Homeಮುಖಪುಟಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್...

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್ ಬಾಬಾ

- Advertisement -
- Advertisement -

ನಾವು ಈ ವರ್ಷದ ಜುಲೈ ತಿಂಗಳಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೇರಿ ಇತರ ಬಿಜೆಪಿ ಮುಖಂಡರನ್ನು ರಹಸ್ಯವಾಗಿ ಭೇಟಿಯಾಗಿದ್ದು ನಿಜ. ಸಿಂಘು ಗಡಿಯಲ್ಲಿನಲ್ಲಿ ಧರಣಿ ನಿಲ್ಲಿಸಲು 10 ಲಕ್ಷ ರೂ ಮತ್ತು ಕುದುರೆಗಳ ಆಮಿಷವೊಡ್ಡಿದ್ದರು ಎಂದು ನಿಹಾಂಗ್ ಬಾಬಾ ಅಮನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಅಕ್ಟೋಬರ್ 15 ರಂದು ಸಿಂಘು ಗಡಿಯಲ್ಲಿ ನಿಹಾಂಗ್‌ಗಳಿಂದ ದಲಿತ ಲಖ್ಬೀರ್ ಸಿಂಗ್‌ ಬರ್ಬರ ಕೊಲೆಯಾದ ನಂತರ ಇದರಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಅದಕ್ಕೆ ಇಂಬು ಕೊಡುವಂತೆ ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಹೇಳಿಕೆ ನೀಡಿದ್ದಾರೆ.

“ನಾವು ನಾಲ್ಕು ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದಿಟ್ಟಿದ್ದೆವು. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, 2015ರ ಧರ್ಮಗ್ರಂಥ ಅಪವಿತ್ರಗೊಳಿಸಿರುವ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಬೇಕು ಮತ್ತು ನಿಹಾಂಗ್‌ಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಬೇಡಿಯಾಗಿತ್ತು. ಇವುಗಳನ್ನು ಈಡೇರಿಸಿದರೆ ನಾವು ಧರಣಿಯನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳಿ ಹಣದ ಆಮಿಷವನ್ನು ತಿರಸ್ಕರಿಸಿದ್ದೇವು. ಈ ಕುರಿತು ನಾವು ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೂ ಕೂಡ ಪತ್ರ ಬರೆದಿದ್ದೇವೆ” ಎಂದು ಅಮನ್ ಸಿಂಗ್ ಹೇಳಿದ್ದಾರೆ.

ಅವರು ನಿಮ್ಮ ರೈತರ ಜೊತೆ ಸಹ ಮಾತನಾಡಿದ್ದಾರ? ಎಂಬ ಪ್ರಶ್ನೆಗೆ ಅವರು, “ಸಚಿವರು ರೈತರ ಜೊತೆ ಮಾತನಾಡುವ ಅಗತ್ಯವಿರಲಿಲ್ಲ. ಏಕೆಂದರೆ ಅವರನ್ನು ಭೇಟಿಯಾಗಲು ನಾನೊಬ್ಬನೇ ಹೋಗಿರಲಿಲ್ಲ, ನನ್ನೊಡೆನ 10 ಜನ ರೈತರಿದ್ದರು” ಎಂದು ಉತ್ತರಿಸಿದ್ದಾರೆ.

ಲಖ್ಬೀರ್ ಸಿಂಗ್ ಕೊಲೆ ಪ್ರಕರಣದಲ್ಲಿ ಇದುವರೆಗೂ 4 ಜನ ನಿಹಾಂಗ್‌ಗಳ ಬಂಧನವಾಗಿದೆ. ಲಖ್ಬೀರ್ ಸಿಂಗ್ ಪ್ರತಿಭಟನಾ ಸ್ಥಳಕ್ಕೆ ಬಂದುದ್ದೇಕೆ, ಅವರನ್ನು ಕರೆ ತಂದವರು ಯಾರು? ಆತ ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಿದ್ದಕ್ಕೆ ಸಾಕ್ಷಿ ಏನು? ಆತನನ್ನು ಪೊಲೀಸರಿಗೆ ಏಕೆ ಒಪ್ಪಿಸಲಿಲ್ಲ ಎಂಬ ಪ್ರಶ್ನೆಗಳಿಗೆ ನಿಹಾಂಗ್‌ಗಳು ಇನ್ನು ಉತ್ತರಿಸಿಲ್ಲ. ಈ ಸಂದರ್ಭದಲ್ಲಿ ಬಾಬಾ ಅಮನ್ ಸಿಂಗ್ ಕೇಂದ್ರ ಸಚಿವರನ್ನು ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮುಂದುವರೆದು ಮಾತನಾಡಿರುವ ಅಮನ್ ಸಿಂಗ್, “ಇದೇ ಅಕ್ಟೋಬರ್ 27 ರಂದು ನವದೆಹಲಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದೇವೆ. ಆ ನಂತರ ನಾವು ಧರಣಿ ಮುಂದುವರೆಸಬೇಕೆ ಅಥವಾ ಅಂತ್ಯಗೊಳಿಸಬೇಕು ಎಂದು ನಿರ್ಧರಿಸುತ್ತೇವೆ. ಸಂಗತ್ ಹೊರಡಿ ಎಂದರೆ ನಾವು ಹೊರಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ನಮ್ಮ ಧರ್ಮಕ್ಕಾಗಿ ಹೋರಾಡುವುದು ಮೊದಲ ಆಯ್ಕೆ, ಎರಡನೇಯದು ರೈತರ ವಿಚಾರ ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಅಂದಿನ ರಹಸ್ಯ ಸಭೆ ನಡೆದಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿಯ ಜೊತೆಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಸಹ ಸಭೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ನಿಹಾಂಗ್ ಗುಂಪು ಮತ್ತು ಬಿಜೆಪಿ ನಾಯಕರ ನಡುವಿನ ಈ ರಹಸ್ಯ ಭೇಟಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...