Homeಮುಖಪುಟಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ಸಾರ್ವಜನಿಕ ಪ್ರತಿಭಟನೆ ನಡೆಸುತ್ತಿರುವುದನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಖ್ಯಸ್ಥೆ ಪಿಟಿ ಉಷಾ ಟೀಕಿಸಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಮತ್ತು ದೀಪಕ್ ಪುನಿಯಾ ಅವರು ಬಿಜೆಪಿ ಸಂಸದ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ತಮ್ಮ ದೂರಿನ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ತುರ್ತಾಗಿ ಕ್ರಮಕೈಗೊಳ್ಳುವಂತೆ ಉಷಾ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಟಿ ಉಷಾ ಅವರು, ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಟೀಕಿಸಿದ್ದಾರೆ.

”ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಅವರು ಈ ರೀತಿ ಪ್ರತಿಭಟನೆ ಮಾಡುತ್ತಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಉಷಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಉಷಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಸ್ತಿಪಟುಗಳು, ಅವರ ಬೆಂಬಲಕ್ಕಾಗಿ ನಾವು ಕಾಯುತ್ತಿದ್ದೆವು. ಆದರೆ ಅವರ ಈ ಹೇಳಿಕೆಗಳಿಂದ ನಮಗೆ ನೋವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು ಸಾಕ್ಷಿ ಮಲಿಕ್, ”ಪಿಟಿ ಉಷಾ ಅವರ ಹೇಳಿಕೆಯಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ಮಾಡಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ನಾವು ಇದನ್ನು ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ನಮ್ಮ ಈ ಪ್ರತಿಭಟನೆಯ ವಿಚಾರವನ್ನು ಚರ್ಚಿಸಲು ಉಷಾ ಅವರಿಗೆ ಕರೆ ಮಾಡಿದೆವು ಆದರೆ ಅವರು ಕರೆಗೆ ಉತ್ತರಿಸಲಿಲ್ಲ.. ಅವರು ಕೆಲವು ಒತ್ತಡದಲ್ಲಿದ್ದಾರೆ ಎಂದು ನಮಗೆ ಅನಿಸುತ್ತಿದೆ” ಎಂದು ಕುಸ್ತಿಪಟು ವಿನೇಶ್ ಫೋಗಟ್ ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿರುವ ಬಜರಂಗ್ ಪುನಿಯಾ, ನ್ಯಾಯಕ್ಕಾಗಿ ನಾವು ಮೂರು ತಿಂಗಳಿನಿಂದ ಕಾಯುತ್ತಿದ್ದೇವೆ ಎಂದು ಹೇಳಿದರು.

”ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ’ ಮತ್ತು ‘ಬೇಟಿ ಪಢಾವೋ’ ಬಗ್ಗೆ ಮಾತನಾಡುತ್ತಾರೆ ಮತ್ತು ಪ್ರತಿಯೊಬ್ಬರ ‘ಮನ್ ಕಿ ಬಾತ್’ ಕೇಳುತ್ತಾರೆ. ನಮ್ಮ ‘ಮನ್ ಕಿ ಬಾತ್’ ಕೇಳಲು ಆಗುವುದಿಲ್ಲವೇ? ನಾವು ಪದಕಗಳನ್ನು ಗೆದ್ದಾಗ ನಮ್ಮನ್ನು ಅವರ ಮನೆಗೆ ಆಹ್ವಾನಿಸುತ್ತಾರೆ ಮತ್ತು ನಮಗೆ ಗೌರವವನ್ನು ನೀಡುತ್ತಾರೆ ಮತ್ತು ನಮ್ಮನ್ನು ಅವರ ಹೆಣ್ಣುಮಕ್ಕಳು ಎಂದು ಕರೆಯುತ್ತಾರೆ. ಇಂದು, ಅವರು ನಮ್ಮ ‘ಮನ್ ಕಿ ಬಾತ್’ ಅನ್ನು ಕೇಳಬೇಕೆಂದು ನಾವು ಅವರಿಗೆ ಮನವಿ ಮಾಡುತ್ತೇವೆ” ಎಂದು ರಿಯೊ ಗೇಮ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಸುದ್ದಿಗಾರರಿಗೆ ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...