Homeಮುಖಪುಟದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯ ಹಲವು ಕಚೇರಿಗಳ ಮೇಲೆ ಐಟಿ ದಾಳಿ

ದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯ ಹಲವು ಕಚೇರಿಗಳ ಮೇಲೆ ಐಟಿ ದಾಳಿ

ಕೇಂದ್ರ ಮತ್ತು ಗುಜರಾತ್ ಸರ್ಕಾರಗಳ ಕೋವಿಡ್ ನಿರ್ವಹಣೆಯಲ್ಲಿನ ವಿಫಲತೆ, ದಿನನಿತ್ಯದ ಸಾವು ನೋವುಗಳನ್ನು ಈ ಪತ್ರಿಕೆ ನೇರಾ ನೇರ ವರದಿ ಮಾಡಿತ್ತು..

- Advertisement -
- Advertisement -

ದೇಶದ ಅತಿ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲೊಂದಾದ ದೈನಿಕ್ ಭಾಸ್ಕರ್ ಪತ್ರಿಕೆಯ ಹಲವು ಕಚೇರಿಗಳ ಮೇಲೆ ಇಂದು ಮುಂಜಾನೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ದೈನಿಕ್ ಭಾಸ್ಕರ್‌ ಪತ್ರಿಕೆಯ ದೆಹಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ.

ದೈನಿಕ್ ಭಾಸ್ಕರ್ ಪತ್ರಿಕೆಯು ಕೋವಿಡ್‌ ಎರಡನೇ ಅಲೆಯ ದುರಂತಗಳ ಕುರಿತು ಸತತ ವರದಿಗಳನ್ನು ಪ್ರಕಟಿಸಿತ್ತು. ಮುಖ್ಯವಾಗಿ ಹಲವು ರಾಜ್ಯಗಳು ಕೋವಿಡ್ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಸರಣಿ ತನಿಖಾ ವರದಿಗಳನ್ನು ಪ್ರಕಟಿಸಿತ್ತು. ಶ್ಮಶಾನದಲ್ಲಿ ಉರಿಯುತ್ತಿರುವ ಚಿತೆಗಳ ಸಂಖ್ಯೆಗೂ ಸರ್ಕಾರಗಳು ತೋರಿಸುತ್ತಿರುವ ಕೋವಿಡ್ ಸಾವಿನ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸವಿರುವುದುನ್ನು ಇದು ಬಯಲಿಗೆಳೆದಿತ್ತು.

ಗುಜರಾತ್ ರಾಜ್ಯದ ಕೋವಿಡ್ ನಿರ್ವಹಣೆಯಲ್ಲಿನ ವಿಫಲತೆ, ದಿನನಿತ್ಯದ ಸಾವು ನೋವುಗಳನ್ನು ಈ ಪತ್ರಿಕೆ ನೇರಾ ನೇರ ವರದಿ ಮಾಡಿತ್ತು. ಒಂದು ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಶಸ್ವಿಯಾಗಿ ಕೋವಿಡ್ ಅಲೆಯನ್ನು ಎದುರಿಸಿದ್ದೇವೆ ಎಂದು ಹೊಗಳಿಕೊಳ್ಳುವ ಸಮಯದಲ್ಲಿಯೇ ಈ ಪತ್ರಿಕೆ ಸರ್ಕಾರ ವೈಫಲ್ಯಗಳನ್ನು ತನ್ನ ಮುಖಪುಟದಲ್ಲಿ ಬೊಟ್ಟು ಮಾಡಿ ತೋರಿಸುತ್ತಿತ್ತು. ಆ ಪತ್ರಿಕೆಯ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...