Homeಮುಖಪುಟ'ಇಸ್ರೇಲಿ ಟೈಮ್ ಮೆಷಿನ್' ಬಳಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ...

‘ಇಸ್ರೇಲಿ ಟೈಮ್ ಮೆಷಿನ್’ ಬಳಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

- Advertisement -
- Advertisement -

“ಇಸ್ರೇಲ್ ನಿರ್ಮಿತ ಟೈಮ್ ಮೆಷಿನ್” ಮೂಲಕ ಯುವಕರನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿ ಹತ್ತಾರು ವೃದ್ಧರಿಗೆ ₹35 ಕೋಟಿ ವಂಚಿಸಿರುವ ವಿಲಕ್ಷಣಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆರೋಪಿಗಳನ್ನು ರಾಜೀವ್ ಕುಮಾರ್ ದುಬೆ ಮತ್ತು ಅವರ ಪತ್ನಿ ರಶ್ಮಿ ದುಬೆ ಎಂದು ಗುರುತಿಸಲಾಗಿದ್ದು, ಅವರು ಕಾನ್ಪುರದಲ್ಲಿ ರಿವೈವಲ್ ವರ್ಲ್ಡ್ ಎನ್ನುವ ಥೆರಪಿ ಸೆಂಟರ್ ನಡೆಸುತ್ತಿದ್ದರು ಎಂದು ವರದಿ ಹೇಳಿದೆ.ಇಸ್ರೇಲಿ ಟೈಮ್ ಮೆಷಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನಿಂದ ತರಲಾದ ಯಂತ್ರವನ್ನು ಬಳಸಿ 60 ವರ್ಷದ ವ್ಯಕ್ತಿಯನ್ನು 25 ವರ್ಷ ವಯಸ್ಸಿನವರನ್ನಾಗಿ ಪರಿವರ್ತಿಸುತ್ತೇವೆ ಎಂದು ಪ್ರತಿಪಾದಿಸಿ ಜನರನ್ನು ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. “ಆಕ್ಸಿಜನ್ ಥೆರಪಿ” ಮೂಲಕ ವಯಸ್ಸಾದ ವ್ಯಕ್ತಿಗಳನ್ನು ಪುನಃ ಯುವಕರನ್ನಾಗಿ ಮಾಡುತ್ತೇವೆ ಎಂದು ದಂಪತಿ ತಮ್ಮ ಗ್ರಾಹಕರಿಗೆ ಭರವಸೆ ನೀಡಿ ನಂಬಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ”ಕಲುಷಿತ ಗಾಳಿಯಿಂದಾಗಿ ಜನರು ವೇಗವಾಗಿ ವಯಸ್ಸಾಗುತ್ತಿದ್ದಾರೆ. ‘ಆಕ್ಸಿಜನ್ ಥೆರಪಿ’ ಪಡೆದರೆ ತಿಂಗಳೊಳಗೆ ಅವರು ಯುವಕರಾಗಿ ಪರಿವರ್ತನೆಯಾಗುತ್ತಾರೆ ಎಂದು ಹೇಳಿ ದಂಪತಿ ಜನರನ್ನು ವಂಚಿಸಿದ್ದಾರೆ.

”10 ಅವಧಿಗಳಿಗೆ ₹6,000 ಮತ್ತು ಮೂರು ವರ್ಷಗಳ ರಿವಾರ್ಡ್‌ ವ್ಯವಸ್ಥೆಗೆ ₹90,000 ಪ್ಯಾಕೇಜ್‌ಗಳನ್ನು ಅವರು ಗ್ರಾಹಕರಿಗೆ ನೀಡಿದ್ದರು’’ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಂಜಲಿ ವಿಶ್ವಕರ್ಮ ತಿಳಿಸಿದ್ದಾರೆ.ಇಸ್ರೇಲಿ ಟೈಮ್ ಮೆಷಿನ್

ಭಾರೀ ವಂಚನೆಗೆ ಒಳಗಾದವರಲ್ಲಿ ಒಬ್ಬರಾದ ರೇಣು ಸಿಂಗ್ ಅವರು ದಂಪತಿ ತಮಗೆ ₹10.75 ಲಕ್ಷ ವಂಚಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ನೂರಾರು ಜನರಿಗೆ ಸುಮಾರು ₹35 ಕೋಟಿ ವಂಚಿಸಲಾಗಿದೆ ಎಂದೂ ಅವರು ಆರೋಪಿಸಿದ್ದಾರೆ.

ರೇಣು ಸಿಂಗ್ ದೂರಿನ ಮೇರೆಗೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು ದಂಪತಿಗಾಗಿ ಹುಡುಕಾಟ ನಡೆಸುತ್ತಿದ್ದು, ಆರೋಪಿಗಳು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಇದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂಓದಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...