Homeಮುಖಪುಟಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿಸುತ್ತಿರುವ ಶಾಹೀನ್ ಬಾಗ್‌ನ ಮಹಿಳೆಯರು ಮಾಜಿ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ವಜಾಹತ್ ಹಬೀಬುಲ್ಲಾ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು ಕೇಂದ್ರ ಸರ್ಕಾರ ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಯಾವುದೇ ಸಂವಾದ ನಡೆಸಿಲ್ಲ ಎಂದು ದೂರಿದ್ದಾರೆ. ಹಾಗಾಗಿ ಸಿಎಎ ವಿರೋಧಿ ಅರ್ಜಿಗಳನ್ನು ಉನ್ನತ ನ್ಯಾಯಾಲಯವು ಶೀಘ್ರವಾಗಿ ಆಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಾಹೀನ್ ಬಾಗ್‌ ಪ್ರತಿಭಟನಾಕಾರನ್ನು ತೆರವುಗೊಳಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮಧ್ಯಪ್ರವೇಶಿಸಿರುವ ಹಬೀಬುಲ್ಲಾ, ಪ್ರತಿಭಟನೆ ಹೆಚ್ಚಾಗಿ ಶಾಂತಿಯುತವಾಗಿದೆ ಮತ್ತು ಮಹಿಳೆಯರ ಪ್ರತಿಭಟನಾ ಸ್ಥಳವು ಅವರ ದೃಷ್ಟಿಕೋನವನ್ನು ನ್ಯಾಯಾಲಯದ ಮುಂದೆ ಇರಿಸಲು ವಿನಂತಿಸಿದೆ ಎಂದು ಕಳೆದ ವಾರ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾವು ದೇಶದ ಹೆಮ್ಮೆಯ ಪ್ರಜೆಗಳೆಂದು ಪುನರುಚ್ಚರಿಸಿದ ಮಹಿಳೆಯರು, ತಮ್ಮ ಕಳವಳ ಮತ್ತು ಅಭಿಪ್ರಾಯಗಳನ್ನು ಅಫಿಡವಿಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ರಾಷ್ಟ್ರ ವಿರೋಧಿ ಮತ್ತು ಪಾಕಿಸ್ತಾನಿಗಳೆಂದು ಹಣೆಪಟ್ಟಿ ಕಟ್ಟಿರುವುದಕ್ಕೆ ತೀವ್ರ ದುಃಖವನ್ನು ತೋಡಿಕೊಂಡಿದ್ದಾರೆ ಎಂದು ಹಬೀಬುಲ್ಲಾ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ.

“ಅವರು ದೇಶದ ಹೆಮ್ಮೆಯ ಪ್ರಜೆಗಳಾಗಿದ್ದರೂ ಸಹ ಅವರ ಬಗ್ಗೆ ವಿವಿಧ ರಾಜಕೀಯ ಭಾಷಣಗಳಲ್ಲಿ ಮತ್ತು ಮಾಧ್ಯಮಗಳ ಒಂದು ವಿಭಾಗವು ರಾಷ್ಟ್ರ ವಿರೋಧಿ / ಹೊರಗಿನವರು / ದೇಶದ್ರೋಹಿಗಳು / ಪಾಕಿಸ್ತಾನಿಗಳು ಎಂದು ಬಿಂಬಿಸಿರುವುದಕ್ಕೆ ತೀವ್ರವಾಗಿ ದುಃಖಿತರಾಗಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ “ಅವರ ಉಳಿವು ಮತ್ತು ಅಸ್ತಿತ್ವಕ್ಕೆ ಮರಣದಂಡನೆಯಾಗಿ ಪರಿಣಮಿಸಿದೆ.” ಹಾಗಾಗಿ ಮಹಿಳೆಯರು ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ಶಾಂತಿಯುತ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಗಾಗಿ ಅದೇ ನಿರ್ದಿಷ್ಟ ತಾಣವನ್ನು ಆರಿಸಿಕೊಂಡಿದ್ದೇಕೆ ಎಂಬ ಪ್ರಶ್ನೆಗೆ “ಆ ರಸ್ತೆಯು ಶಾಹೀನ್‌ ಬಾಗ್‌ ಏರಿಯಾದ ಮಧ್ಯಭಾಗದಲ್ಲಿದ್ದು, ಇದು ಅವರಿಗೆ ಅಗತ್ಯವಾದ ಭದ್ರತೆಯನ್ನು ನೀಡುತ್ತದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆದರೆ ಎದುರಾಗಬಹುದಾದ ಬೆದರಿಕೆ ಮತ್ತು ದಾಳಿಯ ಸಾಧ್ಯತೆಗಳು ಇಲ್ಲಿ ಗಣನೀಯವಾಗಿ ಕಡಿಮೆಯಿವೆ” ಎಂದು ಉತ್ತರಿಸಿದ್ದಾರೆ.

ಪ್ರತಿಭಟನೆಯೊಂದಿಗೆ ಸಂಪರ್ಕವಿಲ್ಲದ ರಸ್ತೆಗಳನ್ನು ಪೊಲೀಸರು ಅನಗತ್ಯವಾಗಿ ಬ್ಯಾರಿಕೇಡ್ ಹಾಡಿ ಬಂದ್‌ ಮಾಡುವ ಮೂಲಕ “ಪ್ರತಿಭಟನಾಕಾರರು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ” ಆ ರಸ್ತೆಗಳನ್ನು ಪೊಲೀಸರು ನಿರ್ಬಂಧಸಿರುವುದರಿಂದಲೇ ಅಸ್ತವ್ಯಸ್ತ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಅಫಿಡವಿಟ್‌ನಲ್ಲಿ ಹಬೀಬುಲ್ಲಾ ಹೇಳಿದ್ದಾರೆ.

ಕಳೆದ ಸೋಮವಾರ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಸಂಜಯ್ ಹೆಗ್ಡೆ ಮತ್ತು ವಕೀಲೆ ಸಾಧನಾ ರಾಮಚಂದ್ರನ್ ಅವರಿಗೆ ಪ್ರತಿಭಟನಾಕಾರರೊಂದಿಗೆ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಿದೆ.

ಪ್ರತಿಭಟಿಸುವ ಹಕ್ಕು ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದ್ದು, ಆದರೆ ಇಂತಹ ಪ್ರತಿಭಟನೆಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಅನಿರ್ದಿಷ್ಟ ಅವಧಿಯವರೆಗೆ ನಡೆಸಲಾಗುವುದಿಲ್ಲ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...