಚಾರಣೆಗೆ ಒಳಪಟ್ಟು ಹೊರಬಂದ ಕಮಲ್ ಅದ್ವಾನ್ ಆಸ್ಪತ್ರೆಯ ನರ್ಸ್‌ ಇಸ್ಮಾಯಿಲ್ ಅಲ್-ಕಹ್ಲೌತ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

“ನಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಮೈನಡುಗುವ ಚಳಿಯಲ್ಲಿ ನಡೆಸಿದರು. ಇಸ್ರೇಲ್ ಸೇನಾ ಸಿಬ್ಬಂದಿ ನಮ್ಮ ಮೇಲೆ ಉಗುಳಿ ಅವಮಾನ ಮಾಡಿದ್ದಾರೆ. ನಮ್ಮೆಲ್ಲರ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಬಿಡುಗಡೆ ಮಾಡುವ ಮೊದಲು ನಮ್ಮ ಎದೆ ಮತ್ತು ಬೆನ್ನಿನ ಮೇಲೆ ಸಂಖ್ಯೆಗಳನ್ನು ಬರೆದಿದ್ದಾರೆ” ಎಂದು ಆಸ್ಪತ್ರೆಯಲ್ಲಿ ತಂಗಿದ್ದ ಎಝಾತ್ ರಮದಾನ್ ಎಂಬವರು ಹೇಳಿದ್ದಾಗಿ ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

“ಇಸ್ರೇಲಿ ಸೇನಾ ಸಿಬ್ಬಂದಿ ನಮ್ಮ ಕೈಗಳನ್ನು ಬಿಗಿದು, ಕಣ್ಣಿಗೆ ಬಟ್ಟೆ ಕಟ್ಟಿ ಕರೆದುಕೊಂಡು ಹೋದರು. ನಮ್ಮ ಸುತ್ತಮುತ್ತ ಜನರು ಕಿರುಚಾಡುವುದು ಕೇಳುತ್ತಿತ್ತು. ಆದರೆ, ಎಲ್ಲಿ ಏನಾಗ್ತಿದೆ ಗೊತ್ತಾಗುತ್ತಿರಲಿಲ್ಲ. ನಾನು ನನಗೆ ಯಾವಾಗ ಥಳಿಸುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಆಸ್ಪತ್ರೆಯ ಸಿಬ್ಬಂದಿ ಶೋರೂಕ್ ಅಲ್-ರಾಂಟಿಸಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆ ಗಾಝಾದಲ್ಲಿ 48 ನಾಗರಿಕರನ್ನು ಹತ್ಯೆ ಮಾಡಿದೆ. ಗಾಝಾ ಪಟ್ಟಿಯಾದ್ಯಂತ 52 ಮಂದಿ ಗಾಯಗೊಂಡಿದ್ದಾರೆ.

2023 ಅಕ್ಟೋಬರ್ 7ರಿಂದ ಇದುವರೆಗೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ  45,484ಕ್ಕೆ ತಲುಪಿದೆ. 108,090ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...