Homeಮುಖಪುಟಯೆಮನ್‌ನ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ : ಪ್ರಾಣಾಪಾಯದಿಂದ ಪಾರಾದ WHO...

ಯೆಮನ್‌ನ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ : ಪ್ರಾಣಾಪಾಯದಿಂದ ಪಾರಾದ WHO ಮುಖ್ಯಸ್ಥ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮತ್ತು ಕೆಂಪು ಸಮುದ್ರದ ಬಂದರು ನಗರ ಹೊದೈದಾದಲ್ಲಿನ ಪ್ರಮುಖ ಮೂಲ ಸೌಕರ್ಯ ಮತ್ತು ಹೌತಿ ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ಗುರುವಾರ (ಡಿ.26) ವೈಮಾನಿಕ ದಾಳಿ ನಡೆಸಿದೆ.

ಹೌತಿ ಗುಂಪಿನ ನಿಯಂತ್ರಣದಲ್ಲಿರುವ ಪ್ರದೇಶಗಳಾದ ಸನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೆಝ್ಯಾಝ್, ರಾಸ್ ಕನಾತಿಬ್ ವಿದ್ಯುತ್ ಸ್ಥಾವರಗಳು ಮತ್ತು ಹೊದೈದಾ, ಸಲೀಫ್ ಮತ್ತು ರಾಸ್ ಕನಾತಿಬ್ ಬಂದರುಗಳಲ್ಲಿನ ಮಿಲಿಟರಿ ಮೂಲಸೌಕರ್ಯಗಳ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಪ್ರಾಣಾಪಾಯದಿಂದ ಪಾರಾದ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ

ವರದಿಗಳ ಪ್ರಕಾರ, ಸನಾ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮತ್ತು ಅಧಿಕಾರಿಗಳು ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಘೆಬ್ರೆಯೆಸಸ್ ಮತ್ತು ವಿಶ್ವಸಂಸ್ಥೆಯ ಇತರ ಅಧಿಕಾರಿಗಳು ವಿಮಾನ ಹತ್ತಲು ಸಿದ್ದತೆ ನಡೆಸುತ್ತಿದ್ದಾಗ ದಾಳಿ ನಡೆದಿದೆ. ಇದರಲ್ಲಿ ಯುಎನ್ ವಿಮಾನದ ಸಹಾಯಕ ಕ್ಯಾಪ್ಟನ್ ಸೇರಿದಂತೆ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಹೌತಿ ಸರ್ಕಾರದ ವಿದೇಶಾಂಗ ಸಚಿವ ಜಮಾಲ್ ಅಮೆರ್ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್​ನಲ್ಲಿ ತಿಳಿಸಿದ್ದಾರೆ. ದಾಳಿ ನಡೆದಾಗ ಡಬ್ಲ್ಯುಎಚ್ಒ ಮುಖ್ಯಸ್ಥರು ವಿಮಾನ ನಿಲ್ದಾಣದ ವಿಐಪಿ ಲಾಂಜ್​​ನಲ್ಲಿದ್ದರು ಎಂದು ಅಮೆರ್ ಹೇಳಿದ್ದಾರೆ.

ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದಾಗ, ಅಲ್ಲಿ ಘೆಬ್ರೆಯೆಸಸ್ ಅವರು ಇದ್ದರು ಎಂಬ ವಿಚಾರ ಗೊತ್ತಿತ್ತಾ? ಎಂಬುವುದರ ಬಗ್ಗೆ ಇಸ್ರೇಲ್ ಪ್ರತಿಕ್ರಿಯಿಸಿಲ್ಲ.

ಇರಾನ್ ಬೆಂಬಲಿತ ಹೌತಿ ಬಂಡುಕೋರರು ಇಸ್ರೇಲ್ ಮೇಲೆ ಕ್ಷಿಪಣಿ ಮತ್ತು ಎರಡು ಡ್ರೋನ್‌ಗಳನ್ನು ಹಾರಿಸಿರುವುದಾಗಿ ಹೇಳಿಕೊಂಡ ಒಂದು ದಿನದ ನಂತರ ಇಸ್ರೇಲ್‌ ದಾಳಿ ನಡೆಸಿದೆ.

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಮತ್ತೊಂದು ಗುಂಪು, ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ನವೆಂಬರ್ ಅಂತ್ಯದಿಂದ ಯೆಮೆನ್‌ನ ಹೌತಿಗಳು ಇಸ್ರೇಲ್ ಮೇಲೆ ತಮ್ಮ ದಾಳಿಯನ್ನು ಹೆಚ್ಚಿಸಿದ್ದಾರೆ.

ರಾಜಧಾನಿ ಸನಾದ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮತ್ತು ರಾಸ್ ಇಸ್ಸಾ ಬಂದರಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೌತಿ ಮೂಲಗಳು ಆರಂಭದಲ್ಲಿ ಹೇಳಿತ್ತು. ಆದರೆ, ಇಸ್ರೇಲ್ ದಾಳಿಗಳಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಹೌತಿ ಅಲ್-ಮಸಿರಾ ಟಿವಿ ಹೇಳಿದೆ.

ಡಿಸೆಂಬರ್ 19ರ ಬಳಿಕ ಹೌತಿ ಹಿಡಿತದಲ್ಲಿರುವ ವಿಮಾನ ನಿಲ್ದಾಣ, ಮಿಲಿಟರಿ ಸೌಲಭ್ಯಗಳು ಮತ್ತು ವಿದ್ಯುತ್ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಹೌತಿ ಕೂಡ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ.

ವಿಶ್ವಸಂಸ್ಥೆ ಕಾರ್ಯದರ್ಶಿ ಕಳವಳ

ಇಸ್ರೇಲ್ ಮತ್ತು ಹೌತಿಗಳ ನಡುವಿನ ಕಾಳಗ “ಹೆಚ್ಚಾಗುತ್ತಿರುವುದಕ್ಕೆ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಕಳವಳವ್ಯಕ್ತಪಡಿಸಿದ್ದಾರೆ. ಸನಾ ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ‘ಆತಂಕಕಾರಿ’ ಎಂದಿದ್ದಾರೆ.

ಯೆಮನ್‌ನ ಶೇ.80ರಷ್ಟು ಜನಸಂಖ್ಯೆಯು ವಾಯುಮಾರ್ಗವನ್ನು ಅವಲಂಬಿಸಿದೆ. ಹೀಗಿರುವಾಗ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿರುವುದರಿಂದ ಅಲ್ಲಿನ ಮಾನವೀಯ ಕಾರ್ಯಾಚರಣೆಗೆ ಅಡ್ಡಿಯಾಗಲಿದೆ. ಅಗತ್ಯ ಸಾಮಾಗ್ರಿಗಳ ಸರಬರಾಜಿಗೆ ತಡೆಯಾಗಲಿದೆ ಎಂದು ಗುಟೆರೆಸ್ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...