Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...