Homeಮುಖಪುಟನಾಗ್ಪುರದಲ್ಲಿ ನಿಂತು ಚಡ್ಡಿ ಧರಿಸಿ ಭಾಷಣ ಮಾಡುವುದು ರಾಷ್ಟ್ರೀಯತೆಯಲ್ಲ: ಸಚಿನ್ ಪೈಲಟ್

ನಾಗ್ಪುರದಲ್ಲಿ ನಿಂತು ಚಡ್ಡಿ ಧರಿಸಿ ಭಾಷಣ ಮಾಡುವುದು ರಾಷ್ಟ್ರೀಯತೆಯಲ್ಲ: ಸಚಿನ್ ಪೈಲಟ್

- Advertisement -
- Advertisement -

ನಾಗ್ಪುರದಲ್ಲಿ ನಿಂತು ಚಡ್ಡಿ(ಹಾಫ್‌ ಪ್ಯಾಂಟ್) ಧರಿಸಿ ಫೋನ್ ಮೂಲಕ ಭಾಷಣಗಳನ್ನು ಮಾಡುವುದು ರಾಷ್ಟ್ರೀಯತೆಯಲ್ಲ. ಬದಲಾಗಿ ರೈತರ ಕಲ್ಯಾಣದ ಬಗ್ಗೆ ಮಾತನಾಡುವುದೆ ನಿಜವಾದ ರಾಷ್ಟ್ರೀಯತೆ ಎಂದು ಆರೆಸ್ಸೆಸ್ ವಿರುದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಆಯೋಜಿಸಿದ್ದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒಕ್ಕೂಟ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

“ರೈತರ ಬೇಡಿಕೆಗಳು ಒಕ್ಕೂಟ ಸರ್ಕಾರದಿಂದ ಬಗೆಹರಿಸಲು ಸಾಧ್ಯವಾಗದಷ್ಟು ದೊಡ್ಡ ಸಮಸ್ಯೆಯಲ್ಲ. ಕೆಲವು ಕಾಯ್ದೆಗಳನ್ನು ಹಿಂಪಡೆಯುವುದರಿಂದ ಯಾವುದೇ ತೊಂದರೆಯಿಲ್ಲ ಎಂಬುದನ್ನು ಒಕ್ಕೂಟ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕಾನೂನುಗಳನ್ನು ಹಿಂತೆಗೆದುಕೊಂಡರೆ ನಾವು ಧನ್ಯವಾದ ಸಲ್ಲಿಸಲಿದ್ದೇವೆ. ಆದರೆ ಅವರು ಕಾನೂನು ರದ್ದುಗೊಳಿಸುವುದಿಲ್ಲ ಎಂಬ ನಿರ್ಧಾರದಲ್ಲಿ ಅಚಲವಾಗಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾಯ್ದೆಯಲ್ಲಿ ತಿದ್ದುಪಡಿ ಮಾಡುವುದು, ಅವುಗಳನ್ನು ಹಿಂತೆಗೆದುಕೊಳ್ಳುವುದು ಅಥವಾ ತಪ್ಪನ್ನು ಒಪ್ಪಿಕೊಳ್ಳುವುದು ಇವೆಲ್ಲವೂ ನಾಯಕರ ವರ್ಚಸ್ಸನ್ನು ಹೆಚ್ಚಿಸುತ್ತದೆ. ಇದು ನಾಚಿಕೆಗೇಡಿನ ವಿಷಯವಲ್ಲ” ಎಂದು ಸಚಿನ್ ಪೈಲಟ್‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

“ತಮ್ಮ ಹಕ್ಕುಗಳಿಗಾಗಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾವೋವಾದಿಗಳು, ಪತ್ಯೇಕತಾವಾದಿಗಳು, ಉಗ್ರರು ಎಂದು ಕರೆಯಲಾಗುತ್ತಿದೆ. ಒಕ್ಕೂಟ ಸರ್ಕಾರದಲ್ಲಿ ರೈತರ ಕಲ್ಯಾಣಕ್ಕಾಗಿ ಯೋಚಿಸುವ ಮುಖಂಡರಿಲ್ಲದ ಕಾರಣ ಈ ರೀತಿಯಾಗಿ ಯೋಚಿಸುತ್ತಾರೆ. ರೈತರಿಗೆ ಬೆಂಬಲ ಸೂಚಿಸುವುದು ರಾಜಕೀಯವಾದರೆ ನಾವದನ್ನು ಮಾಡುತ್ತಿದ್ದೇವೆ. ನಾವು ರೈತರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸಲಿದ್ದೇವೆ” ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಗಳ ವಿರುದ್ಧ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ನಲವತ್ತನೇ ದಿನಕ್ಕೆ ಕಾಲಿಟ್ಟದೆ. ಒಕ್ಕೂಟ ಸರ್ಕಾರ ಇದುವರೆಗೂ ಆರು ಬಾರಿ ರೈತರೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲವೂ ವಿಫಲವಾಗಿದೆ. ಸೋಮವಾರ(ಇಂದು) ಏಳನೇ ಸುತ್ತಿನ ಮಾತುಕತೆಗೆ ರೈತರನ್ನು ಸರ್ಕಾರ ಮತ್ತೇ ಆಹ್ವಾನಿಸಿದೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...