Homeಕರೋನಾ ತಲ್ಲಣಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಬರುತ್ತಿದ್ದ ಆಮ್ಲಜನಕದ ವಾಹನಗಳನ್ನು ರೈತರು ದೆಹಲಿಯ ಗಡಿಗಳಲ್ಲಿ ತಡೆ ಹಿಡಿಯುತ್ತಿದ್ದಾರೆ ಎಂಬ ಬಿಜೆಪಿ ಸಂಸದನ ಆರೋಪಕ್ಕೆ ಬ್ಯಾರಿಕೇಡ್ ಹಾಕಿರುವುದು ಸರ್ಕಾರ, ರೈತರಲ್ಲ ಎನ್ನುವ ಮೂಲಕ ಪ್ರತಿಭಟನಾ ನಿರತ ರೈತರು ತಿರುಗೇಟು ನೀಡಿದ್ದಾರೆ.

ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಿಂದ ದೆಹಲಿಗೆ ವೈದ್ಯಕೀಯ ಬಳಕೆಯ ಆಮ್ಲಜನಕದ ಸಾಗಣೆಗೆ ತೊಂದರೆಯಾಗಿದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮಂಗಳವಾರ ಆರೋಪಿಸಿದ್ದರು.

ಸಂಸದ ಪವೇಶ್ ವರ್ಮಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈತರು, ’ಪ್ರತಿಭಟನೆ ನಡೆಸುತ್ತಿರುವ ರೈತರು ವೈದ್ಯಕೀಯ ಆಮ್ಲಜನಕ ವಾಹಕಗಳನ್ನು ದೆಹಲಿಗೆ ಬಿಡುತ್ತಿಲ್ಲ ಎಂದು ಅಪ್ರಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಅಗತ್ಯ ಸೇವೆಗೆ ಅಡ್ಡಿಪಡಿಸಿಲ್ಲ’ ಎಂದು ರೈತರು ಆರೋಪಗಳನ್ನು ತಿರಸ್ಕರಿಸಿದರು.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮೇ 10 ರಂದು `ರೈತರ ರಾಷ್ಟ್ರೀಯ ಸಮಾವೇಶ’

 

ರೈತ ಸಂಘಗಳ ಪ್ರತಿನಿಧಿ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಬುಧವಾರ, ತಮ್ಮ ಆಂದೋಲನ ಆರಂಭವಾದಾಗಿನಿಂದ ತುರ್ತು ಸೇವೆಗಳಿಗೆ ಒಂದು ರಸ್ತೆಯನ್ನು ತೆರೆದಿಟ್ಟಿದೆ ಎಂದು ಹೇಳಿದೆ.

“ಒಂದೇ ಒಂದು ಆಂಬ್ಯುಲೆನ್ಸ್ ಅಥವಾ ಅಗತ್ಯ ಸರಕುಗಳ ಸೇವೆಯನ್ನು ನಿಲ್ಲಿಸಲಾಗಿಲ್ಲ. ಸರ್ಕಾರವೇ ಬಲವಾದ ಮತ್ತು ಬಹುಪದರದ ಬ್ಯಾರಿಕೇಡ್‌ಗಳನ್ನು ರಸ್ತೆಗಳಲ್ಲಿ ಹಾಕಿದೆ, ರೈತರಲ್ಲ. ರೈತರು ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬರು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

’ಸರ್ಕಾರವೇ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ದೆಹಲಿಗೆ ಆಮ್ಲಜನಕವನ್ನು ಬಿಡುವುದಿಲ್ಲ ಎಂದು ರೈತರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿ. ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ  ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ. ಕೃಷಿಯ ಬಗ್ಗೆ ಸರ್ಕಾರದ ತಾರತಮ್ಯ ನೀತಿಯ ವಿರೋಧಿ ಪ್ರತಿಭಟಿಸುತ್ತಿದ್ದೇವೆ” ಎಂದು ರೈತ ಸಂಘಟನೆ ಹೇಳಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿ ಮಾಡಿದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ಲಕ್ಷಾಂತರ ರೈತರು ಕಳೆದ ನವೆಂಬರ್‌ನಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ:  ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...