Homeಅಂತರಾಷ್ಟ್ರೀಯಇಸ್ರೇಲ್‌ ದಾಳಿಗೆ ಇರಾನ್‌ನಲ್ಲಿ ಕನಿಷ್ಠ 865 ಸಾವು; ಮಾನವ ಹಕ್ಕುಗಳ ಸಂಘಟನೆ ಹೇಳಿಕೆ

ಇಸ್ರೇಲ್‌ ದಾಳಿಗೆ ಇರಾನ್‌ನಲ್ಲಿ ಕನಿಷ್ಠ 865 ಸಾವು; ಮಾನವ ಹಕ್ಕುಗಳ ಸಂಘಟನೆ ಹೇಳಿಕೆ

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 865 ಜನರು ಸಾವನ್ನಪ್ಪಿದ್ದಾರೆ ಮತ್ತು 3,396 ಜನರು ಗಾಯಗೊಂಡಿದ್ದಾರೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ಭಾನುವಾರ ತಿಳಿಸಿದೆ.

ವಾಷಿಂಗ್ಟನ್ ಮೂಲದ ‘ಮಾನವ ಹಕ್ಕುಗಳ ಕಾರ್ಯಕರ್ತರು’ ಎಂಬ ಗುಂಪು ಈ ಅಂಕಿ ಅಂಶಗಳನ್ನು ನೀಡಿದೆ. ಇದು ಇಡೀ ಇರಾನ್‌ನ ಮಾಹಿತಿಯಾಗಿದೆ. ಒಟ್ಟು 363 ನಾಗರಿಕರು ಮತ್ತು 215 ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅದು ಹೇಳಿದೆ.

ಮಹ್ಸಾ ಅಮಿನಿಯ ಸಾವಿನ ವಿರುದ್ಧ 2022ರಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿವರವಾದ ಸಾವು ನೋವಿನ ಅಂಕಿ ಅಂಶಗಳನ್ನು ಒದಗಿಸಿದ್ದ ‘ಮಾನವ ಹಕ್ಕುಗಳ ಕಾರ್ಯಕರ್ತರು’ ಗುಂಪು, ಇರಾನ್‌ನ ಸ್ಥಳೀಯ ವರದಿಗಳನ್ನು ಆಧರಿಸಿ ಮಾಹಿತಿ ನೀಡುತ್ತದೆ.

ಎಲ್ಲಾ ದೇಶಗಳಂತೆ ಸಂಘರ್ಷದ ಸಮಯದಲ್ಲಿ ಇರಾನ್ ನಿಖರವಾದ ಸಾವು-ನೋವಿನ ಮಾಹಿತಿ ಹೇಳುತ್ತಿಲ್ಲ. ಕಡಿಮೆ ಮಾಡಿ ಹೇಳುತ್ತಿದೆ. ಹಾಗಾಗಿ, ಮಾನವ ಹಕ್ಕುಗಳ ಗುಂಪು ಮತ್ತು ಇರಾನ್ ಸರ್ಕಾರದ ನಡುವಿನ ಅಂಕಿ-ಅಂಶಗಳ ನಡುವೆ ವ್ಯತ್ಯಾಸ ಇರಬಹುದು ಎಂದು ವರದಿಗಳು ತಿಳಿಸಿವೆ.

ಇಸ್ರೇಲ್ ದಾಳಿಯಲ್ಲಿ ಸುಮಾರು 400 ಇರಾನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 3,056 ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಶನಿವಾರ ಹೇಳಿತ್ತು.

ಈ ನಡುವೆ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿರುವ ಹಿನ್ನೆಲೆ, ಇಸ್ರೇಲ್ ವಿಮಾನ ನಿಲ್ದಾಣ ಪ್ರಾಧಿಕಾರವು ಭಾನುವಾರ ದೇಶದ ವಾಯುಪ್ರದೇಶವನ್ನು ಒಳಬರುವ ಮತ್ತು ಹೊರಹೋಗುವ ವಿಮಾನಗಳಿಗೆ ಮುಚ್ಚುವುದಾಗಿ ಘೋಷಿಸಿದೆ.

‘ಇತ್ತೀಚಿನ ಬೆಳವಣಿಗೆಗಳಿಂದಾಗಿ’ ವಿಮಾನ ಸಂಚಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ಇಸ್ರೇಲ್ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ. ಎಷ್ಟು ಸಮಯದವರೆಗೆ ಎಂದು ತಿಳಿಸಿಲ್ಲ. ಇಸ್ರೇಲ್‌ನಲ್ಲಿ ರಾಷ್ಟ್ರವ್ಯಾಪಿ ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಭಾನುವಾರ ದಾಳಿ ನಡೆಸಿದೆ. ಈ ಮೂಲಕ ಇಸ್ರೇಲ್-ಇರಾನ್ ಸಂಘರ್ಷಕ್ಕೆ ಅಧಿಕೃತವಾಗಿ ಎಂಟ್ರಿಯಾಗಿದೆ.

ಅಮೆರಿಕದ ದಾಳಿಯಿಂದ ತಮ್ಮ ಪರಮಾಣು ನೆಲೆಗಳಲ್ಲಿ ದೊಡ್ಡ ಮಟ್ಟದ ಹಾನಿ ಸಂಭವಿಸಿಲ್ಲ ಎಂದು ಇರಾನ್ ಹೇಳಿಕೊಂಡಿದೆ. ಈ ನಡುವೆ ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಇರಾನ್ ಮೇಲೆ ದಾಳಿ | ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಲು ಟ್ರಂಪ್‌ಗೆ ಅಧಿಕಾರವಿಲ್ಲ ಎಂದ ಅಮೆರಿಕ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...