ಸಿಎಂ ಬಿ.ಎಸ್ ಯಡಿಯೂರಪ್ಪನವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರದು ಎನ್ನಲಾದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಮತ್ತು ಸಚಿವ ಯೋಗೇಶ್ವರ್ ಅವರ ವಿರುದ್ಧ ಪಕ್ಷದ ರಾಜ್ಯಾಧ್ಯಕ್ಷರಾಗಿ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್” ಎಂದು ಆರೋಪಿಸಿದೆ.
ಸಿಎಂ @BSYBJP ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ!
ಪಕ್ಷದ ರಾಜ್ಯಾಧ್ಯಕ್ಷರಾಗಿ
ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ.
ಏಕೆಂದರೆ ಸಂಚಿನ ಸೂತ್ರದಾರನೇ @nalinkateel!#BJPvsBJP
— Karnataka Congress (@INCKarnataka) July 19, 2021
ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಬಗ್ಗೆ ಯಡಿಯೂರಪ್ಪನವರಿಗೆ
ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿ ಪಕ್ಷದ ಮೀರ್ ಸಾದಿಕ್ @nalinkateel ಬಗ್ಗೆ @BSYBJP ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು.
ಆದರೆ @JagadishShettar ಹಾಗೂ @ikseshwarappa ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ!
ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ!#BJPvsBJP
— Karnataka Congress (@INCKarnataka) July 19, 2021
ಟ್ವಿಟರ್‌ನಲ್ಲಿ ಸದಾ ಆರೋಪ ಪ್ರತ್ಯಾರೋಪದಲ್ಲಿ ತೊಡಗುವ ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್‌ಗಳು ದೋಷಾರೋಪಣೆ ಮಾಡುತ್ತವೆ. ಸದ್ಯ ಕಾಂಗ್ರೆಸ್ ಪಕ್ಷವು ನಳಿನ್ ಕುಮಾರ್ ಕಟೀಲ್ ಅವರನ್ನು ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿರುವ ಮೀರ್ ಸಾದಿಕ್ ಎಂದು ಕರೆದಿದೆ. ಈ ಜಗಳ ಎಲ್ಲಿಗೆ ಹೋಗಿ ನಿಲ್ಲಲಿದೆ ಕಾದು ನೋಡಬೇಕಿದೆ.
ಇದನ್ನೂ ಓದಿ: ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್


