Homeರಾಷ್ಟ್ರೀಯಜನರಿಗೆ ಏನು ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ; ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು...

ಜನರಿಗೆ ಏನು ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ; ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು ತಿನ್ನುವ ಸ್ವಾತಂತ್ರ್ಯವಿದೆ: ಕೇಂದ್ರ ಬಿಜೆಪಿ ಸಚಿವ

- Advertisement -
- Advertisement -

ಜನರು ಯಾವ ಆಹಾರವನ್ನು ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ, ದೇಶದ ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು ತಿನ್ನುವ ಸ್ವಾತಂತ್ರ್ಯವಿದೆ ಎಂದು ಒಕ್ಕೂಟ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ದೇಶಗಳಾದ್ಯಂತ ಹೆಚ್ಚುತ್ತಿರುವ ಧಾರ್ಮಿಕ ಗಲಭೆಗಳ ನಡುವೆ ಮಾತನಾಡಿರುವ ಅಬ್ಬಾಸ್‌ ನಖ್ವಿ, “ಧಾರ್ಮಿಕ ಸಮುದಾಯಗಳ ನಡುವೆ ಅಸಹಿಷ್ಣುತೆ ಬೆಳೆಯುತ್ತಿಲ್ಲ ಮತ್ತು ಜನರಿಗೆ ತಮ್ಮ ನಂಬಿಕೆಯ ಆಚರಣೆಯನ್ನು ಆಚರಿಸಲು ಸ್ವಾತಂತ್ರ್ಯ ಇದೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಹನುಮ ಜಯಂತಿಯ ಮೆರವಣಿಗೆಯಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದ ನಂತರ ಅವರು ಈ ಹೇಳಿಕೆ ನೀಡಿದ್ದು ಮಹತ್ವವನ್ನು ಪಡೆದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದವರು ಭಾರತದ ಅಂತರ್ಗತ ಸಂಸ್ಕೃತಿ ಮತ್ತು ಬದ್ಧತೆಯನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಬ್ಬಾಸ್‌ ನಖ್ವಿ ಎಕನಾಮಿಕ್ ಟೈಮ್ಸ್‌ ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಯಾವ ಆಹಾರ ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು ತಿನ್ನುವ ಸ್ವಾತಂತ್ರ್ಯವಿದೆ ಎಂದು ನಖ್ವಿ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ರಾಮನವಮಿಯ ದಿನ ಹಾಸ್ಟೇಲ್‌ನಲ್ಲಿ ಮಾಂಸಾಹಾರ ಮಾಡಿದ್ದಕ್ಕಾಗಿ ಜೆಎನ್‌ಯುವಿನಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಹಿಂಸಾಚಾರ ನಡೆಸಿದ್ದರು. ಈ ದಾಳಿಯಲ್ಲಿ ಹಲವಾರು ವಿದ್ಯಾರ್ಥಿಗಳು ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ದೆಹಲಿಯಲ್ಲಿ ನಡೆದ ಘರ್ಷಣೆಯಲ್ಲಿ ಆರು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಳೆದ ವಾರಗಳಲ್ಲಿ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಘಟನೆಗಳು ನಡೆದಿವೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹೇರಲಾಗಿರುವ ಹಿಜಾಬ್ ನಿಷೇಧದ ವಿವಾದದ ಪ್ರಶ್ನೆಗೆ ಉತ್ತರಿಸಿರುವ ನಖ್ವಿ, “ಭಾರತದಲ್ಲಿ ಹಿಜಾಬ್ ಮೇಲೆ ಯಾವುದೇ ನಿಷೇಧವಿಲ್ಲ. ಪ್ರತಿಯೊಂದು ಕಾಲೇಜಿನಲ್ಲಿ ಡ್ರೆಸ್ ಕೋಡ್, ಶಿಸ್ತುಗಳಿವೆ. ಅದನ್ನು ಸ್ವೀಕರಿಸಲು ಅಥವಾ ಇಷ್ಟಪಡಲು ಸಾಧ್ಯವಾಗದವರು ಬೇರೆ ಸಂಸ್ಥೆಯನ್ನು ಆಯ್ಕೆ ಮಾಡಬಹುದು” ಎಂದು ಸಚಿವರು ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...