Homeಮುಖಪುಟಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

ಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ತಮ್ಮದೇ ಸರಕಾರದ ವಿರುದ್ಧ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು ವಾಗ್ಧಾಳಿಯನ್ನು ನಡೆಸಿದ್ದಾರೆ.

ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಮರಾಠರ ಹಿಂಬಾಗಿಲ ಪ್ರವೇಶವನ್ನು ಪ್ರಶ್ನಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ. ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಕೇವಲ ಕಣ್ಣೊರೆಸುವ ಪ್ರಯತ್ನ ಎಂದು ಹೇಳಿದ್ದು, ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆಯೇ ಹೊರತು ಅಫಿಡವಿತ್‌ಗಳಿಂದಲ್ಲ ಎಂದು ಹೇಳಿದ್ದಾರೆ.

ಮರಾಠ ಕೋಟಾಕ್ಕೆ ಹೋರಾಟ ನಡೆಸುತ್ತಿದ್ದ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಇಂದು ಬೆಳಿಗ್ಗೆ ಅನಿರ್ದಿಷ್ಟಾವಧಿ ಉಪವಾಸವನ್ನು ಹಿಂತೆಗೆದುಕೊಂಡಿದ್ದರು.  ಮರಾಠ ಮೀಸಲಾತಿ ಕುರಿತು  ಕರಡು ಅಧಿಸೂಚನೆಯನ್ನು ಕೂಡ ಸರಕಾರ ಹೊರಡಿಸಿತ್ತು.

ಮಹರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಭುಜಬಲ್ ಈ ಬಗ್ಗೆ ಮಾತನಾಡಿದ್ದು, ರಾಜ್ಯ ಸರ್ಕಾರವು ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವಂತೆ ಹೊರಡಿಸಿರುವ ಕರಡು ಅಧಿಸೂಚನೆ ಕಣ್ಣಿಗೆ ಮಣ್ಣೆರಚುವಂತಿದೆ. ಒಬಿಸಿಗಳಿಗೆ ಅನ್ಯಾಯವಾಗುತ್ತಿದೆಯೇ ಎಂಬುವುದು ಅಧ್ಯಯನ ನಡೆಸಬೇಕಿದೆ. ಮರಾಠ ಸಮುದಾಯದ ಬುದ್ಧಿಜೀವಿಗಳೂ ಈ ಬಗ್ಗೆ ಯೋಚಿಸಬೇಕು ಎಂದ ಅವರು, ಒಬಿಸಿ ಮೀಸಲಾತಿಗೆ ಸಮುದಾಯ ಹಿಂಬಾಗಿಲ ಪ್ರವೇಶ ಮಾಡುತ್ತಿದೆ. ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ ಮತ್ತು ಅಫಿಡವಿತ್‌ಗಳಿಂದ ಅಲ್ಲ. ಈ ವಿಷಯವನ್ನು ಚರ್ಚಿಸಲು ಭಾನುವಾರ ಎಲ್ಲಾ ಒಬಿಸಿ ನಾಯಕರನ್ನು ಮಾತುಕತೆಗೆ ಆಹ್ವಾನಿಸಿರುವುದಾಗಿ ಭುಜಬಲ್ ಹೇಳಿದ್ದಾರೆ.

ದಲಿತರು ಮತ್ತು ಆದಿವಾಸಿಗಳು ಸಹ ಎಲ್ಲಾ ರಕ್ತ ಸಂಬಂಧಿಗಳಿಗೆ ಇದೇ ರೀತಿಯ ಬೇಡಿಕೆಯನ್ನು ಮಾಡಿದರೆ ಹೇಗೆ? ಮರಾಠರಿಗೆ ಉದ್ಯೋಗ ನೇಮಕಾತಿಯಲ್ಲಿ ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಮತ್ತು ಸಮುದಾಯದ ಸದಸ್ಯರಿಗೆ ಶೇಕಡಾ 100ರಷ್ಟು ಉಚಿತ ಶಿಕ್ಷಣವನ್ನು ನೀಡಬೇಕೆಂಬ ಜಾರಂಗೆಯ ಬೇಡಿಕೆಯ ಬಗ್ಗೆ ಅವರು ಪ್ರಶ್ನಿಸಿದ್ದಾರೆ. ಮರಾಠಿಗರೇ ಏಕೆ? ಬ್ರಾಹ್ಮಣರು ಸೇರಿದಂತೆ ಎಲ್ಲ ಜಾತಿಯವರಿಗೆ ಉಚಿತ ಶಿಕ್ಷಣ ನೀಡಲಿ ಎಂದು ಹೇಳಿದ್ದಾರೆ.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...