Homeಕರ್ನಾಟಕ‘ಅನ್ಯಾಯವಾಗಿದೆ’: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಕವಿತಾ ರೆಡ್ಡಿ ಅಸಮಾಧಾನ

‘ಅನ್ಯಾಯವಾಗಿದೆ’: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಕವಿತಾ ರೆಡ್ಡಿ ಅಸಮಾಧಾನ

- Advertisement -
- Advertisement -

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿರುವ ಕರ್ನಾಟಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ, “ಅನ್ಯಾಯವಾಗಿದೆ” ಎಂದಿದ್ದಾರೆ.

ಟಿಕೆಟ್ ಕೈತಪ್ಪಿದರೂ ಕೂಡ ಸೈದ್ಧಾಂತಿಕ ಹೋರಾಟಕ್ಕೆ ಪಕ್ಷದ ನಾಯಕತ್ವದೊಂದಿಗೆ ನಿಲ್ಲುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ತನ್ನ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿತು. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಉಮಾಪತಿ ಶ್ರೀನಿವಾಸಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

“2018ರಲ್ಲೂ ನನಗೆ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಮಯದಲ್ಲಿ ಜಾತಿ ಸಂಯೋಜನೆಯ ಕಾರಣವನ್ನು ಪಕ್ಷದ ನಾಯಕರು ನೀಡಿದ್ದರು. ನಂತರದಲ್ಲಿ ನನಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದರು. ಕ್ಷೇತ್ರದಲ್ಲಿ 15 ವರ್ಷ ಕೆಲಸ ಮಾಡಿದವರಿಗೆ ಘೋರ ಅನ್ಯಾಯವಾಗಿದೆ” ಎಂದು ಕವಿತಾ ಅವರು ತಿಳಿಸಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್’ ವರದಿ ಮಾಡಿದೆ.

“ಹೋರಾಟ ಮುಂದುವರಿಸಿದ್ದೇನೆ. ಕೊನೆಯ ಗಳಿಗೆಯವರೆಗೂ ಟಿಕೆಟ್ ದೊರಕುವ ಭರವಸೆಯಲ್ಲಿದ್ದೇನೆ” ಎಂದಿದ್ದಾರೆ. ರಾಜಕೀಯ ಪಕ್ಷಗಳಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆ ಇರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 109 ಮಹಿಳೆಯರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ವರದಿಯಾಗಿದೆ. “ಪುರುಷರ ಅಧೀನದಲ್ಲಿರುವ ಮಹಿಳೆಯರಿಗೆ ಅವಕಾಶ ಕಲ್ಪಿಸಲು ಸ್ವತಂತ್ರ ಮಹಿಳೆಯರನ್ನು ಬದಿಗಿಟ್ಟಿರುವುದು ದುರದೃಷ್ಟಕರ. ಅವರು ಗೆಲ್ಲುವ ಬಗ್ಗೆ ಮಾತನಾಡುತ್ತಾರೆ, ಆದರೆ ಅದನ್ನು ಯಾರು ನಿರ್ಧರಿಸುತ್ತಾರೆ” ಎಂದು  ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಗಳನ್ನು ಪ್ರಶ್ನಿಸಿದ ಕವಿತಾ, ತಮ್ಮ ಪಕ್ಷದ ದೊಡ್ಡ ಹೋರಾಟಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. “ಸಿದ್ಧಾಂತ ಮುಖ್ಯ – ನಾನು ತುಂಬಾ ನಿರಾಶೆಗೊಂಡಿದ್ದೇನೆ, ಆದರೆ ನಾನು ಮೌನವಾಗಿ ಮತ್ತು ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ” ಎಂದಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಮೂರು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಸತೀಶ್ ರೆಡ್ಡಿ ಸತತ ನಾಲ್ಕನೇ ಅವಧಿಗೆ ಕಣದಲ್ಲಿದ್ದಾರೆ. ಕ್ಷೇತ್ರದ ತೀವ್ರ ಮೂಲಸೌಕರ್ಯ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಕವಿತಾ ಪ್ರಸ್ತಾಪಿಸಿದ್ದಾರೆ. “ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡಕ್ಕೂ ಪ್ರಯಾಣಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ...

0
ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ ಏಕೈಕ ಪಕ್ಷ ಬಿಜೆಪಿ"...