Homeಕರ್ನಾಟಕಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

- Advertisement -
- Advertisement -

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಈ ನಡೆಯಿಂದ ಕೆಂಡವಾಗಿರುವ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದೆ.

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು

0
2014 ಮತ್ತು, 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...