Homeಮುಖಪುಟಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

- Advertisement -
- Advertisement -

ಇಂದಿಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ (ಮಲ ಬಾಚುವುದು) ಜಾರಿಯಲ್ಲಿರುವುದು ಭಾರತಕ್ಕೆ ನಾಚಿಕೆಗೇಡಿನ ವಿಷಯವಾಗಿದ್ದು, ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಆಗ್ರಹಿಸಿದ್ದಾರೆ.

ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್‌ನಿಂದಾಗುತ್ತಿರುವ ಅವಮಾನಗಳ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, “ಇಷ್ಟು ದಿನಗಳಾದರೂ ನಾವು ಈ ಪದ್ದತಿಯನ್ನು ಉಳಿಸಿಕೊಂಡಿರುವುದೇಕೆ? ಇತರ ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಿರುವುದರ ಬಗ್ಗೆ ಮಾತನಾಡುವ ನಾವು ಪೌರಕಾರ್ಮಿಕರಿಗೆ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳದಿರುವುದರ ಬಗ್ಗೆ ಏಕೆ ಮಾತನಾಡುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಬೇಕೆಂದು ಕೋರಿದ ಅವರು, “ನೀವು ಸ್ವಚ್ಛ ಭಾರತ ಅಭಿಯಾನ ನಡೆಸುತ್ತಿದ್ದೀರಿ. ಇದು ಸಹ ಸ್ವಚ್ಛ ಭಾರತದ ಭಾಗವಾಗಿದೆ. ಅದೇ ರೀತಿ ರೈಲ್ವೇ ನೌಕರರು ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಮಾಡುತ್ತಿರುವುದರ ಕುರಿತು ರೈಲ್ವೇ ಸಚಿವ ಪಿಯೂಶ್ ಗೋಯಲ್ ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.

ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಕೆಲಸ ಮಾಡುತ್ತಿರುವವರೆಗೆ ಗೌರವ ಮತ್ತು ಪುನರ್ವಸತಿ ಕಲ್ಪಿಸಿಕೊಡಬೇಕು. ಕಾನೂನಿನ ಪ್ರಕಾರ ಪೌರಕಾರ್ಮಿಕರ ರಕ್ಷಣೆಗೆ ಅಗತ್ಯ ಸಲಕರಣೆಗಳನ್ನು ನೀಡದ ಕಂಟ್ರಾಕ್ಟರ್‌ಗಳಿಗೆ ಶಿಕ್ಷೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಮಾಜದಲ್ಲಿ ಪೌರಕಾರ್ಮಿಕರು ಎದುರಿಸುತ್ತಿರುವ ತಾರತಮ್ಯದ ಬಗ್ಗೆ ಮಾತನಾಡಿದ ಅವರು, “ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಮಕ್ಕಳು ಈ ಕೆಲಸವನ್ನು ಮಾಡಲು ಬಯಸುವುದಿಲ್ಲ, ಆದರೆ ಅವರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಮತ್ತು ಅವರಿಗೆ ಸರಿಯಾಗಿ ಪುನರ್ವಸತಿ ಕಲ್ಪಿಸುತ್ತಿಲ್ಲ” ಎಂದು ಜಯಾ ಬಚ್ಚನ್ ಹೇಳಿದ್ದಾರೆ.


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...