Homeಮುಖಪುಟಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

ಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

UNRWA 'ಭಯೋತ್ಪಾದಕ ಗುಂಪು' ಎಂದು ಘೋಷಿಸಿ ಮಸೂದೆ ಅಂಗೀಕಾರ

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ‘ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯಗಳ ಸಂಸ್ಥೆ’ United Nations Relief and Works Agency for Palestine Refugees (UNRWA)ಯನ್ನು ಇಸ್ರೇಲ್‌ ಭೂಪ್ರದೇಶ ಮತ್ತು ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ನಿಷೇಧಿಸುವ ಎರಡು ವಿವಾದಾತ್ಮಕ ಮಸೂದೆಗಳನ್ನು ಇಸ್ರೇಲ್ ಸಂಸತ್ತು ಸೋಮವಾರ (ಅ.28) ಅಂಗೀಕರಿಸಿದೆ.

ಇದರಿಂದ ಗಾಝಾದಲ್ಲಿ ನಿರಾಶ್ರಿತರಿಗೆ ನೀಡಲಾಗುತ್ತಿರುವ ನೆರವಿನ ಮೇಲೆ ಪರಿಣಾಮ ಬೀರಲಿದೆ. ಗಾಝಾದ ಜನತೆ ಈಗಾಗಲೇ ನರಕ ಅನುಭವಿಸುತ್ತಿದ್ದು, ಮಾನವೀಯ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಳ್ಳಬಹುದು ಎಂದು ಮಾಧ್ಯಮ ವರದಿಗಳು ಅಭಿಪ್ರಾಯಪಟ್ಟಿವೆ.

ನಿಷೇಧವು ಮುಂದಿನ 90 ದಿನಗಳಲ್ಲಿ ಜಾರಿಗೆ ಬರಲಿದೆ. ಇದು ಆಕ್ರಮಿತ ಪೂರ್ವ ಜೆರುಸಲೆಮ್ ಸೇರಿದಂತೆ ವೆಸ್ಟ್ ಬ್ಯಾಂಕ್‌ನ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿ UNRWA ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಿದೆ. ಈ ಮೂಲಕ 1949ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಿಗದಿಪಡಿಸಿದ ಗುರಿ ತಲುಪಲು ಅಡಚಣೆಯಾಗಲಿದೆ.

UNRWA ಗಾಝಾದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡು ಕೈಚೆಲ್ಲಿ ಕುಳಿತಿರುವ ಜನರಿಗೆ ಮಾನವೀಯ ಸಹಾಯವನ್ನು ಒದಗಿಸುವ ಪ್ರಮುಖ ಸಂಸ್ಥೆಯಾಗಿದೆ. ಕಳೆದು ಒಂದು ವರ್ಷದಿಂದ ಗಾಝಾದಲ್ಲಿ ನಿರಂತರವಾಗಿ ಮಾರಣಹೋಮ ನಡೆಸುತ್ತಿರುವ ಇಸ್ರೇಲ್, ಆರಂಭದಿಂದಲೂ UNRWA ಮೇಲೆ ಕಣ್ಣಿಟ್ಟಿದೆ. ಅದರ ನೂರಾರು ಸ್ವಯಂ ಸೇವಕರನ್ನು ಇದುವರೆಗೆ ಕೊಂದು ಹಾಕಿದೆ.

UNRWAಗೆ ಸಂಬಂಧಿಸಿದಂತೆ ಒಟ್ಟು ಎರಡು ಮಸೂದೆಗಳನ್ನು ಇಸ್ರೇಲ್ ಸಂಸತ್ ಅಂಗೀಕರಿಸಿದೆ. ಈ ಪೈಕಿ ಮೊದಲನೆಯದ್ದು ಇಸ್ರೇಲ್ ಭೂ ಪ್ರದೇಶ ಮತ್ತು ಅದರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ
UNRWA ಚಟುವಟಿಕೆಗಳನ್ನು ನಿಷೇಧಿಸುವುದು. ಮತ್ತೊಂದು UNRWA ಅನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿ, ಅದರೊಂದಿಗೆ ಇಸ್ರೇಲ್ ಏಜೆನ್ಸಿಗಳು ಯಾವುದೇ ಸಂಪರ್ಕ ಇಟ್ಟುಕೊಳ್ಳುವುದನ್ನು ನಿಷೇಧಿಸುವುದು.

ಇದನ್ನೂ ಓದಿ : ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಎಕ್ಸ್ ಖಾತೆ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...