Homeಮುಖಪುಟದೇವೇಗೌಡರಂತಹ ಪಳಗಿದ ರಾಜಕಾರಣಿ ಆಧಾರರಹಿತ ಸುಳ್ಳು ಹೇಳಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್

ದೇವೇಗೌಡರಂತಹ ಪಳಗಿದ ರಾಜಕಾರಣಿ ಆಧಾರರಹಿತ ಸುಳ್ಳು ಹೇಳಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್

- Advertisement -
- Advertisement -

ಬಿಜೆಪಿಯೊಂದಿಗೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಕೇರಳ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಈ ವಿಚಾರವಾಗಿ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿರುವ ಪಿಣರಾಯಿ ವಿಜಯನ್, ”ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದ್ದಾರೆ.

”ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿಪಿಐ(ಎಂ) ಎಂದಿಗೂ ಸಂಘ ಪರಿವಾರದ ವಿರುದ್ಧದ ಹೋರಾಟದಲ್ಲಿ ಅಚಲ ಮತ್ತು ಮಣಿಯದ ಶಕ್ತಿಯಾಗಿದೆ. ನಮ್ಮ ನಿಲುವಿನಲ್ಲಿ ಅಸ್ಪಷ್ಟತೆಗೆ ಅವಕಾಶವಿಲ್ಲ” ಎಂದು ಪಿಣರಾಯಿ ವಿಜಯನ್ ಬರೆದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯಿಂದ ಜೆಡಿಎಸ್​​ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಅನೇಕರು ಈಗಾಗಾಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪಕ್ಷದ ರಾಜ್ಯಾಧ್ಯಕ್ಷ ತಾವು.. ಆದರೆ ತಮ್ಮ ಸಮ್ಮತಿ ಇಲ್ಲದೆ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು.

ಇಬ್ರಾಹಿಂ ಅವರ ವಿರೋಧದ ಹೇಳಿಕೆ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಅವರು, ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆಗೊಳಿಸಿದ್ದಾರೆ.

ಆ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ದೇವೇಗೌಡ ಅವರು, ಮೈತ್ರಿ ವಿಚಾರವಾಗಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಇದೇ ವೇಳೆ ಕೇರಳ ಮುಖ್ಯಮಂತ್ರಿ ನಮ್ಮ ಮೈತ್ರಿಗೆ ಒಪ್ಪಿದ್ದಾರೆಂದು ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ್ದ PIL ವಜಾಗೊಳಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...