Homeಕರ್ನಾಟಕಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ದನ-ಕರುಗಳನ್ನು ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಧರ್ಮಸ್ಥಳ ಠಾಣೆಯ ಎಸ್‌ಐ ಅನಿಲ್ ಕುಮಾರ್ ನೇತೃತ್ವದ ತಂಡವು ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಖಚಿತ ಮಾಹಿತಿಯ ಹಿನ್ನೆಲೆ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8:45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಆ ವಾಹನಗಳನ್ನು ಪೊಲೀಸರು ತಪಾಸನೆ ನಡೆಸಿದಾಗ ಅದರಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು.

ಈ ವೇಳೆ ಪೊಲೀಸರು ವಾಹನದಲ್ಲಿದ್ದವರನ್ನು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಜಾನುವಾರುಗಳ ಅಂದಾಜು ಮೌಲ್ಯ 65 ಸಾವಿರ ರೂ. ಹಾಗೂ ವಾಹನಗಳ ಅಂದಾಜು ಮೌಲ್ಯ 7 ಲಕ್ಷ ರೂ. ಸೇರಿದಂತೆ ಒಟ್ಟು ರೂ 7.65 ಲಕ್ಷ ಮೌಲ್ಯದ ಸೊತ್ತುಗಳ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಗೋರಕ್ಷಣೆ ಹೆಸರಲ್ಲಿ ಪುನಿತ್ ಕೆರೆಹಳ್ಳಿಯಿಂದ ಮುಸ್ಲಿಂ ವ್ಯಕ್ತಿಯ ಕೊಲೆ: ಕುಟುಂಬಸ್ಥರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...