Homeಮುಖಪುಟಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು- ಮುಖ್ಯಮಂತ್ರಿ ವಿ.ನಾರಾಯಣ ಸಾಮಿ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟಿನ ನಡುವೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ತೆಗೆದುಹಾಕಿದ್ದರು.

ಸದ್ಯ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ತೆಲಂಗಾಣದ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ನೇಮಿಸಲಾಗಿದೆ. ಉನ್ನತ ಹುದ್ದೆಯಿಂದ ತೆಗೆದುಹಾಕಿದ ನಂತರ ಕಿರಣ್ ಬೇಡಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು, ಇದು ಜೀವಮಾನದ ಅನುಭವ ಎಂದಿದ್ದಾರೆ.

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನನ್ನ ಕೆಲಸದ ಭಾಗವಾಗಿದ್ದ ಎಲ್ಲರಿಗೂ ಮತ್ತು ಎಲ್ಲಾ ಪುದುಚೇರಿಯ ಜನರಿಗೂ, ಸಾರ್ವಜನಿಕ ಅಧಿಕಾರಿಗಳಿಗೂ ಧನ್ಯವಾದಗಳು” ಎಂದು 71 ವರ್ಷದ ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಜೀವಮಾನದ ಅನುಭವಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಟೀಮ್ ರಾಜ್ ನಿವಾಸ್ (ರಾಜ್ ನಿವಾಸ್ ತಂಡ) ಸಾರ್ವಜನಿಕ ಹಿತಾಸಕ್ತಿಗಾಗಿ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂದು ಕಿರಣ್ ಬೇಡಿ ತಮ್ಮ ಧನ್ಯವಾದದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಏನೇ ಮಾಡಿದ್ದರು ಅದು ಪವಿತ್ರ ಕರ್ತವ್ಯ. ನನ್ನ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಎಂದಿದ್ದಾರೆ.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಜನವರಿಯಲ್ಲಿ ಆರೋಪಿಸಿದ್ದರು. “ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು. ಪುದುಚೇರಿಯಲ್ಲಿ ಜಾತ್ಯತೀತ ಪಕ್ಷಗಳ ಜನರು, ಕೋಮುವಾದಿ ಅಂಶಗಳನ್ನು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮತ್ತೊಮ್ಮೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಇನ್ನು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ವಿ.ನಾರಾಯಣ ಸಾಮಿ, “ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸುವ ಸಲುವಾಗಿ ನಮ್ಮ ಶಾಸಕರನ್ನು ಬೇಟೆಯಾಡುತ್ತಿದೆ. 3 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಯೋಜನೆಯ ಬಗ್ಗೆ ಜನರಿಗೆ ತಿಳಿದಿದೆ, ಮತದಾರರು 2021 ರ ಚುನಾವಣೆಯ ಸಮಯದಲ್ಲಿ ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದಿದ್ದಾರೆ.

ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ನಾಲ್ಕು ಕಾಂಗ್ರೆಸ್ ನಾಯಕರು ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...