Homeಅಂತರಾಷ್ಟ್ರೀಯಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

ಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

- Advertisement -
- Advertisement -

ಹಮಾಸ್ ಬಂಡುಕೋರರ ವಿರುದ್ದ ನಡೆಸಿದ್ದೇವೆ ಎಂದು ಹೇಳಿ, ಇಸ್ರೇಲ್ ಸೇನೆ ಮೇ ತಿಂಗಳಲ್ಲಿ ಗಾಝಾ ಮೇಲೆ ನಡೆಸಿದ 11 ದಿನಗಳ ದಾಳಿಯು ಸ್ಪಷ್ಟವಾಗಿ ಯುದ್ದಾಪರಾಧ ಕೃತ್ಯಗಳಿಗೆ ಹೋಲುತ್ತದೆ ಎಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ‘ಹ್ಯೂಮನ್ ರೈಟ್ಸ್ ವಾಚ್’(ಎಚ್‌ಆರ್‌ಡಬ್ಲ್ಯೂ) ಮಂಗಳವಾರ ಆರೋಪಿಸಿದೆ.

ಮೂರು ಇಸ್ರೇಲಿ ವೈಮಾನಿಕ ದಾಳಿಯ ತನಿಖೆ ನಡೆಸಿದ ಎಚ್‌ಆರ್‌ಡಬ್ಲ್ಯೂ ತನ್ನ ತೀರ್ಮಾನಗಳನ್ನು ಹೊರಡಿಸಿದ್ದು, ಈ ದಾಳಿಯಿಂದಾಗಿ 62 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅದು ಹೇಳಿದೆ. ಈ ದಾಳಿಯು ಯಾವುದೇ ಸ್ಪಷ್ಟ ಮಿಲಿಟರಿ ಗುರಿಗಳಿಲ್ಲದೆ ನಡೆಸಲಾಗಿದೆ ಎಂದು ಅದು ಹೇಳಿದೆ.

ಇಸ್ರೇಲಿ ಜನ ವಸತಿ ಕೇಂದ್ರಗಳ ಮೇಲೆ 4,000 ಕ್ಕೂ ಹೆಚ್ಚು ಗೊತ್ತುಗುರಿಯಿಲ್ಲದ ರಾಕೆಟ್‌ಗಳು ಮತ್ತು ಮೋರ್ಟರ್‌‌ಗಳನ್ನು ಉಡಾಯಿಸುವ ಮೂಲಕ ಪ್ಯಾಲೆಸ್ತೀನಿ ಬಂಡುಕೋರರು ಕೂಡಾ ಯುದ್ಧಾಪರಾಧಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಈ ದಾಳಿಗಳು ನಾಗರಿಕರ ವಿರುದ್ಧ ಉದ್ದೇಶಪೂರ್ವಕ ಅಥವಾ ವಿವೇಚನೆಯಿಲ್ಲದ ದಾಳಿಯ ನಿಷೇಧವನ್ನು ಉಲ್ಲಂಘಿಸಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಅದಾಗ್ಯೂ ಈ ವರದಿಯು ಇಸ್ರೇಲ್ ಮಾಡಿದ ಕ್ರಮಗಳನ್ನು ಕೇಂದ್ರವಾಗಿಟ್ಟು ಮಾಡಲಾಗಿದ್ದು, ಆಗಸ್ಟ್‌‌ನಲ್ಲಿ ಹಮಾಸ್ ಮತ್ತು ಇತರ ಪ್ಯಾಲೆಸ್ತೀನಿಯನ್‌ ಬಂಡುಕೋರರ ಗುಂಪುಗಳ ಕ್ರಮಗಳ ಬಗ್ಗೆ ಪ್ರತ್ಯೇಕ ವರದಿಯನ್ನು ನೀಡುವುದಾಗಿ ಎಚ್ಆರ್‌‌ಡಬ್ಲ್ಯೂ ಹೇಳಿದೆ.

“ಇಸ್ರೇಲಿ ಪಡೆಗಳು ಮೇ ತಿಂಗಳಲ್ಲಿ ಗಾಝಾದಲ್ಲಿ ದಾಳಿ ನಡೆಸಿದವು, ಅದು ಯಾವುದೇ ಮಿಲಿಟರಿ ಗುರಿಯಿಲ್ಲದೆ ಇಡೀ ಕುಟುಂಬಗಳನ್ನು ಧ್ವಂಸಮಾಡಿತು” ಎಂದು ಎಚ್‌ಆರ್‌ಡಬ್ಲ್ಯೂನ ನಿರ್ದೇಶಕ ಗೆರ್‍ರಿ ಸಿಂಪ್ಸನ್ ಹೇಳಿದ್ದಾರೆ. ಇಸ್ರೇಲ್‌ಗೆ ಆಪಾದಿತ ಯುದ್ಧಾಪರಾಧಗಳನ್ನು ಗಂಭೀರವಾಗಿ ತನಿಖೆ ಮಾಡಲು ಮನಸ್ಸಿಲ್ಲ ಎಂದು ಅವರು ಹೇಳಿದ್ದಾರೆ.

ದಾಳಿಯು ಮಿಲಿಟರಿ ಗುರಿಗಳನ್ನು ಗುರಿಯಾಗಿರಿಸಿಕೊಂಡು ಮಾಡಿದ್ದು, ನಾಗರಿಕರಿಗೆ ಹಾನಿಯಾಗದಂತೆ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಇಸ್ರೇಲಿ ಸೈನ್ಯವು ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ನಾಗರಿಕರ ಸಾವುನೋವುಗಳಿಗೆ ಹಮಾಸ್ ಕಾರಣ ಎಂದು ಅದು ಆರೋಪಿಸಿದೆ.

ಮೇ 10 ರಂದು ಇಸ್ರೇಲ್ ತನ್ನ ಸೈನ್ಯವನ್ನು ಅಲ್-ಅಕ್ಸಾ ಮಸೀದಿ ಕಾಂಪೌಂಡ್ ಒಳಗೆ ಜಮಾಯಿಸಿದ ನಂತರ ಸಂಘರ್ಷವು ಭುಗಿಲೆದ್ದಿತ್ತು. ಜೊತೆಗೆ ಹತ್ತಾರು ಪ್ಯಾಲೆಸ್ತೀನ್‌‌ ಕುಟುಂಬಗಳನ್ನು ಅಕ್ರಮವಾಗಿ ಅವರ ಮನೆಯಿಂದ ಹೊರಹಾಕುವ ಬೆದರಿಕೆ ಹಾಕಲಾಯಿತು. ಇಸ್ರೇಲ್‌ನ ಹೊರಹಾಕುವಿಕೆಯ ವಿರುದ್ಧ ಪ್ಯಾಲೆಸ್ತೀನಿಯನ್‌ ಪ್ರತಿಭಟನೆಗಳ ಬೆಂಬಲವಾಗಿ ಹಮಾಸ್ ಜೆರುಸಲೆಮ್ ಕಡೆಗೆ ರಾಕೆಟ್ ಹಾರಿಸಿತ್ತು.

ಇದನ್ನೂ ಓದಿ: ಇಸ್ರೇಲ್‌ ಪರವಾದ ಭಾರತದ ನಿಲುವು; ಪ್ಯಾಲಿಸ್ತೇನ್‌ ವಿಷಾದದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...