Homeಮುಖಪುಟಕೇಂದ್ರದ ವಿರುದ್ದ ಧ್ವನಿ ಎತ್ತುತ್ತಿದ್ದ ನಟಿ ತಾಪ್ಸಿ ಪನ್ನು ಆಸ್ತಿಗಳ ಮೇಲೆ ಐಟಿ ದಾಳಿ

ಕೇಂದ್ರದ ವಿರುದ್ದ ಧ್ವನಿ ಎತ್ತುತ್ತಿದ್ದ ನಟಿ ತಾಪ್ಸಿ ಪನ್ನು ಆಸ್ತಿಗಳ ಮೇಲೆ ಐಟಿ ದಾಳಿ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಖ್ಯಾತ ಬಾಲಿವುಡ್ ನಟಿ ತಾಪ್ಸಿ ಪನ್ನು ಮತ್ತು ಚಿತ್ರ ನಿರ್ಮಾಪಕ ಅನುರಾಗ್‌ ಕಶ್ಯಪ್ ಅವರ ಆಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಚಲನಚಿತ್ರ ನಿರ್ಮಾಪಕ ವಿಕಾಸ್ ಬಹ್ಲ್ ಅವರ ಆಸ್ತಿಗಳ ಮೇಲೆ ಕೂಡಾ ದಾಳಿ ನಡೆಸಲಾಗಿದೆ ಎಂದು ನ್ಯೂಸ್ 18 ವರದಿ ಮಾಡಿದೆ. ಇಲಾಖೆಯು ಮುಂಬೈ ಮತ್ತು ಇತರ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದ್ದು, ಈ ಶೋಧವು ‘ಫ್ಯಾಂಟಮ್ ಫಿಲ್ಮ್’‌ ಕಂಪೆನಿಯ ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಪ್ರಧಾನಿಯೇ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ; ಇವರು ಮಾಡಿದ್ದು ಸರಿಯೇ?- ಸ್ಪಷ್ಟನೆ ಕೇಳಿದ ಕೇಂದ್ರ

ಈ ವರ್ಷದ ಜನವರಿಯಲ್ಲಿ, ಮಧು ಮಾಂಟೆನಾ ಅವರು ಫ್ಯಾಂಟಮ್ ಫಿಲ್ಮ್ಸ್‌‌ನಲ್ಲಿ ಚಲನಚಿತ್ರ ನಿರ್ಮಾಪಕರಾದ ಅನುರಾಗ್ ಕಶ್ಯಪ್, ವಿಕ್ರಮ್ ಮೋಟ್ವಾನೆ ಮತ್ತು ವಿಕಾಸ್ ಬಹ್ಲ್ ಅವರ ಷೇರುಗಳನ್ನು ಖರೀದಿಸಿದ್ದರು. ಈ ಮೂಲಕ ಕಂಪನಿಯಿಂದ ಕಶ್ಯಪ್, ಮೋಟ್ವಾನೆ ಮತ್ತು ಬಹ್ಲ್ ಅವರು ಅಧಿಕೃತವಾಗಿ ನಿರ್ಗಮಿಸಿದ್ದರು.

ಈ ಪ್ರೊಡಕ್ಷನ್‌‌ ಮತ್ತು ವಿತರಣಾ ಕಂಪನಿಯನ್ನು 2011 ರಲ್ಲಿ ಮಾಂಟೆನಾ, ಕಶ್ಯಪ್, ಮೋಟ್ವಾನೆ ಮತ್ತು ಬಹ್ಲ್ ಸ್ಥಾಪಿಸಿದ್ದರು. 2015 ರಲ್ಲಿ ರಿಲಯನ್ಸ್ ಎಂಟರ್‌ಟೈನ್‌ಮೆಂಟ್ ಈ ಕಂಪನಿಯ 50% ಪಾಲನ್ನು ಪಡೆದುಕೊಂಡಿತ್ತು.

ಅಕ್ಟೋಬರ್ 2018 ರಲ್ಲಿ, ಬಹ್ಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಬಹಿರಂಗವಾಗಿ ಕೇಳಿಬಂದ ನಂತರ ತಂಡವು ಒಟ್ಟಾಗಿ ಕೆಲಸ ಮಾಡದಿರಲು ನಿರ್ಧರಿಸಿತು. ಆದರೆ ನಂತರ ರಿಲಯನ್ಸ್ ಎಂಟರ್‌ಟೈನ್‌ಮೆಂಟ್‌ನ ಆಂತರಿಕ ದೂರುಗಳ ಸಮಿತಿಯು ಬಹ್ಲ್‌ ಅವರ ಮೇಲಿದ್ದ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತ್ತು.

ತಾಪ್ಸೀ ಪನ್ನು ಮತ್ತು ಅನುರಾಗ್ ಕಶ್ಯಪ್ ‘ದೋಬಾರಾ’ ಚಿತ್ರೀಕರಣವನ್ನು ಪುನರಾರಂಭಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...