Homeಮುಖಪುಟಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ಸತ್ಯದ ಹಾದಿಯಲ್ಲಿ ಲಕ್ಷಾಂತರ ತೊಂದರೆಗಳಿವೆ, ಆದರೆ ಸತ್ಯ ಯಾವಾಗಲೂ ಮೇಲುಗೈ ಸಾಧಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದು, "ಸಂಕಷ್ಟದ ಸಮಯದಲ್ಲಿ ಸೋನು ಸೋದ್ ಸಹಾಯ ಮಾಡಿದ ಲಕ್ಷಾಂತರ ಕುಟುಂಬಗಳ ಆಶೀರ್ವಾದ ಅವರ ಮೇಲಿದೆ" ಎಂದಿದ್ದಾರೆ.

- Advertisement -
- Advertisement -

ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಸಂಸ್ಥೆಯ ಮೇಲೆ ಐಟಿ ಕಾರ್ಯಾಚರಣೆ ಮಾಡಿದ್ದು, ಇದನ್ನು ಐಟಿ ‘ಸರ್ವೇ’ ಎಂದು ಕರೆದಿದೆ ಎಂದು ಮೂಲಗಳು ತಿಳಿಸಿವೆ.

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೋವಿಡ್ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಈವರೆಗೆ ಯಾವುದೇ ರಾಜಕೀಯ ಆಸಕ್ತಿಯನ್ನು ಸೂದ್ ವ್ಯಕ್ತಪಡಿಸಿಲ್ಲ. ಕೇಜ್ರಿವಾಲ್‌ ಅವರನ್ನು ಭೇಟಿಯಾದ ಬಳಿಕ ರಾಜಕೀಯ ಊಹಾಪೋಹಗಳು ಹರಿದಾಡುತ್ತಿವೆ. ಮುಂದಿನ ಪಂಜಾಬ್‌ ಚುನಾವಣೆಯಲ್ಲಿ ಸೂದ್‌ ಸ್ಪರ್ಧಿಸಬಹುದು ಎಂದು ವದಂತಿಗಳು ಹಬ್ಬಿವೆ. ಇದೆಲ್ಲ ಊಹಾಪೋಹಗಳಿಗೂ ಐಟಿ ಕಾರ್ಯಾಚರಣೆಗೂ ಸಂಬಂಧವಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

“ರಾಜಕೀಯ ವಿದ್ಯಮಾನಗಳಿಗೂ ಐಟಿ ಕಾರ್ಯಾಚರಣೆಗೂ ಯಾವುದೇ ಸಂಬಂಧವಿಲ್ಲ. ಯಾರು ಯಾರನ್ನಾದರೂ ಭೇಟಿಯಾಗಬಹುದು. ಐಟಿ ಕೈಗೊಂಡಿರುವುದು ರೈಡ್ ಅಲ್ಲ, ಕೇವಲ ಸರ್ಚ್‌ ಅಷ್ಟೇ. ಐಟಿಯವರು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ” ಎಂದು ಬಿಜೆಪಿ ವಕ್ತಾರ ಆಸಿಫ್ ಭಾಮ್ಲಾ ಹೇಳಿದ್ದಾರೆ.

“ಸತ್ಯದ ಹಾದಿಯಲ್ಲಿ ಲಕ್ಷಾಂತರ ತೊಂದರೆಗಳಿವೆ, ಆದರೆ ಸತ್ಯ ಯಾವಾಗಲೂ ಮೇಲುಗೈ ಸಾಧಿಸುತ್ತದೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದು, “ಸಂಕಷ್ಟದ ಸಮಯದಲ್ಲಿ ಸೋನು ಸೋದ್ ಸಹಾಯ ಮಾಡಿದ ಲಕ್ಷಾಂತರ ಕುಟುಂಬಗಳ ಆಶೀರ್ವಾದ ಅವರ ಮೇಲಿದೆ” ಎಂದಿದ್ದಾರೆ. ಶಿವಸೇನೆ ಕೂಡ ಐಟಿ ಕಾರ್ಯಾಚರಣೆಯನ್ನು ಖಂಡಿಸಿದೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದ ಆಪತ್ಬಾಂಧವ ನಟ ಸೋನು ಸೂದ್‌ಗಾಗಿ ದೇವಾಲಯ ಕಟ್ಟಿದ ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...