Homeಅಂತರಾಷ್ಟ್ರೀಯಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

ಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

- Advertisement -
- Advertisement -

ಉತ್ತರ ಗಾಝಾದಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಜನರು 24 ಗಂಟೆಗಳ ಒಳಗೆ ಸ್ಥಳಾಂತರಗೊಳ್ಳಬೇಕು ಎಂಬ ಇಸ್ರೇಲ್‌ ಕೊಟ್ಟಿರುವ ಗಡುವು ಅತ್ಯಂತ ಅಪಾಯಕಾರಿ, ಸಾಮಾನ್ಯವಾಗಿ ಇದು ಅಸಾಧ್ಯ ಎಂದು ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ. ಉತ್ತರ ಗಾಜಾದ ಸುಮಾರು 1.1 ಮಿಲಿಯನ್ ಜನಸಂಖ್ಯೆಯು ಮುಂದಿನ 24 ಗಂಟೆಗಳ ಒಳಗೆ ದಕ್ಷಿಣ ಭಾಗಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಇಸ್ರೇಲಿ ಮಿಲಿಟರಿಯಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಇದು ಶಾಲೆಗಳು, ಆರೋಗ್ಯ ಕೇಂದ್ರಗಳು ಮತ್ತು ಚಿಕಿತ್ಸಾಲಯಗಳು ಸೇರಿದಂತೆ ಅಲ್ಲಿರುವ ಎಲ್ಲಾ UN ಸಿಬ್ಬಂದಿಗೆ ಮತ್ತು UN ಸೌಲಭ್ಯಗಳಡಿ ಆಶ್ರಯ ಪಡೆದವರಿಗೆ  ಅನ್ವಯಿಸಲಿದೆ.

ಇಡೀ ಭೂಪ್ರದೇಶವು ಆಕ್ರಮಣದಲ್ಲಿರುವಾಗ ಆಹಾರ, ನೀರು ಅಥವಾ ವಸತಿ ಇಲ್ಲದ ಸ್ಥಳಕ್ಕೆ ಒಂದು ದಶಲಕ್ಷಕ್ಕೂ ಹೆಚ್ಚು ಜನರನ್ನು ಜನನಿಬಿಡ ಯುದ್ಧ ವಲಯದಲ್ಲಿ ಸ್ಥಳಾಂತರಿಸುವುದು ಅತ್ಯಂತ ಅಪಾಯಕಾರಿ ಮತ್ತು ಇದು ಸಾಧ್ಯವಿಲ್ಲ ಎಂದು ಗುಟೆರಸ್ ಹೇಳಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಅವರು ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯ ಕುರಿತು ಭದ್ರತಾ ಮಂಡಳಿಯ ಸಭೆಯ ಮೊದಲು ಈ ಹೇಳಿಕೆಯನ್ನು ನೀಡಿದ್ದಾರೆ.

ವೈಮಾನಿಕ ದಾಳಿಯ ನಂತರ, ಇಸ್ರೇಲಿ ರಕ್ಷಣಾ ಪಡೆಗಳು ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ಯಾಲೆಸ್ತೀನಿಯನ್ನರಿಗೆ ದಕ್ಷಿಣ ಪ್ರಾಂತ್ಯಕ್ಕೆ ತೆರವಿಗೆ ಆದೇಶಿಸಿವೆ.

ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ ಯುಎನ್ ಮುಖ್ಯಸ್ಥರು,  ಗಾಜಾದ ದಕ್ಷಿಣದಲ್ಲಿರುವ ಆಸ್ಪತ್ರೆಗಳು ಈಗಾಗಲೇ ಸಾಮರ್ಥ್ಯ ಮೀರಿದೆ ಮತ್ತು ಉತ್ತರದಿಂದ ಸಾವಿರಾರು ಹೊಸ ರೋಗಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಆರೋಗ್ಯ ವ್ಯವಸ್ಥೆಯು ಪತನದ ಅಂಚಿನಲ್ಲಿದೆ ಮತ್ತು ಶವಾಗಾರಗಳು ತುಂಬಿ ತುಳುಕುತ್ತಿವೆ ಎಂದು ಅವರು ಹೇಳಿದ್ದಾರೆ.

ಗಾಜಾದಲ್ಲಿನ ಪರಿಸ್ಥಿತಿಯು ಅಪಾಯಕಾರಿ ಎಂದು ವಿವರಿಸಿದ ಅವರು ಮೂಲಸೌಕರ್ಯಗಳು ಹಾನಿಗೊಳಗಾಗಿರುವುದರಿಂದ ಮತ್ತು ವಿದ್ಯುತ್ ಇಲ್ಲದಿರುವುದರಿಂದ ಇಡೀ ಪ್ರದೇಶವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಿದರು.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ ಎಂದು ಪ್ರತಿಪಾದಿಸಿದ ಗುಟೆರೆಸ್, ಯುಎನ್‌ಗೆ ಅಗತ್ಯವಿರುವ ಪ್ರತಿಯೊಬ್ಬರಿಗೂ ಇಂಧನ, ಆಹಾರ ಮತ್ತು ನೀರು ಪಡೆಯಲು ಗಾಜಾದಾದ್ಯಂತ ಮಾನವೀಯ ಪ್ರವೇಶದ ತಕ್ಷಣದ ಅವಶ್ಯಕತೆಯಿದೆ ಎಂದು ಹೇಳಿದರು.

ನಾಗರಿಕರನ್ನು ರಕ್ಷಿಸಬೇಕು, ಗಾಜಾದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ತೆರವು ಕುರಿತ ಅಂತಹ ಯಾವುದೇ ಆದೇಶವನ್ನು ರದ್ದುಗೊಳಿಸಬೇಕೆಂದು ನಾವು ಬಲವಾಗಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಪ್ರಧಾನ ಕಾರ್ಯದರ್ಶಿ ಮತ್ತು ಅವರ ತಂಡವು ಫೋನ್‌ಗಳಲ್ಲಿ ಕೆಲಸ ಮಾಡುತ್ತಿದೆ ಮತ್ತು ಅವರು ಇಸ್ರೇಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಾನವೀಯ ದುರಂತವನ್ನು ತಪ್ಪಿಸಲು ಅವರನ್ನು ಒತ್ತಾಯಿಸಲಾಗಿದೆ ಎಂದು ಗುಟೆರೆಸ್ ಅವರ ವಕ್ತಾರ ಡುಜಾರಿಕ್ ಹೇಳಿದ್ದಾರೆ.

ಇದನ್ನು ಓದಿ: ಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...