Homeಮುಖಪುಟಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳು: ಗೃಹ ಸಚಿವ ಆರಗ...

ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳು: ಗೃಹ ಸಚಿವ ಆರಗ ಜ್ಞಾನೇಂದ್ರ

ಒಮ್ಮೆ ಗೃಹಸಚಿವರ ಮನೆಯಲ್ಲೊ, ಮುಖ್ಯಮಂತ್ರಿಗಳ ಮನೆಯಲ್ಲೋ ಹುಡುಕಿದರೆ ಸ್ಯಾಂಟ್ರೋ ರವಿ ಸಿಗಬಹುದೇನೋ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -
- Advertisement -

ವೇಶ್ಯಾವಾಟಿಕೆ ಮತ್ತು ವರ್ಗಾವಣೆ ದಂಧೆಯ ಕಿಂಗ್ ಪಿನ್ ಎನಿಸಿಕೊಂಡಿರುವ ಸ್ಯಾಂಟ್ರೊ ರವಿ ಹಿನ್ನೆಲೆ ಕುರಿತು ತನಿಖೆಗೆ ಸೂಚಿಸಿದ್ದೇನೆ. ಆದರೆ ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನನ್ನ ವಿರುದ್ಧ ಅತ್ಯಂತ ಬೇಜವಾಬ್ದಾರಿಯಿಂದ ಹೇಳುವ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿಯವರು ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ. ಅವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತುಪಡಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ.

ಸಾಂಟ್ರೋ ರವಿಯ ಹಿನ್ನೆಲೆ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿಯವರು ಸತ್ಯಕ್ಕೆ ಅಪಚಾರವಾಗುವ ಆಪಾದನೆ ಮಾಡಿದ್ದಾರೆ. ಯಾವ ಕಾರಣದಿಂದ ನನ್ನ ತೇಜೋವಧೆ ಮಾಡುತ್ತಿದ್ದಾರೆಂದು ತಿಳಿದಿಲ್ಲ. ಇದರಿಂದ ಯಾವ ರೀತಿ ಲಾಭವಾಗುತ್ತದೆಂದೂ ಗೊತ್ತಿಲ್ಲ ಎಂದಿದ್ದಾರೆ.

ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎನ್ನುವ ಮೂಲಕ ಅವರು ಸ್ಯಾಂಟ್ರೋ ರವಿಯ ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಸ್ಯಾಂಟ್ರೋ ರವಿಯನ್ನ ಪೊಲೀಸರು ಹುಡುಕುತ್ತಿದ್ದಾರಂತೆ! ಗೃಹ ಇಲಾಖೆಯ ವರ್ಗಾವಣೆಯ ಹೊಣೆ ಹೊತ್ತವರು ಪೊಲೀಸರ ಕೈಗೆ ಸಿಗುತ್ತಿಲ್ಲ ಎನ್ನುವುದು ಪರಮ ಹಾಸ್ಯವಲ್ಲವೇ! ಪೊಲೀಸರು ಆತನನ್ನು ಒಮ್ಮೆ ಗೃಹಸಚಿವರ ಮನೆಯಲ್ಲೊ, ಮುಖ್ಯಮಂತ್ರಿಗಳ ಮನೆಯಲ್ಲೋ ಹುಡುಕಿದರೆ ಸಿಗಬಹುದೇನೋ! ಸಿಡಿ ಸರ್ಕಾರದ ಸಂಪೂರ್ಣ ಜಾತಕ ಆತನ ಬಳಿ ಇರುವಾಗ ಆತನ ತನಿಖೆ ಸಾಧ್ಯವೇ? ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.

ಯಾರು ಸ್ಯಾಂಟ್ರೋ ರವಿ

ಕಳೆದ ನಾಲ್ಕು ದಿನಗಳಿಂದ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹೆಸರು ಸ್ಯಾಂಟ್ರೊ ರವಿ. ‘ಸ್ವತಃ ಮುಖ್ಯಮಂತ್ರಿಯೇ ನನ್ನನ್ನು ಸರ್ ಅಂತ ಕರೀತಾರೆ, ನೀವು ಸರ್ ಅಂತಿಲ್ಲ, ಖಾಲಿ ಡಿವೈಎಸ್‌ಪಿ ನೀವು, ಯಾವ ಕೆಲಸವಾದರೂ ಮಾಡಿಕೊಡುತ್ತೇನೆ, ಕುಮಾರಕೃಪ ಗೆಸ್ಟ್ ಹೌಸ್‌ಗೆ ಬನ್ನಿ’ ಎಂದು ಆತ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ. ಸಿಎಂ ಬೊಮ್ಮಾಯಿವರ ಮಗನ ಜೊತೆ, ಬಿಜೆಪಿ ಸಚಿವರುಗಳ ಜೊತೆ ಆತ ಇರುವ ಫೋಟೊಗಳು ಎಲ್ಲೆಡೆ ಹರಿದಾಡುತ್ತಿವೆ.

ಜನವರಿ 1 ರಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ಆಲಿಯಾಸ್ ಕೆ.ಎಸ್ ಮಂಜುನಾಥ್ ವಿರುದ್ಧ ವಂಚನೆ, ಅತ್ಯಾಚಾರ, ದೌರ್ಜನ್ಯ, ಕ್ರಿಮಿನಲ್ ಪಿತೂರಿಯ ದೂರು ದಾಖಲಾಗುತ್ತದೆ. ದೂರು ನೀಡಿದ್ದು ಆತನನ್ನು ಮದುವೆಯಾಗಿ ವಂಚನೆಗೊಳಗಾಗಿದ್ದ ದಲಿತ ಯುವತಿ. ಆನಂತರ ಆತ ಡಿವೈಎಸ್‌ಪಿ ಜೊತೆ ಮಾತನಾಡಿದ್ದ ಆಡಿಯೋ ಲೀಕ್ ಆಗುತ್ತದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೈಸೂರು “ಪೊಲೀಸರು ಎಫ್‌ಐಆರ್ ದಾಖಲು ಮಾಡಿರುವ ಅತ್ಯಾಚಾರ ಆರೋಪಿ ಸ್ಯಾಂಟ್ರೊ ರವಿಯೊಂದಿಗೆ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರು ಸಂಪರ್ಕ ಹೊಂದಿದ್ದಾರೆ. ಆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ಒತ್ತಾಯಿಸುತ್ತಾರೆ.

ಅಷ್ಟಕ್ಕೆ ಸುಮ್ಮನಾಗದೆ ಸ್ಯಾಂಟ್ರೊ ರವಿಯ ಜೊತೆ ಸಚಿವರುಗಳಾದ ಆರಗ ಜ್ಞಾನೇಂದ್ರ, ಎಸ್‌.ಟಿ ಸೋಮಶೇಖರ್, ಡಾ.ಕೆ ಸುಧಾಕರ್, ಬಿ.ಸಿ ನಾಗೇಶ್ ಇರುವ ಫೋಟೊಗಳನ್ನು, ವಿಡಿಯೋಗಳನ್ನು ಬಿಡುಗಡೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಮಾಡುತ್ತದೆ. ಹಾಗಿದ್ದರೆ ಏಕಾಏಕಿ ಸುದ್ದಿಯಲ್ಲಿರುವ ಈ ಸ್ಯಾಂಟ್ರೊ ರವಿ ಯಾರು? ಆತನಿಗೂ ಸರ್ಕಾರದ ನಡುವಿನ ಸಂಬಂಧವೇನು ಎಂಬುದರ ವಿವರ ಇಲ್ಲಿದೆ.

ಮಂಜುನಾಥ್ ಕೆ.ಎಸ್ ಅಲಿಯಾಸ್ ಕಿರಣ್ ಆಲಿಯಾಸ್ ಸ್ಯಾಂಟ್ರೋ ರವಿ (53) ಮಂಡ್ಯದ ನಗರದಿಂದ ಕೂಗಳತೆ ದೂರದಲ್ಲಿರುವ ಹೊಳಲು ಗ್ರಾಮದವನು. ಅವರ ತಂದೆ ಅಬಕಾರಿ ಇಲಾಖೆಯಲ್ಲಿ ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯಾಗಿದ್ದರು. ಈತನ ಪ್ರಧಾನ ಕಸುಬು ಹೆಣ್ಣು ಮಕ್ಕಳ ಕಳ್ಳಸಾಗಣೆ, ವೇಶ್ಯಾವಾಟಿಕೆ ಜಾಲವಾಗಿತ್ತು. ಹೆಣ್ಣು ಮಕ್ಕಳನ್ನು ಪ್ರೀತಿಸುವುದಾಗಿ ನಂಬಿಸಿ, ಮದುವೆಯ ನಾಟಕವಾಡಿ ಆನಂತರ ಅವರನ್ನು ಪ್ರಭಾವಿಗಳ ಬಳಿ ವೇಶ್ಯಾವಾಟಿಕೆಗೆ ತಳ್ಳುವುದು ಈತನ ಕೆಲಸವಾಗಿತ್ತು. ಇದೇ ಕೆಲಸದಲ್ಲಿ 1987ರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಧರ್ಮಸ್ಥಳಕ್ಕೆ ಓಡಿ ಹೋಗಿ ಮದುವೆಯಾದಾಗ ಸಿಕ್ಕಿಬಿದ್ದು ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದ.

ಆದರೆ ಚಾಲಾಕಿ ಬುದ್ದಿಯ ಆತ ಅನಾರೋಗ್ಯದ ನೆಪವೊಡ್ಡಿ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಲ್ಲಿಂದ ಪರಾರಿಯಾಗಿದ್ದ. ಆಗ ಆತನ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಪ್ರಧಾನವಾಗಿ ಮೈಸೂರನ್ನು ತನ್ನ ಕಾರ್ಯಕ್ಷೇತ್ರ ಮಾಡಿಕೊಂಡಿದ್ದ ಆತ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಅನೈತಿಕ ದಂಧೆಗಿಳಿದಿದ್ದ. ಆ ಸಂದರ್ಭದಲ್ಲಿ ಆತ ಹೊಸದಾಗಿ ಸ್ಯಾಂಟ್ರೊ ಕಾರೊಂದನ್ನು ಖರೀದಿಸಿ ಊರು ಊರು ಸುತ್ತುತ್ತಿದ್ದ. ಬಡವರಾದ, ದಲಿತ-ಬುಡಕಟ್ಟು ಸಮುದಾಯದ ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಮರಳು ಮಾಡಿ ಅವರನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ದಾಳಿ ಮಾಡುತ್ತಿದ್ದ ವೇಳೆಯಲ್ಲೆಲ್ಲ ತನ್ನ ಸ್ಯಾಂಟ್ರೊ ಕಾರಿನಲ್ಲಿ ತಪ್ಪಿಸಿಕೊಳ್ಳುತ್ತಿದ್ದ. ಹಾಗಾಗಿ ಆತನಿಗೆ ಸ್ಯಾಂಟ್ರೊ ರವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.

2000 ಇಸವಿಯಿಂದ 2014ರವರೆಗೆ ಆತನ ವಿರುದ್ಧ ಹೆಣ್ಣು ಮಕ್ಕಳ ಕಳ್ಳ ಸಾಗಣಿಕೆ, ಅತ್ಯಾಚಾರ, ವಂಚನೆ, ಕ್ರಿಮಿನಲ್ ಆರೋಪದ ಮೇಲೆ ಹತ್ತಾರು ಪ್ರಕರಣಗಳನ್ನು ಒಡನಾಡಿ ಸಂಸ್ಥೆ ದಾಖಲಿಸಿತ್ತು. ಆದರೆ ಪ್ರಭಾವಿಗಳ  ಕೃಪಾಕಟಾಕ್ಷದಲ್ಲಿದ್ದ ಆತ ಪೊಲೀಸರನ್ನು ಸಹ ಬುಟ್ಟಿಗೆ ಹಾಕಿಕೊಂಡು ತಪ್ಪಿಸಿಕೊಳ್ಳುತ್ತಿದ್ದ ಎನ್ನುವುದು ಅವನ ಮೇಲಿರುವ ಆರೋಪ.

2004ರಲ್ಲಿ ಸ್ಯಾಂಟ್ರೊ ರವಿ ತನ್ನ ಅನೈತಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರಿಂದ ಆತನ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿಡಲಾಗಿತ್ತು. ಅಲ್ಲಿದ್ದ ಒಂದೂವರೆ ವರ್ಷದಲ್ಲಿ ಮತ್ತಷ್ಟು ರೌಡಿಗಳ, ರಾಜಕಾರಣಿಗಳ ನಂಟು ಬೆಳೆಸಿಕೊಂಡಿದ್ದ. ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ವರ್ಗಾವಣೆ ದಂಧೆಗಿಳಿದಿದ್ದ ಎನ್ನಲಾಗಿದೆ. ಈ ಎಲ್ಲಾ ದಂಧೆಗಳಲ್ಲಿನ ಅಕ್ರಮ ಹಣವನ್ನು ತನ್ನ ಹೆಂಡತಿ ಚಂದ್ರಿಕಾ ಎಂಬುವವರ ಬ್ಯಾಂಕ್ ಖಾತೆಯಿಂದ ನಿರ್ವಹಿಸುತ್ತಿದ್ದ.

ಹೆಂಡತಿಯನ್ನೇ ಕೊಂದ ಆರೋಪ

2004ರಲ್ಲಿ ಸ್ಯಾಂಟ್ರೋ ರವಿ ಜೈಲು ಸೇರುವ ವೇಳೆಗೆ ಆತನ ಹೆಂಡತಿ ಚಂದ್ರಿಕಾರವರ ಖಾತೆಯಲ್ಲಿ 22 ಲಕ್ಷ ರೂ ಇತ್ತು ಎನ್ನಲಾಗಿದೆ. ಆದರೆ ಆತ 2006ರಲ್ಲಿ ಜೈಲಿನಿಂದ ಹೊರಬಂದಾಗ ಹಣ ಕೊಡಲು ಚಂದ್ರಿಕಾ ಮೀನಾಮೇಷ ಎಣಿಸಿದ್ದಾರೆ. ಆಗ ಹಣಕ್ಕಾಗಿ ತನ್ನ ಮಗಳನ್ನೇ ಅಪಹರಿಸಿ ಬ್ಲಾಕ್‌ಮೇಲ್ ಮಾಡಿದ್ದಾನೆ. ಆದರೆ ಚಂದ್ರಿಕಾ ಬಗ್ಗಿಲ್ಲ. ಬದಲಿಗೆ ಆತನ ವಿರುದ್ಧ ಪೊಲೀಸ್ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಹೆಂಡತಿಗೆ ಆಸಿಡ್ ಹಾಕಿ ಸುಟ್ಟು ಪಾಂಡವಪುರದ ವಿ.ಸಿ ನಾಲೆಗೆ ಎಸೆದುಕೊಂದಿದ್ದ ಎಂಬ ಆರೋಪ ಎದುರಿಸುತ್ತಿದ್ದನು.

ಕೊಲೆಯಾದ ಪತ್ನಿ ಚಂದ್ರಿಕಾಳೊಂದಿಗೆ ಸ್ಯಾಂಟ್ರೊ ರವಿ

ಆದರೆ ಈ ಸಂದರ್ಭದಲ್ಲಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ಕೊಟ್ಟಿದ್ದಲ್ಲದೆ, ಪತ್ರಿಕೆಗಳಲ್ಲಿ ಕಾಣೆಯಾಗಿದ್ದಾರೆ ಎಂಬ ಜಾಹೀರಾತು ಸಹ ಕೊಟ್ಟಿದ್ದ. ಆನಂತರ ಪೊಲೀಸರೊಂದಿಗೆ ಅಡ್ಜೆಸ್ಟ್ ಮಾಡಿಕೊಂಡು ಕೇಸು ಖುಲಾಸೆಗೊಳಿಸಿದ ಎಂಬ ಆರೋಪ ಆತನ ಮೇಲಿದೆ.

ವರ್ಗಾವಣೆ ದಂಧೆ

ರಾಜಕಾರಣಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಮೂಲಕ ಸ್ನೇಹ ಸಂಪಾದಿಸಿದ್ದ ಈತ ವರ್ಗಾವಣೆ ದಂಧೆಗೆ ಕೈಹಾಕಿದ್ದ. ಅದರಿಂದ ಬಂದ ಹಣದಲ್ಲಿ ಐಷರಾಮಿ ಜೀವನ ಸಾಗಿಸುತ್ತಿದ್ದ ಎಂಬುದನ್ನು ದುಡ್ಡಿನ ಕಂತೆಗಳೊಂದಿಗೆ ಆತ ಇರುವ ಫೋಟೊಗಳೆ ಸಾರಿ ಹೇಳುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಬರುವುದರಲ್ಲಿ ಈತನ ಪಾತ್ರವಿದೆ ಎನ್ನಲಾಗುತ್ತಿದೆ. ಬಾಂಬೆಗೆ ತೆರಳಿದ ಕೆಲ ಶಾಸಕರಿಗೆ ಹೆಣ್ಣು ಮಕ್ಕಳನ್ನು ಪೂರೈಸಿದ್ದು ಈತನೇ ಎಂಬ ಆರೋಪ ಕೇಳಿಬರುತ್ತಿದೆ.

ಬಿಜೆಪಿ ಸರ್ಕಾರ ಬಂದ ಮೇಲಂತೂ ತನ್ನ ಕಾರ್ಯಚಟುವಟಿಕೆಗಳನ್ನು ಕುಮಾರ ಕೃಪಾ ಅತಿಥಿ ಗೃಹದಿಂದಲೇ ನಡೆಸುತ್ತಿದ್ದ ಸ್ಯಾಂಟ್ರೊ ರವಿ ಕೊನೆಗೂ ಬೆತ್ತಲಾಗಿದ್ದಾನೆ. ಇತ್ತೀಚಿಗೆ ಮದುವೆಯಾಗಿದ್ದ ಮಹಿಳೆಯನ್ನು ನಿವೃತ್ತ ಐಎಎಸ್ ಅಧಿಕಾರಿಯೊಂದಿಗೆ ಹಾಸಿಗೆ ಹಂಚಿಕೊಳ್ಳಲು ಒತ್ತಾಯಿಸಿದ್ದ. ಒಪ್ಪದಿದ್ದಾಗ ಸುಳ್ಳು ಕೇಸು ಹಾಕಿ ಜೈಲಿಗೆ ಕಳಿಸಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಹಣಕ್ಕಾಗಿ ಯಾವ ಮಟ್ಟಕ್ಕೆ ಇಳಿಯಲೂ ಹೇಸದ ವ್ಯಕ್ತಿಯೇ ಸ್ಯಾಂಟ್ರೊ ರವಿ.

ಇಂತಹ ಒಬ್ಬ ವ್ಯಕ್ತಿಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸರ್ ಎಂದು ಕರೆಯುತ್ತಾರಂತೆ. ಸಚಿವರು ಆತನ ಪರವಾಗಿ ವರ್ಗಾವಣೆ ಮಾಡಿಕೊಡುತ್ತಾರೆ. ಅನೈತಿಕತೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದು. ದೂರು ನೀಡದ ವಾರವಾಗುತ್ತ ಬಂದರೂ ಸಹ ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

40% ಕಮಿಷನ್ ಹಗರಣ, ಗುತ್ತಿಗೆದಾರನ ಆತ್ಮಹತ್ಯೆ, ಪಿಎಸ್‌ಐ ಹಗರಣ, ಕರಾವಳಿಯಲ್ಲಿ ಮತೀಯ ಗೂಂಡಾಗಿರಿಗಳ ಹೆಚ್ಚಳ, ಪೆಸಿಎಂ, ಪಕ್ಷಕ್ಕೆ ರೌಡಿಗಳ ಸೇರ್ಪಡೆಯಿಂದ ಟೀಕೆಗೆ ಒಳಗಾಗಿದ್ದ ರಾಜ್ಯ ಬಿಜೆಪಿ ಸರ್ಕಾರವು ಸದ್ಯ ಸ್ಯಾಂಟ್ರೊ ರವಿ ಸಹವಾಸದಿಂದ ಮುಜುಗರಕ್ಕೆ ಸಿಲುಕಿದೆ.

ಇದನ್ನೂ ಓದಿ: ಬಿಜೆಪಿಯಿಂದ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆ ಇಂದು: ಕಾರ್ಯಕ್ರಮ ರದ್ದುಗೊಳಿಸಲು ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...