Homeಮುಖಪುಟಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

- Advertisement -
- Advertisement -

ಇತ್ತೀಚೆಗೆ ಬಿಬಿಸಿ ಸುದ್ದಿ ಸಂಸ್ಥೆಯು 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಆರೋಪಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತಾದ ಸರಣಿ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಅಂತರರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕಾರಿಗಳು ಇದು ಸಮೀಕ್ಷೆಯೇ ಹೊರತು ದಾಳಿಯಲ್ಲ, ಫೋನ್‌ಗಳನ್ನು ಹಿಂತಿರುಗಿಸಲಾಗುವುದು ಎಂದು ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

“ನಮಗೆ ಕೆಲವು ಸ್ಪಷ್ಟೀಕರಣಗಳು ಬೇಕಾಗಿದ್ದವು ಮತ್ತು ಅದಕ್ಕಾಗಿ ನಮ್ಮ ತಂಡವು ಬಿಬಿಸಿ ಕಚೇರಿಗೆ ಭೇಟಿ ನೀಡುತ್ತಿದೆ ಮತ್ತು ನಾವು ಸಮೀಕ್ಷೆಯನ್ನು ನಡೆಸುತ್ತಿದ್ದೇವೆ. ನಮ್ಮ ಅಧಿಕಾರಿಗಳು ಖಾತೆ ಪುಸ್ತಕಗಳನ್ನು ಪರಿಶೀಲಿಸಲು ಹೋಗಿದ್ದಾರೆ, ಇದು ದಾಳಿಯಲ್ಲ” ಎಂದು ಆದಾಯ ತೆರಿಗೆ ಮೂಲಗಳು ಪ್ರತಿಪಾದಿಸುತ್ತವೆ.

ಕಳೆದ ತಿಂಗಳು “ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಸರಣಿಯನ್ನು ಬಿಬಿಸಿ  ಹೊರತಂದಿತ್ತು ಆದರೆ ಭಾರತ ಸರ್ಕಾರ ಜನವರಿ 21 ರಂದು, ಮಾಹಿತಿ ತಂತ್ರಜ್ಞಾನ ನಿಯಮಗಳ 2021ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ವಿವಾದಾತ್ಮಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು, YouTube ವೀಡಿಯೊಗಳು ಮತ್ತು Twitter ಪೋಸ್ಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲು ನಿರ್ದೇಶಿಸಿತು.

ಪ್ರಧಾನಿ ಮೋದಿಯವರನ್ನು ಟೀಕಿಸುವ ಸಾಕ್ಷ್ಯಚಿತ್ರದ ಬಗ್ಗೆ ಸರ್ಕಾರವು ಬಿಬಿಸಿಯನ್ನು ಗುರಿಯಾಗಿಸಿಕೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

“ಇಲ್ಲಿ ನಾವು ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯನ್ನು ಕೇಳುತ್ತಿದ್ದೇವೆ, ಅಲ್ಲಿ ಸರ್ಕಾರವು ಬಿಬಿಸಿಯನ್ನು ಕಾಡುತ್ತಿದೆ. ವಿನಾಶ ಕಾಲಕ್ಕೆ ವಿಪರೀತ ಬುದ್ದಿ ಎನ್ನುವಂತಾಗಿದೆ” ಎಂದು ಕಾಂಗ್ರೆಸ್ ನಾಯಕ ರಮೇಶ್ ಜೈರಾಮ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...