Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...