Homeಕರ್ನಾಟಕ'ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..'; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

‘ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..’; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

- Advertisement -
- Advertisement -

ಹರಿಯಾಣದ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀಟ್ (NEET) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ, ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ” ಎಂದು ವಿವರಿಸಿದ್ದಾರೆ.

“ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯವೇ ಸರಿ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, ‘ಮಾರ್ಕಿಂಗ್ ಪ್ರಕ್ರಿಯೆ’ ಮತ್ತು ‘ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ’ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ? ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

“ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ” ಎಂದಿದ್ದಾರೆ.

“ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ” ಎಂದು ಹೇಳಿದ್ದಾರೆ.

“ಎನ್‌ಟಿಎ ಪ್ರಾಸ್ಪೆಕ್ಟಸ್, ನೀಟ್ ಬ್ರೋಷರ್ ಮತ್ತು ಸರ್ಕಾರಿ ಸೂಚನೆಗಳಲ್ಲಿ ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ” ಎಂದು ಸಿಎಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸಿ..’; ಡಿಎಂಕೆ, ಎಐಎಡಿಎಂಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...