Homeಮುಖಪುಟಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

- Advertisement -
- Advertisement -

ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್‌ ಅವರಿಗೆ ಸೇರಿದ 6 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದನ್ನು ವಿರೋಧ ಪಕ್ಷಗಳು ಕಟುವಾಗಿ ಟೀಕಿಸಿವೆ. ಇದು ಬಿಜೆಪಿಯ ತಾಲಿಬಾನ್ ಮನಸ್ಥಿತಿ ಎಂದು ಶಿವಸೇನೆ ಖಂಡಿಸಿದೆ.

ಶಿವಸೇನೆ ವಕ್ತಾರ ಮನೀಶ ಕಾಯಂಡೆ ಮಾತನಾಡಿ “ಇದು ಆಯ್ದ ಟಾರ್ಗೆಟ್ ಆಗಿದೆ. ಇದು ಬಿಜೆಪಿಯ ತಾಲಿಬಾನ್ ಮನಸ್ಥಿತಿಯನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಐಟಿ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಉದ್ದೇಶಪೂರ್ವಕವಾಗಿ ಸೋನು ಸೂದ್‌ರನ್ನು ತುಳಿಯಲು ದಾಳಿ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಸಂಸ್ಥೆಯ ಮೇಲೆ ಐಟಿ ಕಾರ್ಯಾಚರಣೆ ಮಾಡಿದ್ದು, ಇದನ್ನು ಐಟಿ ‘ಸರ್ವೇ’ ಎಂದು ಕರೆದಿದೆ ಎಂದು ಮೂಲಗಳು ತಿಳಿಸಿವೆ.

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೋವಿಡ್ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಈವರೆಗೆ ಯಾವುದೇ ರಾಜಕೀಯ ಆಸಕ್ತಿಯನ್ನು ಸೂದ್ ವ್ಯಕ್ತಪಡಿಸಿಲ್ಲ. ಕೇಜ್ರಿವಾಲ್‌ ಅವರನ್ನು ಭೇಟಿಯಾದ ಬಳಿಕ ರಾಜಕೀಯ ಊಹಾಪೋಹಗಳು ಹರಿದಾಡುತ್ತಿವೆ. ಮುಂದಿನ ಪಂಜಾಬ್‌ ಚುನಾವಣೆಯಲ್ಲಿ ಸೂದ್‌ ಸ್ಪರ್ಧಿಸಬಹುದು ಎಂದು ವದಂತಿಗಳು ಹಬ್ಬಿವೆ. ಇದೆಲ್ಲ ಊಹಾಪೋಹಗಳಿಗೂ ಐಟಿ ಕಾರ್ಯಾಚರಣೆಗೂ ಸಂಬಂಧವಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

“ರಾಜಕೀಯ ವಿದ್ಯಮಾನಗಳಿಗೂ ಐಟಿ ಕಾರ್ಯಾಚರಣೆಗೂ ಯಾವುದೇ ಸಂಬಂಧವಿಲ್ಲ. ಯಾರು ಯಾರನ್ನಾದರೂ ಭೇಟಿಯಾಗಬಹುದು. ಐಟಿ ಕೈಗೊಂಡಿರುವುದು ರೈಡ್ ಅಲ್ಲ, ಕೇವಲ ಸರ್ಚ್‌ ಅಷ್ಟೇ. ಐಟಿಯವರು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ” ಎಂದು ಬಿಜೆಪಿ ವಕ್ತಾರ ಆಸಿಫ್ ಭಾಮ್ಲಾ ಹೇಳಿದ್ದಾರೆ.


ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...