Homeಮುಖಪುಟವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ

ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ

- Advertisement -
- Advertisement -

ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು. ವಿರೋಧ ಪಕ್ಷಗಳು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಚಾರದಲ್ಲಿ ಯಾವುದೇ ಭ್ರಷ್ಟಾಚಾರ ಕಂಡುಬಂದಲ್ಲಿ, ನಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ವಿರೋಧ ಪಕ್ಷದ ನಾಯಕರು ಸಾಕ್ಷ್ಯಾಧಾರಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.

ಕೊರೊನಾ ಚಿಕಿತ್ಸೆಯಲ್ಲಿನ ಅವ್ಯವಹಾರದ ಆರೋಪಕ್ಕೆ ಒಬ್ಬ ಸಚಿವರು ಜತೆಯಲ್ಲಿ ಪ್ರವಾಸಕ್ಕೆ ಕರೆದಿದ್ದಾರೆ, ಇನ್ನೊಬ್ಬರು ಆಸ್ಪತ್ರೆಯ ಹೊಣೆ ಹೊರಲು ಹೇಳಿದ್ದಾರೆ.
ಇವರಿಬ್ಬರಿಗೂ ಒಂದೇ ಉತ್ತರ: ದಯವಿಟ್ಟು ರಾಜೀನಾಮೆ ನೀಡಿ. ನಾವು ಪ್ರವಾಸನೂ ಮಾಡ್ತೇವೆ, ಒಂದು ಆಸ್ಪತ್ರೆಯದ್ದಲ್ಲ, ಇಡೀ ರಾಜ್ಯದ ಹೊಣೆಯನ್ನೂ ಹೊರುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು.

ಸುಧಾಕರ್ ಅವರೇ, ಕೊರೊನಾ‌ ನಿಯಂತ್ರಣದ ಸಲಕರಣೆ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ, ದಾಖಲೆಗಳಿವೆ ಎಂದು ಹೇಳಿದರಷ್ಟೆ ಸಾಲದು. ಅದನ್ನು ಬಿಡುಗಡೆ‌ ಮಾಡಿ. ಮಾಹಿತಿ ಇದ್ದರೆ ಮುಚ್ಚಿಡುತ್ತಿರುವುದು ಯಾಕೆ ಎಂದು ಮುಖ್ಯಮಂತ್ರಿ ಅವರನ್ನು ಕೇಳಿ.
ಮಾಹಿತಿ ಕೇಳಿದ ನನ್ನ ಪತ್ರಕ್ಕೆ ಉತ್ತರಿಸಲು ಹೇಳಿ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಯಡಿಯೂರಪ್ಪನವರು ಯಾವುದೇ ಅವ್ಯವಹಾರ ನಡೆದಿಲ್ಲ. ಇದರ ಬಗ್ಗೆ ಪರಿಶೀಲಿಸಲಿ. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಇಡೀ ದೇಶವೆ ಕೊರೊನಾ ಜೊತೆ ಬದುಕುವುದನ್ನು ಕಲಿಯುತ್ತಿದೆ. ಇದು ಬಿಟ್ಟು ಬೇರೆ ದಾರಿಯಿಲ್ಲ. ನಾವು ಆಂಬುಲೆನ್ಸ್‌ಗಳ್ನು ಹೆಚ್ಚು ಮಾಡುತ್ತಿದ್ದೇವೆ, ಸೋಂಕು ಹರಡದಂತೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.


ಇದನ್ನೂ ಓದಿ: ಶ್ರೀರಾಮುಲುರವರೆ, ನಿಮ್ಮ ಅಣ್ತಮ್ಮಂದಿರು ಜೈಲು ಸೇರಿದ್ದು ನೆನಪಿರಲಿ: ಸಿದ್ದರಾಮಯ್ಯ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ...

0
ರಾಜಸ್ಥಾನದಲ್ಲಿ ಭಾನುವಾರ (ಏ.21) ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಸುದ್ದಿ ಮತ್ತು ದ್ವೇಷ ಹರಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರಿಕ ಸಂಸ್ಥೆಗಳು...