Homeಫ್ಯಾಕ್ಟ್‌ಚೆಕ್FACT CHECK : 'ಟಿಪ್ಪು ಸುಲ್ತಾನ್' ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ” ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಈ ವಿಷಯದಲ್ಲಿ ಕೋಮು ದ್ವೇಷದ ಅಂಶವಿರುವುದರಿಂದ ಸತ್ಯಾಸತ್ಯತೆ ಪರಿಶೀಲಿಸಿ, ಅದನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ನಾವು ಮಾಡಿದ್ದೇವೆ.

ಮೊದಲು ನಾವು ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಕುರಿತು ಸಿನಿಮಾ ಮಾಡುವ ಬಗ್ಗೆ ಎಲ್ಲಾದರು ಸುದ್ದಿ ಪ್ರಕಟಗೊಂಡಿದೆಯಾ? ಎಂದು ಹುಡುಕಿದ್ದೇವೆ. ಈ ವೇಳೆ ನಮಗೆ ಆ ಬಗ್ಗೆ ಯಾವುದೇ ಖಚಿತವಾದ ಸುದ್ದಿ ದೊರೆತಿಲ್ಲ. ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಆ ಬಗ್ಗೆ ಸುದ್ದಿ ಪ್ರಕಟಿಸಿರುವುದು ನಮಗೆ ಕಂಡು ಬಂದಿಲ್ಲ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ 22 ನವೆಂಬರ್ 2018ರಂದು ‘ಸೂಫಿ ಸ್ಟುಡಿಯೋ’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ‘Tipu Sultan Trailer Shah Rukh Khan New movie,टीपू सुल्तान, Mysore Tiger’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಈ ವಿಡಿಯೋವನ್ನು ಪರಿಶೀಲಿಸಿದಾಗ ಆರಂಭದಲ್ಲೇ ಸೂಚನೆಯೊಂದನ್ನು ಹಾಕಿರುವುದು ಕಂಡು ಬಂದಿದೆ. “ಇದು ಅಭಿಮಾನಿ ನಿರ್ಮಿತ ಟ್ರೈಲರ್ ಆಗಿದ್ದು, ಮನೋರಂಜನೆ ಉದ್ದೇಶಗಳಿಗಾಗಿ ಬಳಸಲಾಗಿದೆ. ಈ ವಿಡಿಯೋವನ್ನು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳಿಂದ ಬಳಸಿಕೊಳ್ಳಲಾಗಿದೆ. ವಿಡಿಯೋದ ಎಲ್ಲಾ ಹಕ್ಕುಗಳು ಮಾಲೀಕರಿಗೆ ಸೀಮಿತವಾಗಿದೆ” ಎಂದು ಸೂಚನೆಯಲ್ಲಿ ಹೇಳಲಾಗಿದೆ.

ಹಾಗಾಗಿ, ಬರೋಬ್ಬರಿ 92 ಸಾವಿರ ವೀಕ್ಷಣೆ ಪಡೆದಿರುವ ಈ ವಿಡಿಯೋ ಕೇವಲ ಮನೋರಂಜನೆ ಉದ್ದೇಶಕ್ಕಾಗಿ ಮಾಡಲಾಗಿದೆ. ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಸಿನಿಮಾ ಮಾಡುತ್ತಿರುವ ಬಗೆಗಿನ ಖಚಿತ ಮಾಹಿತಿಯಲ್ಲ ಎನ್ನಬಹುದು.

ಮೇ 8, 2020ರಂದು ‘ಇಂಡಿಯಾ ಟುಡೇ’ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ “ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆಯೇ?” ಎಂಬ ಶೀರ್ಷಿಕೆಯಲ್ಲಿ ಫ್ಯಾಕ್ಟ್‌ ಚೆಕ್ ನಡೆಸಿ ವರದಿ ಪ್ರಕಟಿಸಿತ್ತು. ಈ ವರದಿಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿ ಸುಳ್ಳು ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ, ನಟ ಶಾರುಖ್ ಖಾನ್ ಅವರು ಟಿಪ್ಪು ಸುಲ್ತಾನ್ ಕುರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ. ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ‘ಟಿಪ್ಪು ಸುಲ್ತಾನ್’ ಎಂಬ ಹೆಸರನ್ನು ಮುಂದಿಟ್ಟುಕೊಂಡು ಶಾರುಖ್ ಅವರನ್ನು ಬಹಿಷ್ಕರಿಸಲು ಹೇಳುವ ಮೂಲಕ ಮುಸ್ಲಿಮರ ವಿರುದ್ದ ದ್ವೇಷ ಹರಡುವ ಪ್ರಯತ್ನ ಮಾಡಿರುವುದು ಗೊತ್ತಾಗಿದೆ. ಅಲ್ಲದೆ, ಇದೇ ಸುಳ್ಳು ಸುದ್ದಿ ಈ ಹಿಂದೆಯೂ ಹರಡಿತ್ತು ಎಂಬುವುದು ದಿನಾಂಕಗಳನ್ನು ಪರಿಶೀಲಿಸಿದಾಗ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...